ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ಹೆಚ್ಚಿಸುವ ತೀರ್ಥಯಾತ್ರೆ, ಏ.14 ರಂದು ವಿಶೇಷ ಪ್ರವಾಸ
ಇನ್ನು ಏಪ್ರಿಲ್ 15ರಂದು ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆಯಲಿರುವ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವೂ ಈ ಯಾತ್ರೆಯ ವಿಶೇಷತೆ ಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮ ಭಕ್ತರಿಗೆ ವಿಶಿಷ್ಟ ಅನುಭವ ನೀಡಲಿದೆ
-
ಶಿಡ್ಲಘಟ್ಟ: ಭಕ್ತರಿಗೆ ಆಧ್ಯಾತ್ಮಿಕ ಅನುಭವದ ಜೊತೆಗೆ ಮನೋಬಲ ಹಾಗೂ ಧಾರ್ಮಿಕ ಚೈತನ್ಯ ವೃದ್ಧಿಸಲು ತೀರ್ಥ ಕ್ಷೇತ್ರಗಳ ಪ್ರವಾಸ ಅತ್ಯಂತ ಉಪಯುಕ್ತವಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ (Seekal Ramachandra Gowda)ಹೇಳಿದರು.
ನಗರದ ಬಿಜೆಪಿ ಕಚೇರಿ ಸೇವಾ ಸೌಧದಲ್ಲಿ ಆಯೋಜಿಸಿದ್ದ ತೀರ್ಥ ಕ್ಷೇತ್ರಗಳ ವಿಶೇಷ ಪ್ರವಾಸ ಕಾರ್ಯಕ್ರಮ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಏ.14ರಂದು ಮಧ್ಯಾಹ್ನ 2 ಗಂಟೆಗೆ ಶಿಡ್ಲಘಟ್ಟ ತಾಲೂಕಿನಿಂದ ಪವಿತ್ರ ಯಾತ್ರೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಈ ಯಾತ್ರೆಯಲ್ಲಿ ಶ್ರೀ ಪಂಚಮುಖಿ ಆಂಜನೇಯ ದೇವಾಲಯ, ಶ್ರೀ ಸತ್ಯ ಶನೇಶ್ವರ ದೇವಾಲಯ ಹಾಗೂ ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಭೇಟಿ ನೀಡಲಿದ್ದಾರೆ. ಈ ಕ್ಷೇತ್ರಗಳು ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಭಕ್ತಿ ಹೆಚ್ಚಿಸಲು ಪ್ರಮುಖ ಕೇಂದ್ರಗಳಾಗಿವೆ ಎಂದು ಹೇಳಿದರು.
ಇದನ್ನೂ ಓದಿ: Shidlaghatta News: ಬೆನ್ನುಹುರಿ ಅಂಗವಿಕಲರಿಗೆ ವಿಶೇಷ ಕ್ರೀಡಾಕೂಟ – ಆತ್ಮವಿಶ್ವಾಸ ವೃದ್ಧಿಗೆ ಒತ್ತು
ಇನ್ನು ಏಪ್ರಿಲ್ 15ರಂದು ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆಯಲಿರುವ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವೂ ಈ ಯಾತ್ರೆಯ ವಿಶೇಷತೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮ ಭಕ್ತರಿಗೆ ವಿಶಿಷ್ಟ ಅನುಭವ ನೀಡಲಿದೆ ಎಂದು ತಿಳಿಸಿದರು.
ಯಾತ್ರೆಯ ಅಂತ್ಯದಲ್ಲಿ ಆದಿಚುಂಚನಗಿರಿಯ ಕಾಲ ಬೈರೇಶ್ವರ ಸ್ವಾಮಿ ದರ್ಶನ ಪಡೆದು ಭಕ್ತರು ಶಿಡ್ಲಘಟ್ಟಕ್ಕೆ ವಾಪಸ್ಸಾಗಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೀಕಲ್ ಆನಂದಗೌಡ, ನರೇಶ್, ವೆಂಕಟೇಶ್ವರ ಚಿತ್ರಮಂದಿರದ ಮಾಲೀಕ ಪ್ರಕಾಶ್, ಬಾಲಕೃಷ್ಣ, ರಾಮಕೃಷ್ಣ, ವೆಂಕಟರಮಣ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
![]()
"ಏ.15ರಂದು ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆಯಲಿರುವ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸ ಲಿದ್ದಾರೆ. ಅವರ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡುವುದರ ಜೊತೆಗೆ ಭಕ್ತರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಲಿದೆ."
– ಸೀಕಲ್ ರಾಮಚಂದ್ರ ಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷ-