ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಅಣಕ ನೂರು ವೆಂಕಟೇಶಪ್ಪ, ಉಪಾಧ್ಯಕ್ಷರಾಗಿ ಪೂಜನಹಳ್ಳಿ ಅಶ್ವತ್ಥಮ್ಮ ಅವಿರೋಧ ಆಯ್ಕೆ

ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಮೊದಲ ಆದ್ಯತೆ ನೀಡುವ ಜೊತೆಗೆ ವಿವಿಧ ಕೆಲಸ ಕಾರ್ಯಗಳಿಗೆ ಪಂಚಾಯಿತಿಗೆ ಬರುವ ಜನರಿಗೆ ಸ್ಪಂದಿಸಿ ತ್ವರಿತವಾಗಿ ಕೆಲಸ ಗಳನ್ನು ಮಾಡಲು ಮಾಡಲಾಗುವುದು. ಪ್ರತಿ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡ ಲಾಗುವುದು. ತಾವು ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಸಂಸದ ಡಾ.ಕೆ ಸುಧಾಕರ್ ಅವರಿಗೆ ಧನ್ಯವಾದ ತಿಳಿಸುವುದಾಗಿ ನುಡಿದರು.

ಪ್ರತಿ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು

Profile Ashok Nayak Mar 22, 2025 10:26 AM

ಚಿಕ್ಕಬಳ್ಳಾಪುರ: ತಾಲೂಕಿನ ಪಟ್ರೇನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಅಣಕ ನೂರು ವೆಂಕಟೇಶಪ್ಪ, ಉಪಾಧ್ಯಕ್ಷರಾಗಿ ಪೂಜನಹಳ್ಳಿ ಅಶ್ವತ್ಥಮ್ಮ ಅವಿರೋಧ ಆಯ್ಕೆಯಾದರು. 

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ವೆಂಕಟೇಶಪ್ಪ, ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಮೊದಲ ಆದ್ಯತೆ ನೀಡುವ ಜೊತೆಗೆ ವಿವಿಧ ಕೆಲಸ ಕಾರ್ಯಗಳಿಗೆ ಪಂಚಾಯಿತಿಗೆ ಬರುವ ಜನರಿಗೆ ಸ್ಪಂದಿಸಿ ತ್ವರಿತವಾಗಿ ಕೆಲಸಗಳನ್ನು ಮಾಡಲು ಮಾಡಲಾಗುವುದು. ಪ್ರತಿ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗುವುದು. ತಾವು ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಸಂಸದ ಡಾ.ಕೆ ಸುಧಾಕರ್ ಅವರಿಗೆ ಧನ್ಯವಾದ ತಿಳಿಸುವುದಾಗಿ ನುಡಿದರು.

ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ

ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಅನಿಲ್ ಕಾರ್ಯನಿರ್ವಹಿಸಿದರು.

ಅವಿರೋಧ ಆಯ್ಕೆಯ ಕುರಿತು ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿದರು. ನೂತನ ಅಧ್ಯಕ್ಷರನ್ನು ಮೆರವಣಿಗೆ ಮಾಡಿ ಸಂಭ್ರಮಿಸಿದರು. 

ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಆನಂದಮೂರ್ತಿ, ತಾ.ಪಂ ಮಾಜಿ ಸದಸ್ಯ ಎ.ಆರ್.ರಾಮಣ್ಣ, ಗ್ರಾ.ಪಂ ಮಾಜಿ ಅಧ್ಯಕ್ಷೆ ಬೃಂದ.ಡಿ, ಲೋಕೇಶ್, ಜಯಚಂದ್ರ, ರಘುಪತಿ, ಪಟ್ರೇನಹಳ್ಳಿ ರಾಕೇಶ್, ಅಣಕನೂರು ಸುನಿಲ್, ಶ್ರೀನಿವಾಸ್, ದೇವರಾಜ್, ಅಣಕನೂರು ಮುನಿಕೃಷ್ಣಪ್ಪ, ಲಕ್ಷ್ಮಣ, ನಾಗ ರಾಜು, ಗಂಗರಾಜು ಶ್ರೀನಿವಾಸ್, ವೆಂಕಟೇಶ ಇದ್ದರು.