ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ಸಹಕಾರದಿಂದ 4ನೇ ವರ್ಷದ ಮಹಾಶಿವರಾತ್ರಿ ಯನ್ನು ಸದ್ಗುರು ಸನ್ನಿಧಿಯಲ್ಲಿ ಆಚರಿಸಲಾಗುತ್ತಿದ್ದು ಕೊಯಂಬತ್ತೂರಿನ ಕಾರ್ಯಕ್ರಮದ ನೇರ ಪ್ರಸಾರವನ್ನು ದೊಡ್ಡಪರದೆಯಲ್ಲಿ ಅಹೋರಾತ್ರಿ ಪ್ರದರ್ಶಿಸಲಾಗುವುದು. ಲಕ್ಷ ಮಂದಿ ಕೂರ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಈಶಾ ಸನ್ನಿಧಾನದಲ್ಲಿ ಮಾಡಲಾಗಿದೆ ಎಂದು ಸ್ವಾಮಿ ವಿಮೋಹಾನಂದ ಸ್ವಾಮೀಜಿ ತಿಳಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕೊಯಂಬತ್ತೂರಿನ ಈಶ ಯೋಗ ಕೇಂದ್ರದಲ್ಲಿ ಸದ್ಗುರು ಅವರ ಉಪಸ್ಥಿತಿಯಲ್ಲಿ 33ನೇ ಮಹಾ ಶಿವರಾತ್ರಿ ಆಚರಣೆ ನಡೆಯಲಿದೆ. ಆಚರಣೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ ಯಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Chikkaballapur News: ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ತಪ್ಪಿಸಲು ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆಯಲು ಡಿ.ಸಿ.ಸೂಚನೆ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್(Maharashtra Chief Minister Devendra Fadnavis), ಮಾಹಿತಿ ಮತ್ತು ಪ್ರಸಾರ ಸಚಿವ ಎಲ್.ಮುರುಗನ್(Information and Broadcasting Minister L. Murugan) ಹಾಗೂ ಇತರ ಪ್ರಮುಖ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸ ಲಿದ್ದಾರೆ.
ಮಹಾಶಿವರಾತ್ರಿ ಆಚರಣೆಯ ನೇರ ಪ್ರಸಾರವನ್ನು ಸದ್ಗುರು ಸನ್ನಿಧಿಯಲ್ಲಿ ಮಾಡಲಾಗುತ್ತದೆ. ಈ ಕಾರ್ಯಕ್ರಮವು 100ಕ್ಕೂ ಹೆಚ್ಚು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, 23 ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ಲಭ್ಯವಿರುತ್ತದೆ. ಈ ಬಾರಿ 14 ಕೋಟಿಗೂ ಹೆಚ್ಚು ವೀಕ್ಷಕರನ್ನು ತಲು ಪುವ ನಿರೀಕ್ಷೆಯಿದೆ. ಬರುವ ಭಕ್ತರಿಗೆ ಅನ್ನಪ್ರಸಾದ ಲಭ್ಯವಿರುತ್ತದೆ ಹಾಗೂ ರುದ್ರಾಕ್ಷಿಯನ್ನು ವಿತರಿಸಲಾಗುತ್ತದೆ ಎಂದರು.
ಪಾರ್ಕಿಂಗ್: ಈ ಬಾರಿ ಭಕ್ತರಿಗೆ ಅನುಕೂಲವಾಗುವಂತೆ ಯೋಗ ದ್ವಾರದಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಉಚಿತ ಶಟಲ್ ಸೌಲಭ್ಯವನ್ನು ಕೂಡ ಆಯೋಜಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಹೊರಠಾಣೆ: ಭಕ್ತರು ಹಾಗೂ ಸುತ್ತಮುತ್ತಲಿನ ಜನರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಪೊಲೀಸ್ ಇಲಾಖೆಯು ಹೊಸ ಪೊಲೀಸ್ ಹೊರಠಾಣೆಯನ್ನು ತೆರೆದಿದ್ದಾರೆ.
ಸ್ವಯಂಸೇವಕರು: ಈಶದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ಸ್ವಯಂಸೇವಕರು ಆಯೋಜಿಸುತ್ತಾರೆ. ಈ ಕಾರ್ಯಕ್ರಮಕ್ಕೂ ಬಹಳಷ್ಟು ಸ್ವಯಂಸೇವಕರು, 300 ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಕೆಡಿಟ್‌ಗಳು, ಪೊಲೀಸ್ ಸಿಬ್ಬಂದಿಗಳೂ ಸಹಕರಿಸಲಿದ್ದಾರೆ ಎಂದರು.
2 ಆಂಬುಲೆನ್ಸ್ ಹಾಗೂ ಮೆಡಿಕಲ್ ಟೆಂಟ್ಸ್ , ಅಗ್ನಿಶಾಮಕ ಹಾಗೂ ತುರ್ತು ಸೇವೆಗಳು ಲಭ್ಯ ವಿರುತ್ತವೆ. ಶೌಚಾಲಯಗಳು: ಈಗಿರುವ ಶೌಚಾಲಯಗಳ ಜೊತೆಗೆ ಹೆಚ್ಚುವರಿ ಶೌಚಾಲಯಗಳೂ ಲಭ್ಯವಿರುತ್ತವೆ. ಕಳೆದ ವರ್ಷ ಸುಮಾರು 2 ಲಕ್ಷ ಜನರು ಭಾಗವಹಿಸಿದ್ದರು. ಈ ವರ್ಷ ಸುಮಾರು 3 ಲಕ್ಷ ಭಕ್ತರನ್ನು ನಿರೀಕ್ಷಿಸುತ್ತಿದ್ದೇವೆ ಎಂದರು.