ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಕ್ಲೀನರ್ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಂಟೇನರ್ ವಾಹನದಲ್ಲಿ ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಇನ್ನು ಹೊಸ ಬೈಕುಗಳನ್ನ ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಸುಗಮ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಒಬ್ಬ ಪ್ರಯಾಣಿಕನನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಪ್ರತ್ಯೇಕ ಘಟನೆಯಲ್ಲಿ, ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸ್ನೇಹಿತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಶನಿವಾರ ನಡೆದಿದೆ. ಮೃತರನ್ನು ಪಿಯುಸಿ ವಿದ್ಯಾರ್ಥಿಗಳಾದ ತೌಸೀಪ್, ಶ್ರೀನಿವಾಸ್ ಮತ್ತು ಮಣಿಕಂಠ ಎಂದು ಗುರುತಿಸಲಾಗಿದ್ದು, ಇಂದು ವೀಕೆಂಡ್ ಹಿನ್ನೆಲೆಯಲ್ಲಿ ಮೂವರು ಬೈಕಿನಲ್ಲಿ ಲಾಂಗ್ ಡ್ರೈವ್ಗೆ ಹೊರಟ್ಟಿದ್ದರು.ಬೆಳಗ್ಗೆ 11: 20ರ ಸುಮಾರಿಗೆ ಈ ಮೂವರು ತೆರಳುತ್ತಿದ್ದ ಬೈಕ್ ಅಗಲಕೋಟೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿಗೆ ಬರ್ತಿದ್ದ ಲಾರಿಗೂ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೂವರ ಮೃತ ದೇಹ ಛಿದ್ರ-ಛಿದ್ರವಾಗಿವೆ.