ಗೌರಿಬಿದನೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಹೊಸ ದಿಗಂತ’ ಯೋಜನೆ ಯಡಿ ನೂತನವಾಗಿ ದಾಖಲಾದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ‘ಫ್ರೆಶರ್ಸ್ ಒರಿಯಂಟೇಶನ್’ (ದಿಕ್ಸೂಚಿ) ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.
ಸರ್ಕಾರಿ ಎಸ್‌ಎಸ್‌ಇಎ ಪಿಯು ಕಾಲೇಜಿನ ಪ್ರಾಂಶುಪಾಲ ಜಿ.ವಿ. ಶ್ರೀನಿವಾಸ್ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನಕ್ಕೆ ಹೊಂದಿಕೊಳ್ಳುವುದರ ಜತೆಗೆ ಜೀವನ ಕೌಶಲ್ಯ, ತಾರ್ಕಿಕ ಚಿಂತನೆ ಹಾಗೂ ಡಿಜಿಟಲ್ ಸಾಕ್ಷರತೆ ಬೆಳೆಸಿಕೊಳ್ಳಬೇಕು. ಶೈಕ್ಷಣಿಕ ಪರಿವರ್ತನೆಗೆ ಅಗತ್ಯವಾದ ಮಾರ್ಗದರ್ಶನ ಪಡೆದುಕೊಂಡು ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: Chikkaballapur News: ಯಾದವ ಸಮುದಾಯದ ಸಂಘಟನೆ, ಏಳಿಗೆಗೆ ಒಗ್ಗಟ್ಟು ಅಗತ್ಯ: ಡಿ.ಟಿ.ಶ್ರೀನಿವಾಸ್
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಸ್.ವೆಂಕಟಾಚಲಪತಿ ಮಾತ ನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಶೈಕ್ಷಣಿಕ ಸೌಲಭ್ಯಗಳು ಹಾಗೂ ‘ಹೊಸ ದಿಗಂತ’ ಯೋಜನೆಯಡಿ ದೊರೆ ಯುವ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಭವಿಷ್ಯ ರೂಪಿಸಿ ಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಐಕ್ಯೂಎಸಿ ಸಂಚಾಲಕ ಡಾ.ವೆಂಕಟೇಶ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣ, ಕಾಲೇಜಿನ ನಿಯಮಾವಳಿಗಳು ಹಾಗೂ ಜೀವನ ಕೌಶಲ್ಯಗಳ ಕುರಿತು ಮಾಹಿತಿ ನೀಡಿದರು.
ಉಪನ್ಯಾಸಕರಾದ ಡಾ.ರಾಜಶೇಖರ ರೆಡ್ಡಿ, ರಮೇಶ್ ಜಿ.ಕೆ., ರಘು ಕುಮಾರ್ ಟಿ., ಡಾ.ಜಿ.ಎಸ್. ಅಶ್ವತ್ಥ ನಾರಾಯಣ, ಮನೋಹರ ಜಿ.ಎನ್. ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.