ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

B Y Vijayendra: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಆತ್ಮೀಯ ಸ್ವಾಗತ

ತಾಲೂಕಿನ ಮುದ್ದೇನಹಳ್ಳಿ ಸಮೀಪದ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ( Sadguru Sri Madhusudhan Sai) ಅವರನ್ನು ಭೇಟಿ ಮಾಡಲು ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ವಿಜಯೇಂದ್ರ

-

Profile
Ashok Nayak Nov 28, 2026 12:11 AM

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿ ಸಮೀಪದ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸದ್ಗುರು ಶ್ರೀ ಮಧುಸೂದನ ಸಾಯಿ( Sadguru Sri Madhusudhan Sai) ಅವರನ್ನು ಭೇಟಿ ಮಾಡಲು ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B Y Vijayendra) ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೇಂದ್ರ ಅವರನ್ನು ಬರಮಾಡಿಕೊಂಡು ಗೌರವಿಸಿದರು.

ಇದನ್ನೂ ಓದಿ: BY Vijayendra: ಕಾಂಗ್ರೆಸ್‌ ನಾಯಕರ ಕುರಿತ ಆಕ್ಷೇಪಾರ್ಹ ಪದ ಬಳಕೆಗೆ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಸತ್ಯಸಾಯಿ ಗ್ರಾಮದ ಸುವರ್ಣ ಮಹೋ ತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಗಣ್ಯರು ಆಗಮಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ಸ್ವಾಗತ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಸುರೇಂದ್ರಗೌಡ, ಜಿಲ್ಲಾ ಕಾರ್ಯದರ್ಶಿ ಆರ್.ಎನ್. ಅಶೋಕ್, ಸಹ ವಕ್ತಾರ ರಾಮಣ್ಣ, ಮಂಡಲ ಅಧ್ಯಕ್ಷರಾದ ಸೀಕಲ್ ಆನಂದ್ ಗೌಡ, ನರಸಿಂಹರಾಜು, ಜಿಲ್ಲಾ ಮಾಧ್ಯಮ ಸಂಚಾಲಕ ವಿ. ಮಧುಚಂದ್ರ, ಹಿರಿಯ ಮುಖಂಡರಾದ ಸಿ.ಪಿ. ಮಂಜುನಾಥ್, ನರಸಪ್ಪ, ಗುರುಮೂರ್ತಿ, ಕೊಂಡಪ್ಪ, ಜಾತವಾರ ಲೋಕೇಶ್, ಚಿಂತಾಮಣಿ ಸುರೇಶ್, ನರೇಂದ್ರ ಬಾಬು, ಕಂದವಾರ ಅನಿಲ್, ಪುರುಷೋತ್ತಮ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.