Amit shah: ಅಮಿತ್ ಶಾ ಹೇಳಿಕೆ ಖಂಡಿಸಿ ಜ.23ರಂದು ಬೆಂಗಳೂರು ಚಲೋ : ಬಿ.ವಿ.ಆನಂದ್ ಹೇಳಿಕೆ
ಅಮಿತ್ ಶಾ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಗಡಿಪಾರಾದ ವ್ಯಕ್ತಿ. ಗೃಹ ಸಚಿವರು ಕೂಡಲೇ ರಾಜಿ ನಾಮೆ ಕೊಡಬೇಕು. ಅವರನ್ನು ಸಚಿವ ಸಂಪುಟ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಾವೆಲ್ಲರೂ ಬೆಂಬಲ ಕೊಡುತ್ತಿದ್ದೇವೆ ಎಂದು ಹೇಳಿದರು
Source : Chikkaballapur Reporter
ಚಿಕ್ಕಬಳ್ಳಾಪುರ: ಸಂಸತ್ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಹೆಸರು ವ್ಯಸನ ಆಗಿದೆ. ಅದರ ಬದಲು ದೇವರ ನಾಮಸ್ಮರಣೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಹೇಳಿಕೆ ಯನ್ನು ಖಂಡಿಸಿ ಜ.23ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಸಾಂಸ್ಕೃತಿಕ ಸಂಚಾಲಕ ಬಿ.ವಿ ಆನಂದ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಗಡಿಪಾರಾದ ವ್ಯಕ್ತಿ. ಗೃಹ ಸಚಿವರು ಕೂಡಲೇ ರಾಜಿನಾಮೆ ಕೊಡಬೇಕು. ಅವರನ್ನು ಸಚಿವ ಸಂಪುಟ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಾವೆಲ್ಲರೂ ಬೆಂಬಲ ಕೊಡುತ್ತಿದ್ದೇವೆ ಎಂದು ಹೇಳಿದರು.
ದಲಿತ ಮುಖಂಡ ಕೆ.ಜೆ.ಮುನಿರಾಜು ಮಾತನಾಡಿ, ಮಣಿಪುರದಲ್ಲಿ ಸಾಮೂಹಿಕ ಅತ್ಯಾಚಾರ ಆದರೂ ಮೋದಿ ಅವರು ದ್ವನಿ ಎತ್ತುವುದಿಲ್ಲ. ಸೌಜನ್ಯ ಪ್ರಕರಣದಲ್ಲಿ ಸಹ ಕ್ರಮಕ್ಕೆ ಮುಂದಾಗುವು ದಿಲ್ಲ. ಭೇಟಿ ಬಚಾವೋ ಭೇಟಿ ಪಡಾವೋ ಎಂದು ಹೇಳುವ ಮೋದಿ ಭೇಟಿ ಮೇಲೆ ಅತ್ಯಾಚಾರ ಆದರೂ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ದೂರಿದರು.
ಮೋದಿ ಅವರಿಗೆ ಮತ ನೀಡುವ ಹಕ್ಕು ನೀಡಿದ್ದು ಸಂವಿಧಾನ. ಆದರೆ ಅಮಿತ್ ಶಾ ಹೇಳಿಕೆಯನ್ನು ಇದುವರೆಗೆ ಖಂಡಿಸಿಲ್ಲ. ಬ್ರಿಜ್ ಭೂಷಣ್ ಸಿಂಗ್ ಅವರ ನಡೆಯನ್ನು ಸಹ ಮೋದಿ ಸಮರ್ಥಿಸಿ ಕೊಂಡಿದ್ದಾರೆ. ಮಹಿಳೆಯರ ವಿಚಾರದಲ್ಲಿ ಕೆಟ್ಟದಾಗಿ ನಡೆದುಕೊಳ್ಳುವವರ ಪರವಾಗಿ ಮೋದಿ ಮತ್ತು ಅಮಿತ್ ಶಾ ನಿಂತಿದ್ದಾರೆ. ಸಂವಿಧಾನ ಬದಲಾವಣೆಯೇ ಅವರ ಮುಖ್ಯ ಉದ್ದೇಶ.
ಅಮಿತ್ ಶಾ ಅವರ ವಿರುದ್ಧ ಕ್ರಮ ಆಗಬೇಕು. ಅಮಿತ್ ಶಾ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು ಮಾಡಬೇಕು. ಗಡಿಪಾರು ಮಾಡಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗು ವುದು ಎಂದು ಎಚ್ಚರಿಕೆ ನೀಡಿದರು.
ತಾಲೂಕು ಸಂಚಾಲಕ ಜಯಕುಮಾರ್ ಮಾತನಾಡಿ, 23ರಂದು ಫ್ರೀಡಂ ಪಾರ್ಕಿನಲ್ಲಿ ಸಂವಿಧಾನ ಮತ್ತು ಮನುವಾದ ಕುರಿತು ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ನಮ್ಮ ಜಿಲ್ಲೆ ಯಿಂದ ಹೆಚ್ಚಿನ ಜನ ಭಾಗವಹಿಸುತ್ತಿದ್ದೇವೆ ಎಂದು ತಿಳಿಸಿದರು.
ಮುಖಂಡ ನಡುಪಣ್ಣ ಮಾತನಾಡಿ, ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ದರೂ ಸಹ ಕ್ರಮ ಆಗಿಲ್ಲ. ಅದಕ್ಕಾಗಿ ದೊಡ್ಡ ಮಟ್ಟದ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಹೇಳಿ ದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಪಿಳ್ಳಪ್ಪ, ನರಸಿಂಹರಾಜ ಇದ್ದರು.