ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

B Y Vijayendra: ಜಿಲ್ಲೆಯ ಜಲಮೂಲಗಳ ಕಲುಷಿತ ಆರೋಪ; ರೈತ ಮುಖಂಡ ಮಳ್ಳೂರು ಶಿವಣ್ಣ ಮನವಿ

ರಾಜ್ಯದಲ್ಲಿ ಸುಮಾರು ಎರಡು ಲಕ್ಷ ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ಬಾಗೇಪಲ್ಲಿ ಭಾಗಗಳಲ್ಲೇ ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ರೇಷ್ಮೆ ಕೃಷಿ ನಡೆಯುತ್ತಿದೆ. ಉತ್ತಮ ಗುಣಮಟ್ಟದ ರೇಷ್ಮೆ ಉತ್ಪಾದನೆಯಾಗುತ್ತಿದ್ದರೂ ಚೀನಾ ಮತ್ತು ವಿಯೆಟ್ನಾಂನಿಂದ ರೇಷ್ಮೆ ನೂಲು ಆಮದಾಗುತ್ತಿರುವುದು ಸ್ಥಳೀಯ ಬೆಳೆಗಾರರಿಗೆ ತೊಂದರೆ ಉಂಟುಮಾಡುತ್ತಿದೆ

ಕೆ.ಸಿ.–ಎಚ್.ಎನ್.ವ್ಯಾಲಿ ನೀರಿಗೆ ಪರ್ಯಾಯವಾಗಿ ಕೃಷ್ಣಾ ನೀರು ಹರಿಸಿ

-

Profile
Ashok Nayak Oct 5, 2026 12:18 AM

ಚಿಕ್ಕಬಳ್ಳಾಪುರ: ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ. ವ್ಯಾಲಿ ಹಾಗೂ ಎಚ್.ಎನ್. ವ್ಯಾಲಿ ನೀರಿನಿಂದ ಜಿಲ್ಲೆಯ ಜಲಮೂಲಗಳು ಕಲುಷಿತವಾಗುತ್ತಿವೆ ಎಂಬ ಆತಂಕವಿದ್ದು, ಇದರ ಬದಲಿಗೆ ಲಿಂಗನ ಮಕ್ಕಿ, ನೇತ್ರಾವತಿ ಹಾಗೂ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರನ್ನು ಜಿಲ್ಲೆಗೆ ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಮಳ್ಳೂರು ಶಿವಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(B Y Vijayendra) ಅವರಿಗೆ ಮನವಿ ಮಾಡಿದರು.

ಶಿಡ್ಲಘಟ್ಟದ ವಾಸವಿ ಶಾಲಾ ಆವರಣದಲ್ಲಿ ನಡೆದ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ಕೃಷಿ ಬೆಳೆಗಳು ಹಾಗೂ ರೈತರು ಎದುರಿಸುತ್ತಿರುವ ಮಾರುಕಟ್ಟೆ ಸಮಸ್ಯೆಗಳ ಕುರಿತು ಗಮನ ಸೆಳೆದರು.

ಇದನ್ನೂ ಓದಿ: B Y Vijayendra: 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ: ವಿಜಯೇಂದ್ರ

ರಾಜ್ಯದಲ್ಲಿ ಸುಮಾರು ಎರಡು ಲಕ್ಷ ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ಬಾಗೇಪಲ್ಲಿ ಭಾಗಗಳಲ್ಲೇ ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ರೇಷ್ಮೆ ಕೃಷಿ ನಡೆಯುತ್ತಿದೆ. ಉತ್ತಮ ಗುಣಮಟ್ಟದ ರೇಷ್ಮೆ ಉತ್ಪಾದನೆಯಾಗುತ್ತಿದ್ದರೂ ಚೀನಾ ಮತ್ತು ವಿಯೆಟ್ನಾಂನಿAದ ರೇಷ್ಮೆ ನೂಲು ಆಮದಾಗುತ್ತಿರುವುದು ಸ್ಥಳೀಯ ಬೆಳೆಗಾರರಿಗೆ ತೊಂದರೆ ಉಂಟುಮಾಡುತ್ತಿದೆ ಎಂದು ಹೇಳಿದರು.

