Yaduveer Wadiyar: ಚಾಮುಂಡಿ ಬೆಟ್ಟ ಎಂದೆಂದಿಗೂ ಹಿಂದೂಗಳದು: ಯದುವೀರ ಒಡೆಯರ್ ಗುಡುಗು
Chamundi Hills: ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ ʼಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲʼ ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ. ಶಾಸ್ತ್ರಸಮ್ಮತವಾಗಿ ಪವಿತ್ರಗೊಂಡು, ಕೋಟ್ಯಾಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು, ಇದೆ ಮತ್ತು ಎಂದೆಂದಿಗೂ ಇರುತ್ತದೆ ಎಂದು ಯದುವೀರ ಟ್ವೀಟ್ ಮಾಡಿದ್ದಾರೆ.

ಯದುವೀರ ಒಡೆಯರ್

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Chamundi Hills) ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿರುವ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಮೈಸೂರು ರಾಜವಂಶಸ್ಥ, ಬಿಜೆಪಿ ಸಂಸದ (BJP MP) ಯದುವೀರ್ ಒಡೆಯರ್ (Yaduveer Wadiyar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಹೇಳಿಕೆ ಅತ್ಯಂತ ದುಃಖಕರ ಎಂದಿರುವ ಅವರು, ಕಾಂಗ್ರೆಸ್ (Congress) ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ ಅಂತ ಕಿಡಿಕಾರಿದ್ದಾರೆ.
ಮೈಸೂರು ದಸರಾ (Mysore Dasara) ಉದ್ಘಾಟನೆಗೆ ಬಾನು ಮುಷ್ತಾಕ್ (Banu Mushtaq) ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್, ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಸಮಾಜದವ್ರು ಹೋಗ್ತಾರೆ, ಬರ್ತಾರೆ ಅಂತ ಹೇಳಿದ್ದರು. ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ ʼಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲʼ ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ. ಶಾಸ್ತ್ರಸಮ್ಮತವಾಗಿ ಪವಿತ್ರಗೊಂಡು, ಕೋಟ್ಯಾಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು, ಇದೆ ಮತ್ತು ಎಂದೆಂದಿಗೂ ಇರುತ್ತದೆ ಅಂತ ಅವರು ಟ್ವೀಟ್ ಮಾಡಿದ್ದಾರೆ.
ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ “ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ” ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ.
— Yaduveer Wadiyar (@yaduveerwadiyar) August 26, 2025
ಚಾಮುಂಡಿ ಬೆಟ್ಟ ಶಕ್ತಿಪೀಠ - ಶಾಸ್ತ್ರಸಮ್ಮತವಾಗಿ ಪವಿತ್ರಗೊಂಡು ಕೋಟ್ಯಾಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು, ಇದೆ ಮತ್ತು ಎಂದೆಂದಿಗೂ ಇರುತ್ತದೆ.… https://t.co/qy3JSh3uPU
ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ ಅಂತ ಯದುವೀರ ಒಡೆಯರ್ ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.
ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ಭಸ್ಮ
ಡಿಕೆಶಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ, ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿ ಬೆಟ್ಟ ಹಾಗೂ ಸಂಪ್ರದಾಯದ ದಸರೆಯನ್ನು ಬಳಸಿಕೊಳ್ಳಬೇಡಿ, ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ, ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಅಂತ ವಾರ್ನ್ ಮಾಡಿದ್ದಾರೆ.
ಪೈಪೋಟಿಯ ಮೇಲೆ ನೀವೂ, ನಿಮ್ಮ ಕಾಂಗ್ರೆಸಿಗರು ಹಿಂದೂ ಧರ್ಮದ ಅವಹೇಳನ, ಹಿಂದೂ ಧಾರ್ಮಿಕ ಕೇಂದ್ರಗಳ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದೀರಿ, ಇದೀಗ ಹಿಂದೂ ಪರಂಪರೆಯ ವಿಜಯ ದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ, ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು, ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಅಂತ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: DK Shivakumar: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್ ಮತ್ತೊಂದು ವಿವಾದ