Chikkaballapur News: ಶೋಷಿತ ಸಮುದಾಯಗಳಿಗೆ ಅಂಬೇಡ್ಕರ್ ಹಾಗೂ ಬಾಬು ಜನಜೀವನರಾಂ ಎರಡು ಕಣ್ಣುಗಳಿದ್ದಂತೆ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ
ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯು ತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶು ಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು

ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ರವರು ನಮ್ಮ ಸಮಾಜದ ಶೋಷಿತ ವರ್ಗದ ಏಳಿಗೆಗಾಗಿ ಅಹರ್ನಿಶಿ ಶ್ರಮಿಸಿ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರಿಬ್ಬರೂ ಶೋಷಿತ ಸಮುದಾಯಗಳ ಎರಡು ಕಣ್ಣುಗಳಿದ್ದಂತೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ : ಡಾ.ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ರವರು ನಮ್ಮ ಸಮಾಜದ ಶೋಷಿತ ವರ್ಗದ ಏಳಿಗೆಗಾಗಿ ಅಹರ್ನಿಶಿ ಶ್ರಮಿಸಿ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರಿಬ್ಬರೂ ಶೋಷಿತ ಸಮುದಾಯಗಳ ಎರಡು ಕಣ್ಣುಗಳಿದ್ದಂತೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ದಲ್ಲಿ ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಡಾ.ಬಾಬು ಜಗಜೀವನರಾಂ ರವರ 118ನೇ ಜಯಂತಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: Chitradurga Accident: ಚಿತ್ರದುರ್ಗದಲ್ಲಿ 15 ಪಲ್ಟಿ ಹೊಡೆದ ಕಾರು; ಮೂವರ ಸಾವು, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯು ತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು. ಯಾರಿಗೆ ಶಿಕ್ಷಣ ಇದೆಯೋ ಅಂತಹವರಿಗೆ ರಾಜಕೀಯ ಅಧಿಕಾರ, ಗೌರವ, ಆರ್ಥಿಕ ಲಾಭ ಎಲ್ಲವೂ ದೊರೆಯುತ್ತದೆ ಎಂಬುದನ್ನು ಅರಿತ್ತಿದ್ದರು. ಶಿಕ್ಷಣ, ದುಡಿಮೆ, ತಾಳ್ಮೆ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಾವು ಯಶಸ್ಸು ಕಾಣಬಹುದು ಎಂದರು.
