ಚಿಂತಾಮಣಿ : ಚಿಂತಾಮಣಿ ತಾಲೂಕಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ(Dr B R Ambedkar Bhavan), ಅನುಭವ ಕೇಂದ್ರ ಹಾಗೂ ಐತಿಹಾಸಿಕ ಆಜಾದ್ ಚೌಕ್ ಉದ್ಘಾಟನೆಯಾಗಿರುವುದು ಸಂತಸ ತಂದಿದೆ. ಈ ದಿನ ಚಿಂತಾಮಣಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಐತಿಹಾಸಿಕ ವಾಗಿದ್ದು, ಸಾರ್ವಜನಿಕ ಸೇವೆಯ ಹಾದಿಗೆ ಮತ್ತಷ್ಟು ಶಕ್ತಿ ತುಂಬಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ.ಎಂ.ಸಿ.ಸುಧಾಕರ್(Dr M C Sudhakar) ಹೇಳಿದರು.
ಚಿಂತಾಮಣಿಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಭವನ ಹಾಗೂ ಅನುಭವ ಕೇಂದ್ರ ಮಹತ್ವದ ಪಾತ್ರ ವಹಿಸಲಿದೆ” ಎಂದರು.
ಇದನ್ನೂ ಓದಿ: Dr M C Sudhakar: ಚಿಂತಾಮಣಿಯಲ್ಲಿ ಕ್ರೀಡಾಂಗಣ, ಸಿಂಥೆಟಿಕ್ ಟ್ರ್ಯಾಕ್ ಅಭಿವೃದ್ಧಿ: ಶಾಸಕ ಡಾ.ಎಂ.ಸಿ.ಸುಧಾಕರ್
ಬಾಬಾಸಾಹೇಬರು ಶೋಷಿತರು, ದಲಿತರು ಹಾಗೂ ಅವಕಾಶ ವಂಚಿತ ಸಮುದಾಯಗಳ ಹಕ್ಕು ಗಳಿಗಾಗಿ ನಡೆಸಿದ ಹೋರಾಟ ಮತ್ತು ಸಂವಿಧಾನದ ಮೂಲಕ ಸಮಾನತೆಯ ಸಮಾಜ ನಿರ್ಮಿಸುವ ಅವರ ಕನಸನ್ನು ಜನರಿಗೆ ತಿಳಿಸುವಂತಹ ಕೇಂದ್ರವಾಗಿ ಇದು ರೂಪುಗೊಳ್ಳಲಿದೆ. ಯುವಜನರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
“ಅಂಬೇಡ್ಕರ್ ಭವನ ನನ್ನ ದೂರದೃಷ್ಟಿಯ ಕನಸಿನ ಕೂಸಾಗಿದ್ದು, ಇಂದು ಅದು ನನಸಾಗಿರು ವುದು ಅತ್ಯಂತ ಸಂತೋಷದ ಕ್ಷಣ. ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಸೇವೆಗೆ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸಲು ಈ ದಿನ ಹೊಸ ಉತ್ಸಾಹ ನೀಡಿದೆ” ಎಂದು ಡಾ.ಎಂ.ಸಿ.ಸುಧಾಕರ್ ಹೇಳಿದರು.
ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಹಿರಿಯ ನಾಯಕರು ಹಾಗೂ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಿರುವುದು ಹೆಮ್ಮೆಯ ಸಂಗತಿ ಎಂದರು.
ಚಿಂತಾಮಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವ ಜನಿಕರ ಸಹಕಾರದೊಂದಿಗೆ ಮುಂದೆಯೂ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗು ವುದು. ಜನರ ಆಶಯಗಳಿಗೆ ಸ್ಪಂದಿಸಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದು ತಮ್ಮ ಮುಖ್ಯ ಗುರಿಯಾಗಿದೆ ಎಂದು ಡಾ.ಎಂ.ಸಿ.ಸುಧಾಕರ್ ತಿಳಿಸಿದರು.