ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಾಣಿಜ್ಯ ವಿಭಾಗದಲ್ಲಿ ಮಿಂಚಿದ ಅಕ್ಷರ ಪಿಯು ವಿದ್ಯಾರ್ಥಿಗಳು – ಭರ್ಜರಿ ಸನ್ಮಾನ

ನಗರದ ಶ್ರೀ ಅಕ್ಷರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ವತಿಯಿಂದ ಭರ್ಜರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸ ಲಾಯಿತು. ಬಳಿಕ ಮಾತನಾಡಿದ ವಿದ್ಯಾರ್ಥಿಗಳ ಈ ಸಾಧನೆ ಕಾಲೇಜಿಗೆ ಹೆಮ್ಮೆಯ ವಿಷಯ ವಾಗಿದ್ದು ಇತರ ವಿದ್ಯಾರ್ಥಿ ಗಳಿಗೆ ಪ್ರೇರಣೆಯಾಗಿದೆ

“ಶಿಡ್ಲಘಟ್ಟದಲ್ಲಿ ಅಕ್ಷರ ಪಿಯು ವಿದ್ಯಾರ್ಥಿಗಳ ಸಾಧನೆಗೆ ಭರ್ಜರಿ ಅಭಿನಂದನೆ”

ಶಿಡ್ಲಘಟ್ಟ: ಶಿಕ್ಷಕರ ಹಾಗೂ ಪೋಷಕರ ಸರಿಯಾದ ಮಾರ್ಗದರ್ಶನದಿಂದಲೇ ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಾಂಶುಪಾಲ ಬಿ.ವಿ. ಪ್ರಕಾಶ್ ಹೇಳಿದರು.

ನಗರದ ಶ್ರೀ ಅಕ್ಷರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ವತಿಯಿಂದ ಭರ್ಜರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸ ಲಾಯಿತು. ಬಳಿಕ ಮಾತನಾಡಿದ ವಿದ್ಯಾರ್ಥಿಗಳ ಈ ಸಾಧನೆ ಕಾಲೇಜಿಗೆ ಹೆಮ್ಮೆಯ ವಿಷಯ ವಾಗಿದ್ದು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ತಾಲ್ಲೂಕು ಕಚೇರಿಯಲ್ಲಿ ಜಗಜೀವನ ರಾಮ್ ಜಯಂತಿ ಆಚರಣೆ

ಈ ಬಾರಿ ಏಳು ಮಂದಿ ವಿದ್ಯಾರ್ಥಿಗಳು 580ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಕಾಲೇಜಿನ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ ಎಂದು ತಿಳಿಸಿದರು.

cbpm2a

ವಿದ್ಯಾರ್ಥಿಗಳ ಸಾಧನೆ ಸಂಭ್ರಮಿಸಲು ಕಾಲೇಜು ಆವರಣದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಭ್ರಮಾಚರಣೆಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಸುಮಂತ್ ಎಸ್., ಬಿ.ವಿ. ರಮೇಶ್, ಶುಭ ವಿ., ಕಮಲ ಚಂದ್ರಶೇಖರ್, ರಾಕೇಶ್ ಕುಮಾರ್, ರಾಜೇಶ್ ಕುಮಾರ್ ಸೇರಿದಂತೆ ಉಪನ್ಯಾಸಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

image

“ಚೈತ್ರ ಶ್ರೀ ಜೆ – ತಾಲೂಕಿಗೆ ಪ್ರಥಮ ಸ್ಥಾನ” “ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅಕ್ಷರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತ್ರ ಶ್ರೀ ಜೆ ಅವರು 600ಕ್ಕೆ 593 ಅಂಕಗಳನ್ನು ಗಳಿಸಿ ಶಿಡ್ಲಘಟ್ಟ ತಾಲೂಕಿನ ಇತಿಹಾಸದಲ್ಲೇ ದಾಖಲೆಯ ಸಾಧನೆ ಮಾಡಿದ್ದಾರೆ. ಕನ್ನಡದಲ್ಲಿ 99, ಇಂಗ್ಲೀಷ್ 94 ಹಾಗೂ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರದಲ್ಲಿ ತಲಾ 100 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ, ಜಿಲ್ಲೆಗೆ ದ್ವಿತೀಯ ಹಾಗೂ ರಾಜ್ಯಕ್ಕೆ 7ನೇ ಸ್ಥಾನ ಗಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ಈ ಅಪೂರ್ವ ಸಾಧನೆ ಕಾಲೇಜಿನಷ್ಟೇ ಅಲ್ಲ, ಇಡೀ ತಾಲೂಕಿಗೂ ಕೀರ್ತಿ ತಂದಿದೆ.”

— ಬಿ.ವಿ. ಪ್ರಕಾಶ್, ಪ್ರಾಂಶುಪಾಲ-