Anganwadi Timings: ತಾಪಮಾನ ಹೆಚ್ಚಳ: ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ
Anganwadi Timings: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಲಿರುವ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಿರುವ (Rising Temperature) ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ (Anganwadi Timings) ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್ (ICDS) ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆದೇಶ ಹೊರಡಿಸಿದೆ.
ಈ ಸುದ್ದಿಯನ್ನೂ ಓದಿ | BESCOM: ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳಿಗೆ 8 ಜಿಲ್ಲೆಗೆ ವಾಟ್ಸಾಪ್ ಸಂಖ್ಯೆ ನೀಡಿದ ಬೆಸ್ಕಾಂ
ರಾಜ್ಯದಲ್ಲಿ ಭಾರಿ ಬಿಸಿಲು; ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ
ಬೆಂಗಳೂರು: ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚುತ್ತಿರುವ (Rising temperature) ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಬೇಸಿಗೆಯಲ್ಲಿ (Summer) ಕಚೇರಿ ಕೆಲಸದ ಸಮಯದ ಬದಲಾವಣೆ ಮಾಡಲಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ (Government Office Timings) ಬದಲಾವಣೆ ಮಾಡಲಾಗಿದೆ.
ಕಚೇರಿ ಕೆಲಸದ ಸಮಯ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.
ಈ ಸುದ್ದಿಯನ್ನೂ ಓದಿ | CWKL: ನವರಸನ್ ನೇತೃತ್ವದ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ ಗೆ ನಾಳೆ ಚಾಲನೆ