ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

International Yoga Day: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಜಿ.ಪ್ರಭು

ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಈ ಬಾರಿಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು ಹಾಗೂ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ೧೨ನೇ ಯೋಗದಿನಾಚರಣೆ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿದರು.

ಚಿಕ್ಕಬಳ್ಳಾಪುರ: ಜೂ.21ರಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ(International Yoga Day)ಯ ಪ್ರಯುಕ್ತ ಜಿಲ್ಲಾಮಟ್ಟದ ಕಾರ್ಯಕ್ರಮವು ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನದೊಂದಿಗೆ ಆಚರಣೆ ಮಾಡಲಾಗುವುದು. ಈ ಸಂಬಂಧ ಪೂರ್ವ ಸಿದ್ಧತಾ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ 12ನೇ ಯೋಗ ದಿನಾಚರಣೆ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಇದನ್ನೂ ಓದಿ: International Yoga Day: International Yoga Day: ಪ್ರಧಾನಿ ಮೋದಿಯಿಂದ ಹಿಡಿದು ಲಂಡನ್‌ವರೆಗೆ; ದೇಶ ವಿದೇಶದಲ್ಲಿ ಯೋಗ ದಿನಾಚರಣೆ

ಈ ವರ್ಷ 12ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಈ ಬಾರಿಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು ಹಾಗೂ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು.

ಜೂ.21ರ ಬೆಳಿಗ್ಗೆ 7 ಗಂಟೆಗೆ ಯೋಗ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಸದರಿ ಕಾರ್ಯಕ್ರಮ ಗಳನ್ನು ಯಶಸ್ವಿಯಾಗಿ ಹಾಗೂ ಸಮರ್ಪಕವಾಗಿ ಆಯೋಜಿಸುವ ಸಂಬಂಧ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಪಹಾರ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆಗೆ ವ್ಯವಸ್ಥೆ, ಭದ್ರತೆ, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ವಹಿಸಲು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

15cbpm411

ಆಯುಷ್ ಇಲಾಖೆ(Ayush Department)ಯ ಅಧಿಕಾರಿಗಳು ಇತರ ಇಲಾಖೆಯ ಅಧಿಕಾರಿ ಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯಕ್ರಮಕ್ಕೆ 2,000ಕ್ಕಿಂತಲೂ ಹೆಚ್ಚಿನ ಜನರನ್ನು ಸೇರಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಹಾಗೂ ಇತರ ಇಲಾಖೆಯವರು ಸಹಕಾರ ನೀಡಲು ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ಎಲ್ ಸಂದರರಾಜ, ಪತಂಜಲಿ  ಯೋಗ ಸಂಸ್ಥೆಯ ಜಿ ಗೋವಿಂದ, ಯೋಗ ಗುರುಗಳಾದ ಲೋಕನಾಥ್, ನಾಗರಾಜ್, ವೀಣಾ ಲೋಕನಾಥ್, ಯೋಗ ಶಿಕ್ಷಕರು ಹಾಗೂ ವಿವಿಧ ಇಲಾಖೆಯ  ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.