ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳ ನಿರ್ಲಕ್ಷ್ಯದ ಆರೋಪ; ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ

ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರು ಪಕ್ಷದ ಹಿರಿಯ ಹಾಗೂ ಅನುಭವಿ ನಾಯಕರಾಗಿದ್ದಾರೆ. ಕಳೆದ ಮೂರು ದಶಕ ಗಳಿಂದ ಪಕ್ಷ ಸಂಘಟನೆಗೆ ಸೇವೆ ಸಲ್ಲಿಸಿರುವ ಅವರು ಯುವ ಮೋರ್ಚಾದಿಂದ ಆರಂಭಿಸಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ

ಕೆ.ಎಂ. ಸುರೇಶ್ ಗೆಲುವಿಗೆ ಬಿಜೆಪಿ ರಣಕಹಳೆ

-

Profile
Ashok Nayak Aug 5, 2026 9:00 PM

ಶಿಡ್ಲಘಟ್ಟ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ (NDA Candidate K M Suresh) ಅವರ ಪರ ಭಾರತೀಯ ಜನತಾ ಪಕ್ಷ(BJP)ವು ಸಂಪೂರ್ಣ ಶಕ್ತಿಯೊಂದಿಗೆ ಚುನಾವಣಾ ಪ್ರಚಾರ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹೇಳಿದರು.

ನಗರದ ಬಿಜೆಪಿ ಕಚೇರಿ 'ಸೇವಾ ಸೌಧ'ದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರು ಪಕ್ಷದ ಹಿರಿಯ ಹಾಗೂ ಅನುಭವಿ ನಾಯಕರಾಗಿದ್ದಾರೆ. ಕಳೆದ ಮೂರು ದಶಕ ಗಳಿಂದ ಪಕ್ಷ ಸಂಘಟನೆಗೆ ಸೇವೆ ಸಲ್ಲಿಸಿರುವ ಅವರು ಯುವ ಮೋರ್ಚಾದಿಂದ ಆರಂಭಿಸಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ನೆರವು ನೀಡಿರುವುದ ರೊಂದಿಗೆ, ಅನೇಕ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಮಾಜಮುಖಿ ಸೇವೆ ಸಲ್ಲಿಸಿರುವ ಕೆ.ಎಂ. ಸುರೇಶ್ ಅವರನ್ನು ಪದವೀಧರ ಮತದಾರರು ಬೆಂಬಲಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Shidlaghatta News: ವೇದಘೋಷ ಮೊಳಗಿದ ಶ್ರೀ ನಗರೇಶ್ವರ ಸ್ವಾಮಿ ಸನ್ನಿಧಿ: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ರೈತರ ಸಮೃದ್ಧಿಗೆ ವಿಶೇಷ ವೇದಪಾರಾಯಣ

ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಈಗಾಗಲೇ ಚುನಾವಣಾ ಕಾರ್ಯ ಆರಂಭಿಸಿದ್ದು, ಜಿಲ್ಲೆಯ ಎಲ್ಲ ಮಂಡಲಗಳಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತಿದೆ. ಮತದಾರರನ್ನು ನೇರವಾಗಿ ಸಂಪರ್ಕಿಸಿ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಅಭ್ಯರ್ಥಿಯ ಸೇವಾ ಕಾರ್ಯ ಗಳನ್ನು ಜನರಿಗೆ ತಿಳಿಸಲಾಗುವುದು. ಎನ್‌ಡಿಎ ಅಭ್ಯರ್ಥಿಯ ಗೆಲುವಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸಲಿದ್ದಾನೆ ಎಂದು ತಿಳಿಸಿದರು.

ಸರ್ಕಾರದ ವಿರುದ್ಧ ವಾಗ್ದಾಳಿ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸೀಕಲ್ ರಾಮಚಂದ್ರಗೌಡ ಆರೋಪಿಸಿದರು. ಎರಡೂ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ರಾಜಕೀಯ ತಾರತಮ್ಯ ಎಸಗಲಾಗಿದೆ. ಅಭಿವೃದ್ಧಿ ಕಾಮಗಾರಿಗಳಲ್ಲೂ ಜಿಲ್ಲೆ ಗಳನ್ನು ಕಡೆಗಣಿಸಲಾಗಿದ್ದು, ಜನರ ನಿರೀಕ್ಷೆಗಳು ಈಡೇರಿಲ್ಲ ಎಂದು ದೂರಿದರು.

cbpm3bjp (1)

ಬರದ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಬೆಳೆ ನಷ್ಟ ಪರಿಹಾರ, ಅಗತ್ಯ ಪರಿಹಾರ ಪ್ಯಾಕೇಜ್ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ, ಸಚಿವ ಸ್ಥಾನ ಸೇರಿದಂತೆ ಅಭಿವೃದ್ಧಿ ವಿಚಾರದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿ ದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ಸುರೇಂದ್ರ ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳ ಎಸ್., ನರ್ಮದಾ, ತ್ರಿವೇಣಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.