Chinthamani News: ಶಿಕ್ಷಣ, ಆರ್ಥಿಕತೆ, ರಾಜಕೀಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ನ್ಯಾಯಯುತ ಸ್ಥಾನಮಾನ ಕಲ್ಪಿಸುವ ಗುರಿ: ವಕೀಲ ಮುನೇಗೌಡ
ಸಮುದಾಯದ ಮುಖಂಡರು ಹಾಗೂ ಪದಾಧಿಕಾರಿ ಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿ ಸಂಘಟನೆಯ ಬಲವರ್ಧನೆ ಮತ್ತು ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಎಂಟು ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿದ್ದು, ಚಿಂತಾಮಣಿ ತಾಲ್ಲೂಕಿನ ಭೇಟಿ ಕೊನೆಯದಾಗಿದೆ
-
ಚಿಂತಾಮಣಿ: ಯಾದವ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಗೆ ಸಮಾಜದ ಎಲ್ಲ ಹಂತಗಳಲ್ಲೂ ಸಮುದಾಯಕ್ಕೆ ನ್ಯಾಯಯುತ ಸ್ಥಾನಮಾನ ಕಲ್ಪಿಸಲು ಸಂಘಟಿತ ಹೋರಾಟ ನಡೆಸಲಾಗುವುದು ಎಂದು ಯಾದವ ಸಂಘದ ಜಿಲ್ಲಾಧ್ಯಕ್ಷ ಹಾಗೂ ವಕೀಲ ಮುನೇಗೌಡ ತಿಳಿಸಿದರು.
ನಗರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸಮುದಾಯದ ಮುಖಂಡರು ಹಾಗೂ ಪದಾಧಿಕಾರಿ ಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿ ಸಂಘಟನೆಯ ಬಲವರ್ಧನೆ ಮತ್ತು ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಎಂಟು ತಾಲ್ಲೂಕುಗಳ ಮುಖಂಡರನ್ನು ಭೇಟಿ ಮಾಡಿದ್ದು, ಚಿಂತಾಮಣಿ ತಾಲ್ಲೂಕಿನ ಭೇಟಿ ಕೊನೆಯದಾಗಿದೆ ಎಂದರು.
ಜಿಲ್ಲಾಧ್ಯಕ್ಷ ಸ್ಥಾನ ಮಾತ್ರವಲ್ಲದೆ, ಇತರೆ ಪ್ರಮುಖ ಹುದ್ದೆಗಳು ಹಾಗೂ ಸೌಲಭ್ಯಗಳು ಎಲ್ಲ ತಾಲ್ಲೂಕುಗಳಿಗೂ ಸಾಮಾಜಿಕ ನ್ಯಾಯದ ಆಧಾರದ ಮೇಲೆ ದೊರೆಯಬೇಕು ಎಂಬುದು ಸಂಘಟನೆ ಯ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಯಾದವ ಸಮುದಾಯದವರು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವುದಕ್ಕೆ ಕಾರಣಗಳನ್ನು ಮತ್ತು ಸರ್ಕಾರ ದಿಂದ ದೊರೆಯಬೇಕಾದ ಸೌಲಭ್ಯಗಳ ಕೊರತೆಯನ್ನು ಈಗಾಗಲೇ ಗುರುತಿಸಿ ದಾಖಲಿಸಿ ಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗ ಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಸಮಾಜದ ಬಡವರ್ಗದವರಿಗೆ ಬೂತ್ ಮಟ್ಟದಿಂದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಹಂತದವರೆಗೆ ಹೆಚ್ಚಿನ ಆದ್ಯತೆ ಮತ್ತು ಸ್ಥಾನಮಾನ ದೊರಕಿಸಿ ಕೊಡಲು ಸಂಘಟಿತ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಸಂಘದ ವತಿಯಿಂದ ನೂತನ ಜಿಲ್ಲಾಧ್ಯಕ್ಷ ಮುನೇಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಪುಂಗನೂರು ನಾರಾಯಣಸ್ವಾಮಿ, ಖಜಾಂಚಿ ಎನ್.ಸುರೇಶ್ ಬಾಬು, ಜಂಟಿ ಕಾರ್ಯದರ್ಶಿ ಎಂ.ಎಸ್.ಶ್ರೀನಿವಾಸಪ್ಪ, ಗೌರವಾಧ್ಯಕ್ಷ ದಂಡುಪಾಳ್ಯ ಅಶ್ವತಪ್ಪ, ಕೆ.ರಮೇಶ್, ಸಂಘಟನಾ ಕಾರ್ಯದರ್ಶಿ ಕಲಾವತಿ ಆಂಜನಪ್ಪ, ಕಾರ್ಯಾಧ್ಯಕ್ಷ ಮುದ್ದುಕೃಷ್ಣ ಯಾದವ್, ಅಂಬರೀಶ್, ಎಚ್.ವಿ.ರಾಮಚಂದ್ರಪ್ಪ, ಜಿಲ್ಲಾ ನಿರ್ದೇಶಕರಾದ ನಾಗರಾಜ್, ಕೋಡೇಗಂಟ್ಲು ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.