MLA KH Puttaswamy Gowda: ರೈತನಿಗೆ ಆಸರೆಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಇಂದು ಫಲಾನುಭವಿಗಳ ಬೃಹತ್ ಸಮಾವೇಶ : ಶಾಸಕ ಪುಟ್ಟಸ್ವಾಮಿಗೌಡ
ಕೃಷಿ ಚಟುವಟಿಕೆಗಳಿಗೆ ನೆರವಾಗಲು ಸರ್ಕಾರದ ಸಹಾಯಧನದಲ್ಲಿ ಕೃಷಿ ಇಲಾಖಾ ವತಿಯಿಂದ ಟ್ರ‍್ಯಾಕ್ಟರ್, ಉಳಿಮೆ ಯಂತ್ರ,ಕಳೆ ನಾಶಕ ಯಂತ್ರ,ರೈತರ ಬೆಳೆಗಳಿಗೆ ನೆರವಾಗಲು ಹನಿ ನೀರಾವರಿ ಉಪಕರಣಗಳು, ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಂದ ನೀರೆತ್ತಲು ಪಂಪು ಮೋಟಾರು, ಕೇಬಲ್, ಪೈಪು ,ವಿದ್ಯುತ್ ಉಪಕರಣಗಳನ್ನು ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ
ದೇಶದ ಬೆನ್ನೆಲುಬಾದ ರೈತ ಇಂದು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾನೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ರೈತನಿಗೆ ಆಸರೆಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಇಂದು ಫಲಾನುಭವಿಗಳ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ತಿಳಿಸಿದರು -
ಗೌರಿಬಿದನೂರು: ದೇಶದ ಬೆನ್ನೆಲುಬಾದ ರೈತ ಇಂದು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾನೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ರೈತನಿಗೆ ಆಸರೆಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಇಂದು ಫಲಾನುಭವಿಗಳ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ(MLA KH Puttaswamy Gowda)ರು ತಿಳಿಸಿದರು.
ಅವರು ನಗರದಲ್ಲಿನ ನೇತಾಜೀ ಕ್ರೀಡಾಂಗಣದಲ್ಲಿ ಗೌರಿಬಿದನೂರು ಕ್ಷೇತ್ರದ ವ್ಯಾಪ್ತಿಯ ವಿವಿಧ ಇಲಾಖೆಗಳಲ್ಲಿ ವೈಯಕ್ತಿಕ ಸೌಲಭ್ಯ ಪಡೆಯಲು ಆಯ್ಕೆಯಾಗಿರುವ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಉದ್ಘಾಟನೆ ನಡೆಸಿ ಮಾತನಾಡಿದರು.
ಕೃಷಿ ಚಟುವಟಿಕೆಗಳಿಗೆ ನೆರವಾಗಲು ಸರ್ಕಾರದ ಸಹಾಯಧನದಲ್ಲಿ ಕೃಷಿ ಇಲಾಖಾ ವತಿಯಿಂದ ಟ್ರ‍್ಯಾಕ್ಟರ್, ಉಳಿಮೆ ಯಂತ್ರ,ಕಳೆ ನಾಶಕ ಯಂತ್ರ,ರೈತರ ಬೆಳೆಗಳಿಗೆ ನೆರವಾಗಲು ಹನಿ ನೀರಾವರಿ ಉಪಕರಣಗಳು, ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಂದ ನೀರೆತ್ತಲು ಪಂಪು ಮೋಟಾರು, ಕೇಬಲ್, ಪೈಪು ,ವಿದ್ಯುತ್ ಉಪಕರಣಗಳನ್ನು ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ: MLA K.H. Puttaswamy Gowda: ಬಡವರು ಯಾವುದೇ ಪಕ್ಷದಲ್ಲಿರಲಿ ನಿವೇಶನ ನೀಡುವುದು ನನ್ನ ಧರ್ಮ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ
ರೇಷ್ಮೆ ಇಲಾಖೆ, ಪಶು ಸಂಗೋಪನೆ ಇಲಾಖೆ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಯಿಂದ ರೈತರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದ್ದು, ವಿವಿಧ ಯೋಜನೆಯಡಿ ತಾಲೂಕಿನ ಸುಮಾರು ನಾಲ್ಕು ಸಾವಿರ ಮಂದಿ ಫಲಾನುಭವಿಗಳನ್ನು ಅತ್ಯಂತ ಪಾರದರ್ಶಕವಾಗಿ ಸರ್ಕಾರದ ಮಾನದಂಡದ ಪ್ರಕಾರವೇ ಆಯ್ಕೆ ಮಾಡಿ ಇಂದು ರೈತರುಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದ ಅವರು ತಾಲೂಕಿನಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ನಿವೇಶನ ರಹಿತರಿಗೆ ನಿವೇಶನಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ತಾಲೂಕಿನಲ್ಲಿ 176 ಎಕರೆ ಗುರುತಿಸಲಾಗಿದೆ ಎಂದರು.
