Chikkaballapur News: ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ: ಶಾಸಕ ಸುಬ್ಬಾರೆಡ್ಡಿ ತಾಕೀತು
ತಾಲೂಕಿನ 3 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇ ಪಲ್ಲಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಾಗಾಗಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ನಿರಂತರ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.

ಬೇಸಿಗೆ ಆರಂಭವಾಗಿದ್ದು ತಾಲೂಕಿನಲ್ಲಿ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಶಾಸಕ ಎಂದು ತಿಳಿಸಿದರು.

ಬಾಗೇಪಲ್ಲಿ: ಬೇಸಿಗೆ ಆರಂಭವಾಗಿದ್ದು ತಾಲೂಕಿನಲ್ಲಿ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಶಾಸಕ ಎಂದು ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಬುಧವಾರ ನೀರಿನ, ಮೇವು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಟಾಸ್ಕ್ ಪೋರ್ಸ್ ಸಭೆಯನ್ನು ಶಾಸಕರ ನೇತೃತ್ವದಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು ಈ ಹಿಂದೆ ಎಲ್ಲೆಡೆ ಬಿಂದಿಗೆಗಳನ್ನ ಹಿಡಿದು ಮಹಿಳೆಯರು ನೀರಿಗಾಗಿ ಹೋರಾಟಗಳನ್ನ ಮಾಡುತ್ತಿದ್ದರು. ಆದರೆ ಈಗ ನೀರಿನ ಸಮಸ್ಯೆ ಬಹುತೇಕ ಪರಿಹಾರವಾಗಿದೆ.
ಎಲ್ಲೆಲ್ಲಿ ಸಮಸ್ಯೆ ಕಂಡು ಬರುತ್ತದೆಯೋ ಅಲ್ಲಿ ಕೂಡಲೇ ಕ್ರಮ ಜರುಗಿಸಿ ಪರಿಹರಿಸಲಾಗುತ್ತಿದೆ. ಅದರಂತೆ ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕೊಳವೆಬಾವಿಗಳನ್ನು ಕೊಡಿಸ ಲಾಗುತ್ತಿದೆ ಎಂದು ತಿಳಿಸಿದರು.
ಮೂರು ಗ್ರಾಮಗಳಲ್ಲಿ ನೀರಿನ ಸಮಸ್ಯೆ
ತಾಲೂಕಿನ 3 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇಪಲ್ಲಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಾಗಾಗಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ನಿರಂತರ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಅಕಾಲಿಕ ಮಳೆಯಿಂದ ಹಾನಿಯಿಲ್ಲ
ಇತ್ತೀಚೆಗೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಈ ವೇಳೆ ರೈತರ ಯಾವುದೇ ಬೆಳೆ ನಷ್ಟ ವಾಗಿಲ್ಲ ಎಂದು ತಿಳಿದು ಬಂದಿದೆ. ಒಂದು ವೇಳೆ ನಷ್ಟವಾಗಿದ್ದರೆ ಪರಿಹಾರೋಪಾಯಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
25 ವಾರಗಳಿಗೆ ಬೇಕಾದ ಮೇವಿದೆ
ತಾಲೂಕಿನಲ್ಲಿ ಬೇಸಿಗೆಯಲ್ಲಿ ಮೇವಿನ ಸಮಸ್ಯೆ ತಲೆ ದೋರದಂತೆ ಕ್ರಮ ಕೈಗೊಂಡಿದ್ದು ,ಜನವಾರು ಗಳಿಗೆ ಇನ್ನು 25 ವಾರಗಳಲ್ಲಿ ಬೇಕಾದಷ್ಟು ಮೇವನ್ನು ಈಗಾಗಲೇ ಸಂಗ್ರಹಣೆ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.
ಏ.೨೨ ರಂದು ಜನಸ್ಪಂದನಾ ಕಾರ್ಯಕ್ರಮ ತಾಲೂಕಿನ ದೇವರಗುಡಿಪಲ್ಲಿಯಲ್ಲಿ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ೩ ಸಾವಿರ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ನೀಡಲು ಯೋಜನೆ ಮಾಡಿಕೊಳ್ಳಲಾಗಿದೆ.
ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ತಪ್ಪದೇ ಹಾಜರಾಗಬೇಕು ಹಾಗೂ ಇದಕ್ಕೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಈ ಕಾರ್ಯಕ್ರಮದವನ್ನು ಸಾರ್ವ ಜನಿಕರು ಹೆಚ್ಚಿನ ಸಂಖ್ಯೆಗಳ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದ್ವಿತೀಯ ಪಿಯುಸಿ ವಿಧ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 2024-25 ನೇ ಸಾಲಿನ ದ್ವಿತೀಯ ಪಿಯುಸಿ ನಲ್ಲಿ ಅತಿ ಹೆಚ್ಚಿನ ಅಂಕ ಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಾಸಕರು ಶಾಲು ಹೊದಿಸಿ ಆತ್ಮೀಯ ಸನ್ಮಾನ ಮಾಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ್ ಮನೀಷಾ ಮಹೇಶ್ ಪತ್ರಿ,ಇಓ ರಮೇಶ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ .ಸತ್ಯನಾರಾಯಣ ರೆಡ್ಡಿ, ಶಿಕ್ಷಣ ಇಲಾಖೆ ವೆಂಕಟರಾಮ್ ,ಕೃಷಿ ನಿರ್ದೇಶಕಿ ಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿಗಳಾದ ಶ್ರೀನಿವಾಸ್, ಬಿ.ಸಿ.ಎಂ.ಇಲಾಖೆ ಶಿವಪ್ಪ, ಸಮಾಜ ಕಲ್ಯಾಣ ಇಲಾಖೆ ನಾಗರಾಜ್, ಸಾಕ್ಷರತೆ ಶಿವಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.