ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

K H Puttaswamy Gowda: ಅಭಿವೃದ್ಧಿ ಮೂಲಕವೇ ವಿರೋಧಿಗಳಿಗೆ ಉತ್ತರ: ಶಾಸಕ ಪುಟ್ಟಸ್ವಾಮಿಗೌಡ

ನಗರದಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಪ್ರವಾಸಿ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳೆಯ ಪ್ರವಾಸಿ ಮಂದಿರ ಕಟ್ಟಡ ತೆರವುಗೊಳಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಮುಂದಾದರೂ ಮಾಜಿ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಅಡ್ಡಿಪಡಿಸುತ್ತಿದ್ದಾರೆ

ಗೌರಿಬಿದನೂರು: “ನಾನು ಅಭಿವೃದ್ಧಿ ಕಾರ್ಯಗಳ ಮೂಲಕ ವಿರೋಧಿಗಳಿಗೆ ಉತ್ತರ ನೀಡುತ್ತೇ ನೆಯೇ ಹೊರತು, ಮಾಜಿ ಶಾಸಕ ಶಿವಶಂಕರರೆಡ್ಡಿ ಅವರಂತೆ ವೈಯಕ್ತಿಕವಾಗಿ ಹಾಗೂ ಕೀಳು ಮಟ್ಟದ ಭಾಷೆಯಲ್ಲಿ ಮಾತನಾಡುವುದಿಲ್ಲ” ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ (MLA K H Puttaswamy Gowda)ತಿರುಗೇಟು ನೀಡಿದರು.

ನಗರದಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಪ್ರವಾಸಿ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳೆಯ ಪ್ರವಾಸಿ ಮಂದಿರ ಕಟ್ಟಡ ತೆರವುಗೊಳಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಮುಂದಾದರೂ ಮಾಜಿ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಶಾಂತಿ ಕಾಪಾಡುವುದು ತಮ್ಮ ಆದ್ಯತೆಯಾಗಿದ್ದು, ವಿರೋಧಿಗಳಿಂದ ಯಾವುದೇ ಪ್ರಚೋದನೆ ಎದುರಾದರೂ ಶಾಂತ ರೀತಿಯಲ್ಲಿ ವರ್ತಿಸುವಂತೆ ಕಾರ್ಯಕರ್ತರಿಗೆ ಸೂಚಿಸಿರುವು ದಾಗಿ ಹೇಳಿದರು. ತಮ್ಮನ್ನು ತಾಲ್ಲೂಕಿನಲ್ಲಿ ಉಳಿಸಬೇಕೋ, ಮನೆಗೆ ಕಳುಹಿಸಬೇಕೋ ಎಂಬುದನ್ನು ಜನರೇ ನಿರ್ಧರಿಸಬೇಕು ಎಂದರು.

ಇದನ್ನೂ ಓದಿ:K H Puttaswamy Gowda: ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ; ಶೀಘ್ರದಲ್ಲೇ ಮತ್ತೆ 100 ಕೋಟಿ ರೂಪಾಯಿ ಅನುದಾನ

ತಾಲ್ಲೂಕಿಗೆ ಬರುವ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅನುಕೂಲವಾಗುವಂತೆ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ತಾಲ್ಲೂಕುಗಳಿಗಿಂತ ಉತ್ತಮ ಪ್ರವಾಸಿ ಮಂದಿರ ನಿರ್ಮಿಸು ವುದು ತಮ್ಮ ಕನಸಾಗಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು. ಮಾದರಿ ನಗರಸಭೆ ಕಟ್ಟಡ, ಬಸ್ ನಿಲ್ದಾಣ ನಿರ್ಮಾಣದ ಯೋಜನೆಯೂ ಇದೆ. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ 12 ಸೇತುವೆ ನಿರ್ಮಿಸಲಾಗಿದ್ದು, 60–70 ಗ್ರಾಮಗಳಿಗೆ ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ₹100 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಗುರಿಯಿದೆ ಎಂದರು.

ಚಿಮುಲ್ ನಿರ್ದೇಶಕ ಕಾಂತರಾಜು ಮಾತನಾಡಿ, ಶಿವಶಂಕರರೆಡ್ಡಿ ಅವರು ಅಭಿವೃದ್ಧಿ ವಿಚಾರ ಬಿಟ್ಟು ವೈಯಕ್ತಿಕ ಟೀಕೆಗೆ ಇಳಿದಿದ್ದಾರೆ ಎಂದು ಆರೋಪಿಸಿದರು. ಶಾಸಕರ ಮೂರು ವರ್ಷದ ಅಭಿವೃದ್ಧಿ ಹಾಗೂ ಮಾಜಿ ಶಾಸಕರ 25 ವರ್ಷದ ಅವಧಿಯ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು.

ಮುಖಂಡ ಅಶೋಕ್ ಕುಮಾರ್, ಶಾಸಕರ ಅಭಿವೃದ್ಧಿ ಕಾರ್ಯಗಳಿಂದ ವಿರೋಧಿಗಳಿಗೆ ಅಸಮಾಧಾನ ಉಂಟಾಗಿದೆ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅರವಿಂದ್, ಪೌರಾಯುಕ್ತ ರಮೇಶ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.