ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ganesh Chaturthi: 1,080 ಪೊಲೀಸ್ ಸಿಬ್ಬಂದಿ ನಿಯೋಜನೆ; ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಲು ಎಸ್ಪಿ ಪದ್ಮನಿ ಸಾಹು ಮನವಿ

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು, ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸರು ನಿರಂತರ ನಿಗಾ ವಹಿಸ ಲಿದ್ದಾರೆ. ಹಬ್ಬಕ್ಕೂ ಮುನ್ನವೇ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಂತಿ ಸಭೆ ನಡೆಸಿ, ಗಣೇಶೋತ್ಸವ ಸಮಿತಿಗಳು, ವಿವಿಧ ಧಾರ್ಮಿಕ ಸಂಘಟನೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಲಾಗಿದೆ

ಚಿಕ್ಕಬಳ್ಳಾಪುರ: ಗಣೇಶ ಚತುರ್ಥಿ(Ganesh Chaturthi) ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು, ಮೆರವಣಿಗೆ ಮಾರ್ಗಗಳು ಹಾಗೂ ಜನದಟ್ಟಣೆ ಪ್ರದೇಶ ಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ತಿಳಿಸಿದರು.

ನಗರ ಹೊರವಲಯದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಗಣೇಶೋತ್ಸವದ ಶಾಂತಿಯುತ ಆಚರಣೆಗೆ 840 ನಾಗರಿಕ ಪೊಲೀಸ್ ಸಿಬ್ಬಂದಿ, 240 ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಇದನ್ನೂ ಓದಿ: Ganeshotsava: ಗಣೇಶೋತ್ಸವ: ಮಾರ್ಗಸೂಚಿ ಪಾಲನೆಗೆ ಫ್ಲೆಕ್ಸ್, ಡಿಜೆ ಮಾಲೀಕರಿಗೆ ಎಸ್ಪಿ ಸೂಚನೆ

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು, ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸರು ನಿರಂತರ ನಿಗಾ ವಹಿಸ ಲಿದ್ದಾರೆ. ಹಬ್ಬಕ್ಕೂ ಮುನ್ನವೇ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಂತಿ ಸಭೆ ನಡೆಸಿ, ಗಣೇಶೋತ್ಸವ ಸಮಿತಿಗಳು, ವಿವಿಧ ಧಾರ್ಮಿಕ ಸಂಘಟನೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಅನುಮತಿ ಪಡೆದು, ಸರ್ಕಾರದ ಮಾರ್ಗಸೂಚಿ ಮತ್ತು ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ ಹಬ್ಬ ಆಚರಿಸಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಗಣೇಶೋತ್ಸವ ನಡೆಸುವಂತೆ ಮನವಿ ಮಾಡಿದರು.

ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ರೌಡಿಶೀಟರ್‌ಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾ ಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಮತ್ತು ನಿಗಾ ಹೆಚ್ಚಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನಕಾರಿ ಅಥವಾ ಸುಳ್ಳು ಮಾಹಿತಿಗಳನ್ನು ಹರಡುವವರ ಮೇಲೂ ನಿಗಾ ಇರಲಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆ ಕಂಡುಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ಸೂಚಿಸಿದರು.

ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ವಿಶೇಷ ಭದ್ರತೆ ಕಲ್ಪಿಸಲಾಗಿದ್ದು, ಜನದಟ್ಟಣೆ ನಿಯಂತ್ರಣಕ್ಕಾಗಿ ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಧ್ವನಿವರ್ಧಕಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಬಳಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಂಟು ತಾಲ್ಲೂಕುಗಳಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ಸಂಘ–ಸಂಸ್ಥೆಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಲ್ಲ ಸಮುದಾಯಗಳ ಸಹಕಾರದೊಂದಿಗೆ ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಆಚರಿಸುವಂತೆ ಎಸ್ಪಿ ಪದ್ಮನಿ ಸಾಹು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗನ್ನಾಥ್ ರೈ, ಡಿವೈಎಸ್ಪಿ ಪ್ರಕಾಶ್ ಸೇರಿದಂತೆ ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.