ರೇಷ್ಮೆ ಉದ್ಯಮವನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗುವಂತೆ ಕಚ್ಚಾ ಹಾಗೂ ಹುರಿ ರೇಷ್ಮೆ ಸಾಗಾಟದ ಮೇಲಿನ ತೆರಿಗೆ ಮತ್ತು ದಂಡದ ಸಮಸ್ಯೆಗಳನ್ನು ಪರಿಹರಿಸ ಬೇಕು. ರೈತರಿಗೆ ಹಾಗೂ ರೀಲರ್‌ಗಳಿಗೆ ಅನುಕೂಲವಾಗುವ ನಿಯಮಗಳನ್ನು ರೂಪಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

4cbpm5l BYV

ಹೂವು, ಟೊಮೆಟೊ, ದ್ರಾಕ್ಷಿ, ದಾಳಿಂಬೆ, ಸೀಬೆ, ಸಪೋಟಾ ಸೇರಿದಂತೆ ಹಣ್ಣುಗಳು ಹಾಗೂ ತರಕಾರಿಗಳ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಬೆಲೆ ಕುಸಿತದ ಸಂದರ್ಭದಲ್ಲಿ ಉತ್ಪನ್ನಗಳನ್ನು ಸಂಗ್ರಹಿಸಿಡಲು ಶೀತಲೀಕರಣ ಘಟಕಗಳು, ಆಹಾರ ಸಂಸ್ಕರಣಾ ಘಟಕಗಳು ಹಾಗೂ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದರು.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶದಲ್ಲಿ ಮಾವು ಬೆಳೆಯ ಲಾಗುತ್ತಿದ್ದು, ಹಲವು ವರ್ಷಗಳಿಂದ ರೈತರಿಗೆ ನಿರೀಕ್ಷಿತ ಆದಾಯ ಸಿಗುತ್ತಿಲ್ಲ. ಮಾವು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಮೂಲಕ ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕಲ್ಪಿಸಬೇಕು. ಹೈನುಗಾರಿಕೆಗೆ ಉತ್ತೇಜನ ನೀಡಲು ಕೋಲಾರ–ಚಿಕ್ಕಬಳ್ಳಾಪುರ–ಬೆಂಗಳೂರು ಹಾಲು ಒಕ್ಕೂಟಕ್ಕೆ ವಿಶೇಷ ನೆರವು, ಪಶು ಆಹಾರಕ್ಕೆ ಹೆಚ್ಚಿನ ಸಬ್ಸಿಡಿ ನೀಡಬೇಕು ಎಂದು ಒತ್ತಾಯಿಸಿದರು.

4cbpm5d BYV

ಜಿಲ್ಲೆಯಲ್ಲಿ ಬೆಳೆಯುವ ರಾಗಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಶಿಫಾರಸು ಮಾಡಬೇಕು. ಹೂವು ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ರೈತರ ಜಮೀನು ಸ್ವಾಧೀನದ ಸಂದರ್ಭದಲ್ಲಿ ಸೂಕ್ತ ಪರಿಹಾರ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಿವಣ್ಣ ಮನವಿ ಮಾಡಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ ಬಿ.ವೈ. ವಿಜಯೇಂದ್ರ, 2028ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಾವರಿ ಸೇರಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಆದ್ಯತೆ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ,ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಶಾಸಕ ರಾಜಣ್ಣ, ಆನಂದ್‌ಗೌಡ, ರೂಪಸಿ ರಮೇಶ್, ರೈತ ಮುಖಂಡರಾದ ಯಲುವಹಳ್ಳಿ ಸೊಣ್ಣೇಗೌಡ, ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್, ವೇಣುಗೋಪಾಲ್ ಮತ್ತಿತರರು ಇದ್ದರು.