ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dr K Sudhakar: ಮಹಿಳಾ ಕಾರ್ಯಕರ್ತೆಯರು, ತಾಯಂದಿರ ಸಕ್ರಿಯ ಪಾಲ್ಗೊಳ್ಳುವಿಕೆ ಪಕ್ಷದ ಶಕ್ತಿ ಹೆಚ್ಚಿಸಲಿದೆ: ಡಾ.ಕೆ.ಸುಧಾಕರ್

ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಕೆಲವರ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿ ಅರಿತು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು

ಗುಡಿಬಂಡೆಯ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಸಂಸದ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.

ಗುಡಿಬಂಡೆ: ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರೂ ಕೈಜೋಡಿಸುವ ಮೂಲಕ ತಳಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. ವಿಶೇಷವಾಗಿ ಮಹಿಳಾ ಕಾರ್ಯಕರ್ತೆಯರು ಹಾಗೂ ತಾಯಂದಿರ ಸಕ್ರಿಯ ಪಾಲ್ಗೊಳ್ಳುವಿಕೆ ಪಕ್ಷದ ಶಕ್ತಿಯನ್ನು ಹೆಚ್ಚಿಸ ಲಿದೆ ಎಂದು ಸಂಸದ ಡಾ.ಕೆ.ಸುಧಾಕರ್(MP Dr K Sudhakar) ಕರೆ ನೀಡಿದರು.

ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಕೆಲವರ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿ ಅರಿತು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ತಾಯಂದಿರು ಹಾಗೂ ಸಹೋದರಿಯರು ತೋರುವ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ತಮ್ಮ ಶಕ್ತಿ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಪಕ್ಷವನ್ನು ಬಲಪಡಿಸುವುದರ ಜತೆಗೆ ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲು ಕಾರ್ಯ ಕರ್ತರು ಜನಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: MP Dr K Sudhakar: 'ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಅವರನ್ನೇ ನನ್ನ ಪ್ರತಿನಿಧಿ ಎಂದು ಭಾವಿಸಿ ಗೆಲ್ಲಿಸಿ'; ಕಾರ್ಯಕರ್ತರಿಗೆ ಕರೆ

‘ಬಡವರ ಪಾಲಿಗೆ ಕಾಂಗ್ರೆಸ್ ಸರ್ಕಾರ ಇಲ್ಲದಂತಾಗಿದೆ’

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ರಾಜ್ಯದ ಕಾಂಗ್ರೆಸ್ ಸರ್ಕಾರ ಬಡವರ ಪಾಲಿಗೆ ಇಲ್ಲದಂತಾಗಿದೆ ಎಂದು ಟೀಕಿಸಿದರು. ಗುಡಿಬಂಡೆಯ ಅಲ್ಪಸಂಖ್ಯಾತ ಮಹಿಳೆ ಯೊಬ್ಬರ ಪಡಿತರ ಚೀಟಿ ಅವರು ಬದುಕಿರುವಾಗಲೇ ರದ್ದಾಗಿದ್ದು, ಬೆಂಗಳೂರಿನವರೆಗೂ ತೆರಳಿ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದರೂ ಬಿಪಿಎಲ್ ಕಾರ್ಡ್ ದೊರೆತಿಲ್ಲ. ಈ ಕುರಿತು ಮಹಿಳೆ ತಮಗೆ ದೂರು ನೀಡಿದ್ದಾರೆ. ಅಲ್ಪಸಂಖ್ಯಾತರ ಪರ ಎಂದು ಹೇಳಿಕೊಳ್ಳುವ ಸರ್ಕಾರವೇ ಅವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ನಾಗೇಂದ್ರ ರಾಜೀನಾಮೆಗೆ ಆಗ್ರಹ

ವಾಲ್ಮೀಕಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾದ ಹಣ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು ಸಂಸತ್ತಿನ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರವಾಗಬೇಕಿದ್ದು, ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆಯಿದೆ ಎಂದರು.