ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿನ ಬದಲಾವಣೆ ಸಾಧ್ಯ ಎಂಬುದು ಅಂಬೇಡ್ಕರ್ʼರವರ ನಿಲುವಾಗಿತ್ತು. ಅವರು ಅನೇಕ ಆಶಯ ಗಳೊಂದಿಗೆ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದರು. ಅವರು ಅನುಭವಿಸಿದಂತಹ ನೋವು, ಅವಮಾನಗಳು ಬೇರೆ ಯಾರೂ ಸಹ ಅನುಭವಿಸಬಾರದೆಂಬ ದೃಷ್ಟಿ ಯಿಂದ ನಮಗೆ ಸಂವಿಧಾನವನ್ನು ರಚಿಸಿಕೊಟ್ಟರು. ಸಂವಿಧಾನದ ಮೂಲಕ ಅಮೂಲಾಗ್ರ ಬದಲಾವಣೆ ತಂದಿದ್ದಾರೆ.

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‍. ಅಂಬೇಡ್ಕರ್‍ ರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. -

Profile
Ashok Nayak Apr 15, 2026 12:24 AM

ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿಯನ್ನು ಅರ್ಥ‌ ಪೂರ್ಣವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಾಪಂ ಇಒ ನಾಗಮಣಿ, ಅಂದಿನ ಕಾಲದಲ್ಲಿದ್ದ ಅಸ್ಪೃಶ್ಯತೆ ಮೆಟ್ಟಿ ನಿಂತು ಸಾಧನೆ ಮಾಡಿದಂತಹ ಅಂಬೇಡ್ಕರ್ ರವರ ಆದರ್ಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕು. ಅಂಬೇಡ್ಕರ್ ರವರು ಓದಿದ ಮಾದರಿ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಅಂದಿನ ಕಾಲದಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದೇ ಬೀದಿ ದೀಪಗಳ ಬಳಿ ಓದಿ ಸಂವಿಧಾನ ಬರೆದುಕೊಡುವಂತಹ ಮಟ್ಟಕ್ಕೆ ಬೆಳೆದರು. ಅವರ ಜಯಂತಿಯನ್ನು ಆಚರಣೆ ಮಾಡಿದರೇ ಮಾತ್ರ ಸಾಲದು ಅವರ ಆದರ್ಶಗಳನ್ನು, ತತ್ವಗಳನ್ನು ಪಾಲನೆ ಮಾಡಿದಾಗ ಮಾತ್ರ ಅವರಿಗೆ ನಿಜವಾದ ಗೌರವ ಕೊಟ್ಟಂತಾಗುತ್ತದೆ ಎಂದರು.

ಇದನ್ನೂ ಓದಿ: Gudibande News: ಶಿಕ್ಷಕರ ಸಂಘದ ಚುನಾವಣೆ: ಒಟ್ಟು 6 ಮಂದಿ ನಾಮಪತ್ರ ಸಲ್ಲಿಕೆ

ಬಳಿಕ ಮುಖಂಡ ಆದಿನಾರಾಯಣಪ್ಪ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿನ ಬದಲಾ ವಣೆ ಸಾಧ್ಯ ಎಂಬುದು ಅಂಬೇಡ್ಕರ್ʼರವರ ನಿಲುವಾಗಿತ್ತು. ಅವರು ಅನೇಕ ಆಶಯಗಳೊಂದಿಗೆ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದರು. ಅವರು ಅನುಭವಿಸಿದಂತಹ ನೋವು, ಅವಮಾನಗಳು ಬೇರೆ ಯಾರೂ ಸಹ ಅನುಭವಿಸಬಾರದೆಂಬ ದೃಷ್ಟಿಯಿಂದ ನಮಗೆ ಸಂವಿಧಾನ ವನ್ನು ರಚಿಸಿಕೊಟ್ಟರು. ಸಂವಿಧಾನದ ಮೂಲಕ ಅಮೂಲಾಗ್ರ ಬದಲಾವಣೆ ತಂದಿದ್ದಾರೆ. ಅಂತಹ ಮಹನೀಯರ ಆಶಯಗಳನ್ನು ಸಾಕಾರಗೊಳಿಸುವಂತಹ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರೇಡ್ -೨ ತಹಸೀಲ್ದಾರ್ ತುಳಸಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಕ್ಷ್ಮೀಪತಿರೆಡ್ಡಿ, ಕೃಷಿ ಇಲಾಖೆಯ ಕೇಶವರೆಡ್ಡಿ ಸೇರಿದಂತೆ ದಲಿತ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಹಾಜರಿದ್ದರು.