ಕಳೆದ ತಿಂಗಳು ಪ್ರತಿಯೊಂದು ಪಂಚಾಯಿತಿಯಲ್ಲೂ ಗ್ರಾಮ ಸಭೆಗಳನ್ನು ನಡೆಸಿ ಪಾರದರ್ಶಕವಾಗಿ ನಿವೇಶನ ರಹಿತರ ಪಟ್ಟಿಯನ್ನು ತಯಾರಿಸಲಾಗಿದೆ, ಮುಂದಿನ ದಿನಗಳಲ್ಲಿ ಸುಸಜ್ಜಿತ ಲೇಔಟು ಗಳನ್ನು ಮಾಡಿ ನಿವೇಶನ ರಹಿತರಿಗೆ ಹಕ್ಕು ಪತ್ರಗಳನ್ನು ನೀಡುವುದು ಎಂದ ಅವರು ತಾಲೂಕಿನ ಅಭಿವೃದ್ಧಿಗಾಗಿ ಸುಮಾರು 625 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗಿದೆ. ತಾಲೂಕಿನಲ್ಲಿ ಈಗಾಗಲೆ ಶೇಖಡಾ ಎಪ್ಪತರಷ್ಟು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ, ಉಳಿದ ರಸ್ತೆಗಳನ್ನು ಇನ್ನು ಎರಡು ವರ್ಷದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಫಲಾನುಭವಿಗಳ ಬೃಹತ್ ಸಮಾವೇಶದಲ್ಲಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಯ ಯೋಜನೆಗಳಿಗೆ ಆಯ್ಕೆಯಾದ ಸುಮಾರು ನಾಲ್ಕು ಸಾವಿರ ಮಂದಿ ಫಲಾನು ಭವಿಗಳಿಗೆ ಸುಮಾರು ಇಪ್ಪತ್ತು ಕೋಟಿ ರೂಪಾಯಿಗಳ ಮೌಲ್ಯದ ಕೃಪಿ ಉಪಕರಣಗಳು, ಯಂತ್ರೋ ಪಕರಣಗಳು ,ಕಾರ್ಮಿಕರಿಗೆ ವಿವಿಧ ಸಲಕರಣೆಗಳ ಕಿಟ್ಟುಗಳು,ಮಹಿಳೆಯರಿಗೆ ಹೊಲಿಗೆ ಯಂತ್ರಗಳು, ಸಾರಥಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕರಿಗೆ ಕಾರು ಹಾಗೂ ಇನ್ನಿತರೆ ಸಲಕರಣೆ ಗಳನ್ನು ನೇರವಾಗಿ ಫಲಾನುಭವಿಗಳಿಗೆ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ವಿತರಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು(District Collector G. Prabhu), ಜಿಲ್ಲಾ ಪಂಚಾಯಿತಿ ಸಿಇಓ ನವೀನ್ ಭಟ್, ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ( Former MLA N. Jyotireddy), ತಹಶಿಲ್ದಾರ್ ಅರವಿಂದ, ಜಂಟಿ ಕೃಷಿ ನಿರ್ದೇಶಕ ಅಬೀದ್, ತೋಟಗಾರಿಕೆ ಜಂಟಿ ನಿರ್ದೇಶಕ ದೇವರಾಜ್, ಪಶು ಪಾಲನಾ ಮತ್ತು ಪಶುವೈದ್ಯ ಇಲಾಖೆಯ ಉಪ ನಿರ್ದೇಶಕ ರಂಗಪ್ಪ, ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ವೆಂಕಟೇಶ್ ರೆಡ್ಡಿ,ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವಿಷ್ಣು ಕಾಮತ್, ಮೀನುಗಾರಿಕೆ ಉಪ ನಿರ್ದೇಶಕ ವಿಶ್ವನಾಥ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಶಿವಲಿಂಗಯ್ಯ, ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು, ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.