ಚಿಕ್ಕಬಳ್ಳಾಪುರ: ಜೂ.21ರ ಯೋಗ ಜಾಗೃತಿಗಾಗಿ ಕರ ಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಜೂ.21 ರಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ(12th International Yoga Day)ಯನ್ನು“ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಏಪ್ರಿಲ್ 21ರಂದು ಯೋಗ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: Vishweshwar Bhat Column: ಅಳುವ ಕಡಲೊಳು ತೇಲಿಬಂದ ನಗೆಯ ಹಾಯಿದೋಣಿ !
ವೈ ಬ್ರೇಕ್ ಪ್ರೋ ಆಫ್ ಮುಖಾಂತರ ಅತಿ ಹೆಚ್ಚು ಜನರಿಗೆ ಯೋಗಾಭ್ಯಾಸವನ್ನು ತಲುಪಿಸ ಲಾಗುತ್ತಿದೆ. “ಯೋಗ 365” ನಿಯಮಿತ ವರ್ಷಪೂರ್ತಿ ಯೋಗಾಭ್ಯಾಸದ ಉತ್ತೇಜನ ನೀಡುವ ಕಾರ್ಯಕ್ರಮ ಇದಾಗಿದೆ.
“14 ದಿನಗಳ ಉಚಿತ ಯೋಗ ತರಬೇತಿ”ಗಳನ್ನು ಆನ್ ಲೈನ್ ನಲ್ಲಿ ಆಯುಷ್ ಮಂತ್ರಾ ಲಯದ ಅಧಿಕೃತ ಪೋರ್ಟಲ್‌ನಲ್ಲಿ ನೀಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ನೋಂದಣಿ ಮಾಡಿಕೊಂಡು ಯೋಗಾಭ್ಯಾಸ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿ ಯಾಗಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡುವ ಜೊತೆಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಇಂದು ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಪ್ರಭಾರ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಂದರರಾಜ.ಎ.ಎಲ್ ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.