ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲೆಯಲ್ಲಿ ಶೇ.51ರಷ್ಟು ಮಳೆ ಕೊರತೆ; ಮುನ್ನೆಚ್ಚರಿಕೆ ಕ್ರಮಕ್ಕೆ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ಮಂಜುಳ ಸೂಚನೆ

ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಖಾಸಗಿ ಕೊಳವೆ ಬಾವಿಗಳ ಮಾಲೀಕರ ಸಹಕಾರ ಪಡೆದು ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಈ ವರ್ಷ ಶೇ.51ರಷ್ಟು ಮಳೆ ಕೊರತೆಯಾಗಿದ್ದು, ಮುಂದಿನ ಎರಡು ತಿಂಗಳಲ್ಲಿಯೂ ಮಳೆ ಬಾರದಿದ್ದರೆ 285 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಆತಂಕ ಎದುರಾಗಿದೆ. ಈಗಾಗಲೇ 48 ಗ್ರಾಮಗಳು ಹಾಗೂ ನಗರ ಪ್ರದೇಶಗಳ 11 ವಾರ್ಡ್‌ಗಳಲ್ಲಿ ನೀರಿನ ಅಭಾವ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ, ಪರ್ಯಾಯ ನೀರಿನ ಮೂಲಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್. ಮಂಜುಳ ಸೂಚನೆ ನೀಡಿದ್ದಾರೆ.

ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಖಾಸಗಿ ಕೊಳವೆಬಾವಿಗಳ ಮಾಲೀಕರ ಸಹಕಾರ ಪಡೆದು ನೀರು ಪೂರೈಕೆಗೆ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: Chikkaballapur News: ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಕಾನೂನು ಪಾಲನೆಗೆ ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯ ಎಂಟು ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಲಭ್ಯತೆಯ ಮೇಲೆ ನಿರಂತರ ನಿಗಾ ವಹಿಸಬೇಕು. ಪ್ರಸ್ತುತ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳು ಮತ್ತು ವಾರ್ಡ್‌ಗಳಿಗೆ ಆದ್ಯತೆ ನೀಡಿ, ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕೊರತೆಯನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ರಸ್ತೆ ಬದಿಯ ತ್ಯಾಜ್ಯ ತೆರವಿಗೆ ಅಭಿಯಾನ

ಜಿಲ್ಲೆಯ ನಗರಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ಇತರ ತ್ಯಾಜ್ಯ ಸಂಗ್ರಹವಾಗುತ್ತಿರುವುದನ್ನು ತಡೆಯಲು ವಿಶೇಷ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಡಾ. ಮಂಜುಳ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಸ ಸಂಗ್ರಹಣಾ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ವ್ಯವಸ್ಥೆಯನ್ನು ಮೇಲಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ, ವಾಹನಗಳು ನಿಗದಿತ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ರಸ್ತೆ ಬದಿಗಳಲ್ಲಿ ತ್ಯಾಜ್ಯ ವಿಲೇವಾರಿಯಾಗದಂತೆ ಕ್ರಮ ಕೈಗೊಂಡು ನಗರಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

13cbpm9d ಒಕ

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಗೂ ಮುನ್ನ ಚಿಂತಾಮಣಿ ತಾಲ್ಲೂಕಿನ ಕೋಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸಂತ ಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕೆ. ರಾಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಉದ್ಯಾನ ವೀಕ್ಷಿಸಿದರು. 

ಬಳಿಕ ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಅಂಬೇಡ್ಕರ್ ಭವನ ಹಾಗೂ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.