Chandrashekhar Siddi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು
Self Harmng: ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ ಸಿದ್ದಿ ಅಲ್ಲೇ ಉಳಿದುಕೊಂಡಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ದಂಪತಿ ಕಲಹವೇ ಆತ್ಮಹತ್ಯೆ ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕಟ್ಟಿಗೆ ಪೊರಕೆಯಿಂದ ಪತ್ನಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಚಂದ್ರಶೇಖರ್ ಸಿದ್ದಿ

ಕಾರವಾರ: ಕನ್ನಡದ ಕಾಮಿಡಿ ಕಿಲಾಡಿಗಳು (Comedy kiladigalu) ಖ್ಯಾತಿಯ ಚಂದ್ರಶೇಖರ್ ಸಿದ್ದಿ (Chandrashekhar Siddi) ಆತ್ಮಹತ್ಯೆ (Self harming) ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಅವರ ಪತ್ನಿ ಪೊರಕೆ, ಕಟ್ಟಿಗೆಯಿಂದ ಚಂದ್ರಶೇಖರ ಸಿದ್ದಿಗೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಜುಲೈ 31 ರಂದು ಮಧ್ಯಾಹ್ನ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ದೂರು ನೀಡಿದ್ದರು.
ಕಾಮಿಡಿ ಕಿಲಾಡಿಗಳು ನಂತರ ಚಂದ್ರಶೇಖರ ಸಿದ್ದಿ ಕಾಮಿಡಿ ಶೋ, ಕೆಲವು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದು, ನಂತರ ಅವಕಾಶ ಸಿಗದೇ ನೊಂದಿದ್ದರು. ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ ಚಂದ್ರಶೇಖರ ಸಿದ್ದಿ(31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ ಸಿದ್ದಿ ಅಲ್ಲೇ ಉಳಿದುಕೊಂಡಿದ್ದರು. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ದಂಪತಿ ಕಲಹವೇ ಆತ್ಮಹತ್ಯೆ ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕಟ್ಟಿಗೆ ಪೊರಕೆಯಿಂದ ಪತ್ನಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ನನ್ನ ಮಗ ಚಂದ್ರಶೇಖರ್ ಮತ್ತು ಆತನ ಪತ್ನಿ ಕಮಲಾಕ್ಷಿಗೂ ಪದೇ ಪದೇ ಜಗಳ ಆಗುತ್ತಿತ್ತು ಎಂದು ಪುತ್ರನ ಸಾವಿನ ಬಗ್ಗೆ ಲಕ್ಷ್ಮೀ ಅನುಮಾನ ವ್ಯಕ್ತಪಡಿಸಿದ್ದರು. ನಂತರ ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಚಂದ್ರಶೇಖರ್ ತಾಯಿ ಲಕ್ಷ್ಮೀ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದಾರೆ.
ನಟನೆಯಲ್ಲಿ ಆಸಕ್ತಿ ಹೊಂದಿದ್ದ ಚಂದ್ರಶೇಖರ್ ಸಿದ್ಧಿ ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಶೋ ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ನಂತರ ಕೆಲವು ಧಾರವಾಹಿಗಳಲ್ಲಿ ಅಭಿನಯಿಸಿದ್ದರು. ಟಿವಿಯ ರಿಯಾಲಿಟಿ ಶೋಗಳು ಹಾಗೂ ಕಿರುತೆರೆಯಲ್ಲಿ ಹೆಚ್ಚಿನ ಅವಕಾಶಗಳು ಸಿಗದ ಹಿನ್ನೆಲೆಯಲ್ಲಿ, ಊರಿಗೆ ವಾಪಸಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಇದರಿಂದಾಗಿ ಕಳೆದ ಜನವರಿ ತಿಂಗಳಿಂದ ಮಾನಸಿಕವಾಗಿ ಜರ್ಜರಿತನಾಗಿದ್ದ ಚಂದ್ರಶೇಖರ್ ಸಿದ್ಧಿ ಪತ್ನಿ ಜತೆ ಗಲಾಟೆ ಮಾಡುತ್ತಿದ್ದರು.
ಇದನ್ನೂ ಓದಿ: Chandrashekhar Siddi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು