ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B.N. Ravikumar: ಶಿಡ್ಲಘಟ್ಟದಲ್ಲಿ ಅಭಿವೃದ್ಧಿಯ ಹೊಸ ಶಕೆ ಪ್ರಾರಂಭ: 2000 ಕೋಟಿ ಅನುದಾನ ಗುರಿ: ಶಾಸಕ ರವಿಕುಮಾರ್

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಶಿಫಾರಸ್ಸಿನ ಮೇರೆಗೆ ಪಲ್ಚರ್ ರಸ್ತೆಯ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಜೊತೆಗೆ, ಹೆಚ್.ಡಿ. ಕುಮಾರಸ್ವಾಮಿ ಅವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಡಿ ಹೆಚ್ಚಿನ ಅನುದಾನ ವನ್ನು ತಾಲೂಕಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆ ವ್ಯಕ್ತಪಡಿಸಿರುವ ಶಾಸಕ ಬಿ.ಎನ್. ರವಿಕುಮಾರ್ ಅವರು 2000 ಕೋಟಿ ಅನುದಾನ ತಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಹೊಸ ಹಾದಿಯತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿದರು.

ಶಿಡ್ಲಘಟ್ಟ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆ ವ್ಯಕ್ತಪಡಿಸಿರುವ ಶಾಸಕ ಬಿ.ಎನ್.ರವಿ ಕುಮಾರ್(MLA B.N. Ravikumar) ಅವರು 2000 ಕೋಟಿ ಅನುದಾನ ತಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಹೊಸ ಹಾದಿಯತ್ತ ಕೊಂಡೊ ಯ್ಯುವುದಾಗಿ ಭರವಸೆ ನೀಡಿದರು.

ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಮಾಧ್ಯಮ ಗಳೊಂದಿಗೆ ಮಾತನಾಡಿ, ಕ್ಷೇತ್ರದ ಜನತೆಗೆ ಯುಗಾದಿ ಶುಭಾಶಯಗಳನ್ನು ತಿಳಿಸಿ, ಮುಸ್ಲಿಂ ಬಾಂಧವರಿಗೆ ಮುಂಚಿತವಾಗಿ ರಂಜಾನ್ ಹಬ್ಬದ ಹಾರೈಕೆಗಳನ್ನು ಸಲ್ಲಿಸಿದರು.

ತಾಲ್ಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 2636 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವುದಾಗಿ ತಿಳಿಸಿದ ಅವರು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: MLA BN Ravikumar: ಕಾನೂನು ರೀತಿಯಲ್ಲಿ ಹೋರಾಟ ಮಾಡೋಣ: ಶಾಸಕ ಬಿ ಎನ್ ರವಿಕುಮಾರ್

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಶಿಫಾರಸ್ಸಿನ ಮೇರೆಗೆ ಪಲ್ಚರ್ ರಸ್ತೆಯ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಜೊತೆಗೆ, ಹೆಚ್.ಡಿ. ಕುಮಾರಸ್ವಾಮಿ ಅವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಡಿ ಹೆಚ್ಚಿನ ಅನುದಾನ ವನ್ನು ತಾಲೂಕಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸುಮಾರು 2000 ಕೋಟಿ ರೂಪಾಯಿ ಅನುದಾನದ ಅಗತ್ಯವಿದ್ದು, ಈ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರುವುದಾಗಿ ಅವರು ಭರವಸೆ ನೀಡಿದರು.

ಇನ್ನೊಂದೆಡೆ, ಶಾಸಕರ ಕಾರ್ಯವೈಖರಿಯನ್ನು ಬೆಂಬಲಿಗರು ಶ್ಲಾಘಿಸಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗುವ ಬಡ ವಿದ್ಯಾರ್ಥಿಗಳಿಗೆ 1 ಲಕ್ಷದಿಂದ 5 ಲಕ್ಷ ರೂಪಾಯಿವರೆಗೆ ಬಹುಮಾನ ಘೋಷಿಸಿರುವುದು ಗಮನಾರ್ಹವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೇಲೂರು ಮಂಜುನಾಥ್, ಚೀಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಯ್ಯ, ಜೆಡಿಎಸ್ ಮುಖಂಡರಾದ ತಾದೂರು ರಘು, ಡಾ.ಧನಂಜಯ ರೆಡ್ಡಿ ಹಾಗೂ ಗಜೇಂದ್ರ ಉಪಸ್ಥಿತರಿದ್ದರು.