ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Adopt modern technology: ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ರೇಷ್ಮೆ ಕೃಷಿಯಲ್ಲಿ ಉತ್ತಮ ಲಾಭ ಪಡೆಯಿರಿ: ಮಾರಪ್ಪ ಬೀರಲದಿನ್ನಿ

ತಾಲೂಕಿನ ಯರಹಳ್ಳಿ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ, ರೇಷ್ಮೆ ತರಬೇತಿ ಸಂಸ್ಥೆ ಹಾಗೂ ರೇಷ್ಮೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ರೇಷ್ಮೆ–ನಮ್ಮ ಹೆಮ್ಮೆ’ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಇಲಾಖೆಯಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು

ಯರಹಳ್ಳಿ ಗ್ರಾಮದಲ್ಲಿ ನಡೆದ ‘ನಮ್ಮ ರೇಷ್ಮೆ–ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ತಾಲೂಕು ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಪಿ.ಎನ್.ವೇಣುಗೋಪಾಲ ಮಾತನಾಡಿದರು.

ಗುಡಿಬಂಡೆ: ಜಿಲ್ಲೆಯಲ್ಲಿ ಉತ್ಪಾದನೆಯಾಗುವ ರೇಷ್ಮೆ ಗುಣಮಟ್ಟದಿಂದ ವಿಶ್ವಮನ್ನಣೆ ಪಡೆದಿದ್ದು, ಪ್ರಸ್ತುತ ಪ್ರತಿ ಕೆ.ಜಿ.ಗೆ ಸುಮಾರು 1 ಸಾವಿರ ರೂಪಾಯಿವರೆಗೆ ದರ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ರೇಷ್ಮೆ ಕೃಷಿ ಅತ್ಯಂತ ಲಾಭದಾಯಕ ಉದ್ಯಮವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಗುಣಮಟ್ಟದ ರೇಷ್ಮೆ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ರೇಷ್ಮೆ ಉಪನಿರ್ದೇಶಕ ಮಾರಪ್ಪ ಬೀರಲದಿನ್ನಿ ಹೇಳಿದರು.

ತಾಲೂಕಿನ ಯರಹಳ್ಳಿ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ, ರೇಷ್ಮೆ ತರಬೇತಿ ಸಂಸ್ಥೆ ಹಾಗೂ ರೇಷ್ಮೆ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ರೇಷ್ಮೆ–ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಇಲಾಖೆ ಯಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿ ಕೊಳ್ಳಬೇಕು. ಹೊಸ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಗುಣಮಟ್ಟದ ರೇಷ್ಮೆ ಉತ್ಪಾದಿಸುವ ಮೂಲಕ ಹೆಚ್ಚಿನ ಆದಾಯ ಗಳಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Gudibande News: ಸಮಾವೇಶ ಯಶಸ್ವಿಗೆ ಕರೆ: ಗುಡಿಬಂಡೆಯಲ್ಲಿ ಪೂರ್ವಭಾವಿ ಸಭೆ

ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಮಂಜುನಾಥ ಮಾತನಾಡಿ, ಹಿಪ್ಪುನೇರಳೆ ಬೆಳೆಗೆ ಬಾಧಿಸುವ ಬೇರು ಕೊಳೆ ರೋಗ, ನುಸಿ ಹಾಗೂ ಥ್ರಿಪ್ಸ್‌ಗಳ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು. ರೋಗ ಮತ್ತು ಕೀಟಬಾಧೆ ನಿಯಂತ್ರಣಕ್ಕೆ ‘ಎಂಆರ್ ಪ್ರೊ’ ಹಾಗೂ ‘ಸಾಫ್’ ಬಳಕೆಯ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ತಾಲೂಕು ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಪಿ.ಎನ್.ವೇಣುಗೋಪಾಲ ಮಾತನಾಡಿ, ಪೀಡೆ ನಾಶಕಗಳ ಬಳಕೆಯಿಂದಾಗುವ ಪರಿಣಾಮಗಳನ್ನು ವೈಜ್ಞಾನಿಕವಾಗಿ ತಿಳಿದುಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಪ್ರಯೋಗಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ರೇಷ್ಮೆ ತರಬೇತಿ ಸಂಸ್ಥೆ ಚಿಕ್ಕಬಳ್ಳಾಪುರದ ಪ್ರಾಂಶುಪಾಲೆ ಶೈಲಜಾ ಮಾತನಾಡಿ, ಜಿಲ್ಲೆಯಲ್ಲಿ ನೂತನವಾಗಿ ರೇಷ್ಮೆ ತರಬೇತಿ ಸಂಸ್ಥೆ ಸ್ಥಾಪಿಸಲಾಗಿದ್ದು, ಸಂಸ್ಥೆಯ ವತಿಯಿಂದ ಆಯೋಜಿಸುವ ತರಬೇತಿ ಕಾರ್ಯಕ್ರಮಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದ ರೇಷ್ಮೆ ಸಹಾಯಕ ನಿರ್ದೇಶಕ ಬಸವರಾಜ, ಬಾಗೇಪಲ್ಲಿಯ ರೇಷ್ಮೆ ಸಹಾಯಕ ನಿರ್ದೇಶಕಿ ಕಾವ್ಯ, ರೇಷ್ಮೆ ವಿಸ್ತರಣಾಧಿಕಾರಿ ಗಂಗರಾಜು, ರೇಷ್ಮೆ ನಿರೀಕ್ಷಕ ಸುರೇಶ್ ಸೇರಿದಂತೆ ಗುಡಿಬಂಡೆ ತಾಂತ್ರಿಕ ಸೇವಾ ಕೇಂದ್ರ ವ್ಯಾಪ್ತಿಯ ರೇಷ್ಮೆ ಬೆಳೆಗಾರರು ಭಾಗವಹಿಸಿದ್ದರು.