ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Sadguru: ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವಕ್ಕೆ ಆಳ್ವಾಸ್ ಕಲಾವೈಭವ: 500 ಕಲಾವಿದರಿಂದ ಸಾಂಸ್ಕೃತಿಕ ಪ್ರದರ್ಶನ, ಸಾಹಸ ಕ್ರೀಡೆಗಳ ಸಂಭ್ರಮ

ಶಿಕ್ಷಣದ ಜತೆಗೆ ಆಧ್ಯಾತ್ಮ, ಸಂಗೀತ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಪ್ರಮಾಣಪತ್ರ ಕೋರ್ಸ್‌ಗಳನ್ನು ಆರಂಭಿಸುವ ಚಿಂತನೆಯಿದೆ. ಮುಂದಿನ ಹಂತದಲ್ಲಿ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾಪನೆಗೂ ಪ್ರಯತ್ನಿಸಲಾಗುವುದು. ಈಗಾಗಲೇ ವಿವಿಧ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳ ಲಾಗಿದೆ. ಮೌಲ್ಯಾಧಾರಿತ ಶಿಕ್ಷಣದ ಭಾಗವಾಗಿ ವಿದ್ಯಾರ್ಥಿಗಳೇ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ: ಸತ್ಯಸಾಯಿ ಗ್ರಾಮದ 50 ವರ್ಷಗಳ ಸೇವಾ ಪಯಣದ ಸುವರ್ಣ ಮಹೋತ್ಸವದ ಅಂಗವಾಗಿ ನ.26ರಂದು ಮುದ್ದೇನಹಳ್ಳಿಯಲ್ಲಿ ಅದ್ದೂರಿ ಸಾಂಸ್ಕೃತಿಕ ಸಂಭ್ರಮ ಆಯೋಜಿಸ ಲಾಗಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500 ಕಲಾವಿದರು ವೈವಿಧ್ಯಮಯ ಕಲಾ ಪ್ರದರ್ಶನ ನೀಡಲಿದ್ದು, ಸಾಹಸ ಕ್ರೀಡೆಗಳ ಪ್ರದರ್ಶನವೂ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್(One World One Family Mission) ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.

ಸತ್ಯಸಾಯಿ ಗ್ರಾಮದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಐದು ದಶಕಗಳ ಸೇವಾ ಪಯಣದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕ್ಷೇತ್ರಗಳ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಲಾಗಿದೆ. ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದು, ಸ್ಥಳೀಯ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸಂಭ್ರಮ ಹೆಚ್ಚಿಸಬೇಕು ಎಂದು ಆಹ್ವಾನಿಸಿದರು.

ಇದನ್ನೂ ಓದಿ: Sadguru Sri Madhusudan Sai: ಪ್ರೇಮದ ಮೂಲಕವೇ ನಿಜವಾದ ಸೇವೆ ಸಾಧ್ಯ: ಸದ್ಗುರು ಶ್ರೀ ಮಧುಸೂದನ ಸಾಯಿ

ನ.26ರಂದು ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 5ರಿಂದ 6ರವರೆಗೆ ಮೊದಲ ಹಂತದ ಕಾರ್ಯಕ್ರಮ ನಡೆಯಲಿದೆ. 

ಸಂಜೆ 6ರಿಂದ ರಾತ್ರಿ 9ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ 500 ಕಲಾವಿದರು ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಲಿದ್ದಾರೆ. ಇದರೊಂದಿಗೆ ಸಾಹಸ ಕ್ರೀಡೆಗಳ ಪ್ರದರ್ಶನವೂ ನಡೆಯಲಿದೆ. ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವ, ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 101ನೇ ಜನ್ಮೋತ್ಸವ ಹಾಗೂ ಮಡಿಯಾಲ ನಾರಾಯಣ ಭಟ್ ಅವರ ಜನ್ಮದಿನದ ಸಂಭ್ರಮಗಳು ಒಂದೇ ವೇದಿಕೆಯಲ್ಲಿ ಸೇರಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಸಂಸ್ಥೆಯ ಸೇವಾ ಚಟುವಟಿಕೆಗಳ ಕುರಿತು ವಿವರಿಸಿದ ಅವರು, ಅನ್ನಪೂರ್ಣ ಕಾರ್ಯಕ್ರಮದಡಿ ಕರ್ನಾಟಕದಾದ್ಯಂತ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಗಿನ ಉಪಾಹಾರ ಒದಗಿಸಲಾಗುತ್ತಿದೆ. ಮೌಲ್ಯಾಧಾರಿತ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶೇ.50ರಷ್ಟು ಹೆಣ್ಣುಮಕ್ಕಳಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿಯೂ ವಿವಿಧ ರಾಜ್ಯಗಳ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಬಿ.ಎನ್. ನರಸಿಂಹಮೂರ್ತಿ, ಸತ್ಯಸಾಯಿ ಲೋಕಸೇವಾ ಗುರುಕುಲಂ ಮುದ್ದೇನಹಳ್ಳಿಯ ಪ್ರಧಾನ ಪಾಲಕ ನಿಕೇತನ್ ಉಪಸ್ಥಿತರಿದ್ದರು.

ಗ್ರಾಮೀಣ ಮಕ್ಕಳಿಗೆ ಎಐ ತರಬೇತಿ ಕೇಂದ್ರ: ಗ್ರಾಮೀಣ ಭಾಗದ ಮಕ್ಕಳಿಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಶಿಕ್ಷಣ ಮತ್ತು ತರಬೇತಿ ಒದಗಿಸುವ ಉದ್ದೇಶದಿಂದ ವಿಶ್ವೇಶ್ವರಯ್ಯ ಆರ್ಟಿಫಿಷಿ ಯಲ್ ಇಂಟೆಲಿಜೆನ್ಸ್ ಕೇಂದ್ರ ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸದ್ಗುರು ಮಧುಸೂದನ ಸಾಯಿ ತಿಳಿಸಿದರು.

ಮುಂದಿನ ದಿನಗಳಲ್ಲಿ ವಿಶ್ವೇಶ್ವರಯ್ಯ ಅಪ್ಲೈಡ್ ಎಂಜಿನಿಯರಿಂಗ್ ಆ್ಯಂಡ್ ಸೈನ್ಸ್ ಸಂಸ್ಥೆ ಆರಂಭಿಸುವ ಉದ್ದೇಶವಿದ್ದು, ಸ್ಥಳೀಯ ಮಕ್ಕಳಿಗೆ ಆಧುನಿಕ ತಂತ್ರಜ್ಞಾನ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. 

ಶಿಕ್ಷಣದ ಜತೆಗೆ ಆಧ್ಯಾತ್ಮ, ಸಂಗೀತ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಪ್ರಮಾಣಪತ್ರ ಕೋರ್ಸ್‌ ಗಳನ್ನು ಆರಂಭಿಸುವ ಚಿಂತನೆಯಿದೆ. ಮುಂದಿನ ಹಂತದಲ್ಲಿ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾಪನೆಗೂ ಪ್ರಯತ್ನಿಸಲಾಗುವುದು. ಈಗಾಗಲೇ ವಿವಿಧ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೌಲ್ಯಾಧಾರಿತ ಶಿಕ್ಷಣದ ಭಾಗವಾಗಿ ವಿದ್ಯಾರ್ಥಿಗಳೇ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ ಎಂದರು.