ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: 5 ಲಕ್ಷ ಗಿಡ ನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆಗೆ ಒಪ್ಪಂದ ಮಾಡಿಕೊಂದಿದೆ ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಜವಬ್ದಾರಿಯನ್ನು ತೋರುತ್ತಿದೆ. ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವು ದಿಲ್ಲ, ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ಸಂರಕ್ಷಣೆ ಮಾಡುವ ಅಗತ್ಯವಿದೆ.

5 ಲಕ್ಷ ಗಿಡ ನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ

೫ ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆ  ಸಾಕ್ಷಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ತಿಳಿಸಿದರು. -

Profile
Ashok Nayak Apr 13, 2026 11:19 PM

ಚಿಕ್ಕಬಳ್ಳಾಪುರ: 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆ ಸಾಕ್ಷಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ(Principal District and Sessions Judge T.P.Ramalingegowda) ತಿಳಿಸಿದರು.

ಪರಿಸರ ದಿನಚಾರಣೆಯ ಅಂಗವಾಗಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಸೋಮವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆಗೆ ಒಪ್ಪಂದ ಮಾಡಿಕೊಂದಿದೆ ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಜವಬ್ದಾರಿಯನ್ನು ತೋರುತ್ತಿದೆ. ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವು ದಿಲ್ಲ, ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ಸಂರಕ್ಷಣೆ ಮಾಡುವ ಅಗತ್ಯವಿದೆ.

ಇದನ್ನೂ ಓದಿ: Chikkaballapur News: ನಾಗಾರ್ಜುನ ಕಾಲೇಜಿನಲ್ಲಿ ಸಾಧಕರ ದಿನ ಆಚರಣೆ: ಗೌರವ ಸಮರ್ಪಣೆ

ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಚಿಕ್ಕಬಳ್ಳಾಪುರ ಜಿಲ್ಲೆಗೆ 5 ಲಕ್ಷ ಸಸಿಗಳನ್ನು ಬೆಳೆಸುವ ಗುರಿಯನ್ನು ನೀಡಿದೆ. ಅದರ ಭಾಗವಾಗಿ ಇಂದು “ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 400 ಗಿಡಗಳನ್ನು ನೆಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಇವರ ಸಹಕಾರ ಪಡೆದು ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗು ವುದು. ಆ ಮೂಲಕ ಅಂತರ್ಜಲ ವೃದ್ಧಿಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಲಾಗುವುದು. ಈ ಕಾರ್ಯಕ್ಕೆ ಜಿಲ್ಲೆಯ ಸರ್ಕಾರೇತರ ಸಂಸ್ಥೆಗಳು, ಸಮಸ್ತ ಸಾರ್ವಜನಿಕರು, ಸಹಕಾರ ನೀಡಬೇಕು. ಗಿಡ ಬೆಳೆಸುವ ಜವಬ್ದಾರಿಯನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

Plantataion 2

ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಪ್ರತಿ ವರ್ಷ ಸರಾಸರಿ 3 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯವನ್ನು ಜಿಲ್ಲೆಯಲ್ಲಿ ಮಾಡಲಾಗುತ್ತಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೆ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯ ಕ್ರಮ ಮಾಡಲಾಗುವುದು. ನೆಟ್ಟ ಗಿಡಗಳ ಪೈಕಿ ಶೇ.80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೊಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತ ವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಶಿಲ್ಪ, ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ತಹಶೀಲ್ದಾರ್ ಗಗನಸಿಂಧೂ, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಸೇರಿದಂತೆ ಇಂದಿರಾ ಗಾಂಧಿ ವಸತಿ ಶಾಲೆಯ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.