1946ರಲ್ಲಿ ಜವಾಹರಲಾಲ್ ನೆಹರು ರವರ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಚನೆಯಾಗಿದ್ದ ಕೇಂದ್ರ ಸರ್ಕಾರದಲ್ಲಿ ಕಿರಿಯ ಸಚಿವರಾಗಿದ್ದರು. ಸ್ವಾತಂತ್ರ‍್ಯ ನಂತರದಲ್ಲಿ ಕಾರ್ಮಿಕ, ಸಂವಹನ, ರಕ್ಷಣಾ ಮತ್ತು ಕೃಷಿ ಖಾತೆಗಳ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ದೇಶಕ್ಕೆ ತನ್ನದೇ ಆದ ಕೊಡುಗೆಗಳ ಹೆಗ್ಗುರುತುಗಳನ್ನು ನೀಡಿದ್ದಾರೆ. ದೇಶದಲ್ಲಿ ಆಹಾರದ ಕೊರತೆ ಉಂಟಾಗಿದ್ದAತಹ ಸಂದರ್ಭದಲ್ಲಿ ಆಧುನಿಕ ಕೃಷಿ ಪದ್ಧತಿಗಳನ್ನು ಜಾರಿಗೆ ತಂದು ಹೆಚ್ಚು ಹೆಚ್ಚು ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೆರೇಪಿಸಿ ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತಿ ಪಡೆದರು. ಬಾಬೂಜಿ ಎಂದೇ ಹೆಸರಾಗಿದ್ದ ಅವರು ನಿಸ್ವಾರ್ಥ ಸುದೀರ್ಘ ರಾಜ ಕೀಯ ಸೇವೆ ಹಾಗೂ ಸ್ವಾತಂತ್ರ‍್ಯ ಪೂರ್ವದಲ್ಲಿ ಸ್ವಾತಂತ್ರ‍್ಯ ಹೋರಾಟದಿಂದ ಆದರ್ಶ ಪ್ರಾಯ ವ್ಯಕ್ತಿಯಾಗಿದ್ದಾರೆ. ಅವರು 3 ದಶಕಗಳ ಕಾಲ ಕೇಂದ್ರ ಮಂತ್ರಿಮಂಡಲದ ಸದಸ್ಯ ರಾಗಿ ಅಪಾರ ಆಡಳಿತ ಅನುಭವ ಗಳಿಸಿದ್ದರು ಎಂದು ಬಣ್ಣಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜಯೇಂದ್ರ ಕುಮಾರ್ ಅವರು ಮಾತನಾಡುತ್ತಾ ಜಗಜೀವನ್ ರಾಂ ರವರು ದೇಶ ಕಂಡ ನಿಸ್ವಾರ್ಥ ಹಾಗೂ ಸ್ವಾಭಿಮಾನಿ ರಾಜಕಾರಿಣಿ. ಶಿಕ್ಷಣ, ಸಂಘಟನೆ ಹಾಗೂ ಹೋರಾಟದಲ್ಲಿ ಬಲವಾಗಿ ನಂಬಿಕೆ ಇಟ್ಟಿದ್ದರು. ಕೆಲವು ರಾಜಕೀಯ ನಾಯಕರು ಅಧಿಕಾರ ಸಿಗುವವರೆಗೂ ಮಾತ್ರ ಜಾತಿ ರಹಿತವಾದ ಹೋರಾಟಗಳಲ್ಲಿ ಗುರುತಿಸಿಕೊಳ್ಳುತ್ತಾರೆ. ಅಧಿಕಾರ ಸಿಕ್ಕಮೇಲೆ ಮೌನ ರಾಗುತ್ತಾರೆ. ಅದಕ್ಕೆ ಹೊರತಾದವರು ಬಾಬೂಜೀ ರವರು. ಅವರು ಜಾತಿ ವ್ಯವಸ್ಥೆಯನ್ನು ಮೆಟ್ಟಿನಿಂತು ಉನ್ನತ ಶಿಕ್ಷಣವನ್ನು ಪಡೆದು ದೇಶಕ್ಕೆ ಎಂದೂ ಮರೆಯಲಾಗದ ಕೊಡುಗೆ ಗಳನ್ನು ನೀಡಿದ್ದಾರೆ. ಅವರ ದಾರಿಯಲ್ಲಿ ನಾವೆಲ್ಲರೂ ನಡೆದು ಬಾಬೂಜೀಯವರ ವಿಚಾರದಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಉತ್ತಮ ಸಮಾಜ ನಿರ್ಮಿಣಕ್ಕೆ ಶ್ರಮಿಸಬೇಕೆಂದು ಕರೆ ನೀಡಿದರು. ಜಗಜೀವನರಾಂ ರವರ ಜೀವನ ಚರಿತ್ರೆಯ ಮಜಲುಗಳನ್ನು ಕಾರ್ಯಕ್ರಮದಲ್ಲಿ ತಿಳಿಸಿ ಕೊಟ್ಟರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಉಪ ಪೊಲೀಸ್ ಅಧೀಕ್ಷಕ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ತಹಸಿಲ್ದಾರ್ ಅನಿಲ್, ಜಿಲ್ಲಾ ಉಸ್ತುವಾರಿ ಜಾಗೃತಿ ಸಮಿತಿಯ ಸದಸ್ಯ ರು, ಸಫಾಯಿ ಕರ್ಮಚಾರಿ ಸಮಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿ ಕಾರಿಗಳು, ಸಧ್ಯಸ್ಯರು, ವಿವಿಧ ಇಲಾಖೆಯ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.