ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಶುದ್ಧ ಕುಡಿಯುವ ನೀರಿಗಾಗಿ ತಾಲೂಕು ಕಚೇರಿ ಮುಂಭಾಗ ವಿನೂತನ ಪ್ರತಿಭಟನೆ!

ಮೂಲಸೌಕರ್ಯಗಳ ಕೊರತೆ ನೀಗಿಸಬೇಕು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳ ಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಯನ್ನು ಸಲ್ಲಿಸಿದರು. ಒಂದು ವೇಳೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸುಧಾರಣೆ ಯಾಗದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಭಾಸ್ಕರ್ ಎಚ್ಚರಿಸಿದ್ದಾರೆ.

ಚಿಂತಾಮಣಿ: ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳ ಗಮನ ಸೆಳೆಯಲು ಇಂದು ಚಿಂತಾಮಣಿ ತಾಲೂಕು ಕಚೇರಿ ಮುಂದೆ ವಿನೂತನ ಪ್ರತಿಭಟನೆ ನಡೆಸಲಾಯಿತು. ಅಂಕಲಮಡಗು ಭಾಸ್ಕರ್ ಎಂಬುವವರು ಗಂಗಾಜಲ ತುಂಬಿದ ಬಿಂದಿಗೆ ಹಿಡಿದು ತಾಲೂಕು ಕಚೇರಿ ಮುಂದೆ ಕುಳಿತು ಮೌನ ಪ್ರತಿಭಟನೆ ನಡೆಸಿದರು.

ಬಿಂದಿಗೆಯ ಮೇಲೆ ದೇವಿಯ ಫೋಟೋವನ್ನಿಟ್ಟು ಪೂಜೆ ಸಲ್ಲಿಸುವ ಮೂಲಕ, ನಮಗೆ ಶುದ್ಧ ನೀರು ಕೊಡಿ"ಎಂದು ವಿನಂತಿಸಿದರು. ಜಿಲ್ಲೆಯ ಜನರಿಗೆ ತಕ್ಷಣವೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.

ಇದನ್ನೂ ಓದಿ: Chinthamani News: ರಾಜೀವ್‌ ನಗರದಲ್ಲಿ ಮಧ್ಯರಾತ್ರಿ ಮಾರಕಾಯುಧಧಾರಿ ಕಳ್ಳರ ಅಟ್ಟಹಾಸ: ಭೀತಿಯ ನೆರಳಿನಲ್ಲಿ ಬಡಾವಣೆಯ ನಿವಾಸಿಗಳು

ಮೂಲಸೌಕರ್ಯಗಳ ಕೊರತೆ ನೀಗಿಸಬೇಕು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳ ಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಯನ್ನು ಸಲ್ಲಿಸಿದರು. ಒಂದು ವೇಳೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸುಧಾರಣೆಯಾಗದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಭಾಸ್ಕರ್ ಎಚ್ಚರಿಸಿದ್ದಾರೆ.

cbpm4baskar

ಸ್ಥಳೀಯರು ಈ ವಿನೂತನ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಅಧಿಕಾರಿಗಳು ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಸ್ಕರ್ "ಬೆಂಗಳೂರಿನ ತ್ಯಾಜ್ಯ ನೀರನ್ನು ಕೆರೆಗಳಿಗೆ ಹರಿಸುವ ಮೊದಲು ಮೂರನೇ ಹಂತದ ವೈಜ್ಞಾನಿಕ ಶುದ್ಧೀಕರಣ ಮಾಡಬೇಕು. ಇಲ್ಲವಾದರೆ ಅಂತರ್ಜಲ ಕಲುಷಿತಗೊಂಡು ಮುಂದಿನ ಪೀಳಿಗೆಗೆ ಮಾರಕವಾಗಲಿದೆ"ಎಂದು ಆತಂಕ ವ್ಯಕ್ತಪಡಿಸಿದರು.

ನಮಗೆ ಹಕ್ಕುಬದ್ಧವಾಗಿ ಶುದ್ಧ ನೀರು ಬೇಕು. ಸರ್ಕಾರವು ಕೇವಲ ಅಂಕಿ-ಅಂಶಗಳ ಆಟವಾಡದೆ, ಜನರ ಜೀವದ ಜೊತೆ ಚೆಲ್ಲಾಟವಾಡಬಾರದು. ಕೂಡಲೇ ವೈಜ್ಞಾನಿಕ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು"ಎಂದು ಎಚ್ಚರಿಕೆ ನೀಡಿದರು.