ಚಿಕ್ಕಬಳ್ಳಾಪುರ : ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮ ವನ್ನು ಅಕ್ಟೋಬರ್ ೭ ರಂದು ನಗರದ ಕನ್ನಡ ಭವನದಲ್ಲಿ ಸಂಭ್ರಮ ಸಡಗರ ಹಾಗೂ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್‌ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿAದ ಸಲಹೆಗಳನ್ನು ಸ್ವೀಕರಿಸಿದ ನಂತರ ಅವರು ಮಾತನಾಡಿದರು.
ಜಯಂತಿ ಅಂಗವಾಗಿ ಇದೆ ತಿಂಗಳ ಕೊನೆಯ ವಾರದಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಇರುವ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ಅಥವಾ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿಯಂದು (ಅಕ್ಟೋಬರ್ ೭ ರಂದು) ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಶ್ರೀರಂಗನಾಥ ಸ್ವಾಮಿ ದೇವಾಲಯದಿಂದ ಬಿಬಿ ರಸ್ತೆ ಮೂಲಕ ಕನ್ನಡ ಭವನದವರೆಗೆ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳು ಹಾಗೂ ಜಾನಪದ ಕಲಾ ತಂಡಗಳೊAದಿಗೆ ಬ್ರಹತ್ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Chirag Paswan: ಚುನಾವಣೆಗೂ ಮುನ್ನವೇ ಮೈತ್ರಿಯಲ್ಲಿ ಬಿರುಕು; ನಿತೀಶ್ ಕುಮಾರ್ ವಿರುದ್ಧ ಕಿಡಿ ಕಾರಿದ ಪಾಸ್ವಾನ್
ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಮುದಾಯದ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಸಮುದಾಯದ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಬೇಕು ಜೊತೆಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೈಗೊಳ್ಳುವ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಹ ಅಂದು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಶಾಲಾ ಕಾಲೇಜು ಸರ್ಕಾರಿ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಿ, ನಂತರ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಬೇಕು.
ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ ಮತ್ತು ಅಲಂಕಾರ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ, ಪೋಲೀಸ್ ಬಿಗಿ ಭದ್ರತೆ, ಮಧ್ಯಾಹ್ನದ ಉಪಹಾರ, ನಗರದ ಸ್ವಚ್ಚತೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಕಲಾತಂಡಗಳೊಂದಿಗೆ ಮೆರವಣಿಗೆ, ಸಾಧಕರ ಆಯ್ಕೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಮಿತಿಗಳನ್ನು ರಚಿಸಿ ಸಮುದಾಯದ ಮುಖಂಡರಿಗೆ ಮತ್ತು ಅಧಿಕಾರಿಗಳಿಗೆ ಇಲಾಖಾವಾರು ಕಾರ್ಯಭಾರವನ್ನು ಹಂಚಿಕೆ ಮಾಡಿ ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿ ಗೊಳಿಸಲು ತಿಳಿಸಿದರು.
ಜಯಂತ್ಯೋತ್ಸವಕ್ಕೆ ಯಾವುದೇ ಲೋಪದೋಷವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸು ವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಂಬಂಧ ಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೀಡಿದರು.
ಜಿಲ್ಲೆಯ ಸಮಸ್ತ ನಾಗರಿಕರು, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ರೈತಬಾಂಧವರು, ಜನಪ್ರತಿನಿಧಿನಗಳು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಈ ವೇಳೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಪೊಲೀಸ್ ಉಪಾಧೀಕ್ಷಕರಾದ ಶಿವ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್, ತಹಸೀಲ್ದಾರ್ ರಶ್ಮಿ, ಜಿಲ್ಲಾ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಸುಬ್ಬರಾಯಪ್ಪ, ಪ್ರಧಾನ ಕಾರ್ಯದರ್ಶಿ ಗವಿರಾಯಪ್ಪ, ಕಾರ್ಯಾಧ್ಯಕ್ಷ ಕೆ.ಟಿ ನಾರಾಯಣಸ್ವಾಮಿ, ಕೆ. ಆವಲಕೊಂಡರಾಯಪ್ಪ, ಎಸ್.ಎನ್. ಅಶ್ವತ್ ನಾರಾಯಣ, ಪಿ. ಮುನಿ ವೆಂಕಟಸ್ವಾಮಿ, ಕೆ.ಎನ್.ಎಸ್ ನಾರಾಯಣಸ್ವಾಮಿ, ನಾಗರಾಜಪ್ಪ, ಸಮುದಾಯ ಮುಖಂಡರಾದ ಅರುಣ್, ರಘು, ಅಶ್ವತ್ಥನಾರಾಯಣ, ಪಿ ಮುನಿವೆಂಕಟಸ್ವಾಮಿ, ನಂಜುAಡಯ್ಯ, ಮೂರ್ತಿ ಎಂ, ನರಸಿಂಹರಾಜು ವಾಲ್ಮೀಕಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.