76th Republic day: 76ನೇ ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಇತರ ಸುದ್ದಿಗಳು
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ಮಂಜುಳ ಭಾಗವಹಿಸಲಿದ್ದಾರೆ
Source : Chikkaballapur Reporter
ಚಿಕ್ಕಬಳ್ಳಾಪುರ : ಜಿಲ್ಲಾಡಳಿತ ವತಿಯಿಂದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸ ಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಸಕರಾದ ಪಿ.ಇ ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್.ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ಮಂಜುಳ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.
ಕಡಿಮೆ ವೆಚ್ಚದ ಹಣ್ಣುಮಾಗಿಸುವ ಘಟಕ
ಚಿಕ್ಕಬಳ್ಳಾಪುರ : ಇತ್ತೀಚಿನ ದಿನಗಳಲ್ಲಿ ಇಥಲೀನ್ ಗ್ಯಾಸ್ ಅನ್ನು ಬಳಕೆ ಮಾಡಿಕೊಂಡು ಹಣ್ಣು ಮಾಗಿಸುವ ವಿಧಾನವು ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಿದ್ದು, ಸುಸಜ್ಜಿತವಾದ ಹಣ್ಣು ಮಾಗಿಸುವ ಘಟಕಗಳನ್ನು ನಿರ್ಮಿಸಲು ಹೆಚ್ಚಿನ ಬಂಡವಾಳದ ಅವಶ್ಯಕತೆ ಇರುವುದನ್ನು ಮನಗಂಡು ಬೆಂಗ ಳೂರಿನ ಐಐಹೆಚ್‌ಆರ್ ಸಂಸ್ಥೆಯವರು ಸಣ್ಣ ಹಾಗೂ ಅತೀಸಣ್ಣ ರೈತರಿಗೆ ಕಡಿಮೆ ವೆಚ್ಚದ ಸರಳ ಹಾಗೂ ಸುಲಭವಾಗಿ ಬಳಸಬಹುದಾದ ಹಣ್ಣು ಮಾಗಿಸುವ ತಾಂತ್ರಿಕತೆಯನ್ನು ಅಭಿವೃದ್ದಿ ಪಡಿಸಿ ರುತ್ತಾರೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ತೋಟ ಗಾರಿಕೆ ಇಲಾಖೆವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರತಿ ಫಲಾನುಭವಿಗೆ, ಕುಟುಂಬಕ್ಕೆ ೦.೨ ರಿಂದ ೨.೦೦ ಹೆಕ್ಟೇರ್ ವಿಸ್ತೀರ್ಣಕ್ಕೆ ೧ ಟನ್ ಸಾಮರ್ಥ್ಯದ ಹಣ್ಣು ಮಾಗಿಸುವ ಘಟಕಗಳಿಗೆ ಘಟಕ ವೆಚ್ಚ ರೂ. ೬೫೦೦ ರ ಶೇ.೫೦ ರಂತೆ ರೂ.೩೨೫೦ ಸಹಾಯಧನ ನೀಡಲಾಗು ವುದು. ಪ್ರತಿ ಫಲಾನುಭವಿಗೆ ಎರಡು ಘಟಕಗಳಿಗೆ ಸಹಾಯಧನವನ್ನು ನೀಡಲಾಗುವುದು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಹಾಗೂ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳ ದೂ.ಸಂ: ಚಿಕ್ಕಬಳ್ಳಾಪುರ–೯೯೧೬೩೭೫೨೧೬, ಚಿಂತಾಮಣಿ–೯೩೫೩೪೫೫೩೮೯, ಗೌರಿಬಿದನೂರು–೭೨೦೪೪೬೨೩೦೮, ಶಿಡ್ಲಘಟ್ಟ–೯೪೪೮೮೨೫೧೦೧, ಬಾಗೇಪಲ್ಲಿ– ೯೪೪೯೩೫೨೧೩೯, ಗುಡಿಬಂಡೆ–೮೧೪೭೪೬೪೧೭೭ ಅನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಚಿಕ್ಕಬಳ್ಳಾಪುರ: ೨೦೨೪-೨೫ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ)ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವ ರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಕೊನೆಯ ದಿನಾಂಕ:೦೫-೦೨-೨೦೨೫ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ ಅನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಎಸ್.ಬಿ-೪ ೨ನೇ ಮಹಡಿ, ಶಿಡ್ಲಘಟ್ಟ ರಸ್ತೆ ಚಿಕ್ಕಬಳ್ಳಾಪುರ ಅಥವಾ ದೂರವಾಣಿ ಸಂ: ೦೮೧೫೬-೨೭೭೦೫೩, ದೂರವಾಣಿ ಸಂಖ್ಯೆ :೮೦೫೦೭೭೦೦೦೪ ಗೆ ಸಂಪರ್ಕಿಸಬಹುದು.