Aryabhata National Award: ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಗೆ ಗುಂಪು ಮರದ ಆನಂದ್ ಭಾಜನ
ಗುಂಪು ಮರದ ಆನಂದ್ ಅವರು ಕಳೆದ 30 ವರ್ಷಗಳಿಂದ ಪಂಚಗಿರಿ ಬೋಧನಾ ಪ್ರೌಢಶಾಲೆ ಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶ್ರಮಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಜೊತೆಗೆ ಪರಿಸರ ಸಂರಕ್ಷಣೆ ಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಜಿಲ್ಲಾದ್ಯಂತ ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ
ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ, ಪಂಚಗಿರಿ ಬೋಧನಾ ಪ್ರೌಢಶಾಲೆಯ ಸಹ ಶಿಕ್ಷಕರಾದ ಗುಂಪು ಮರದ ಆನಂದ್ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. -
ಚಿಕ್ಕಬಳ್ಳಾಪುರ : ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ, ಪಂಚಗಿರಿ ಬೋಧನಾ ಪ್ರೌಢಶಾಲೆಯ ಸಹ ಶಿಕ್ಷಕರಾದ ಗುಂಪು ಮರದ ಆನಂದ್ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ(Aryabhata National Award) ಪ್ರದಾನ ಮಾಡಿ ಗೌರವಿಸಲಾಯಿತು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆರ್ಯಭಟ ಎಜುಕೇಶನಲ್ ಟ್ರಸ್ಟ್, ಧಾರವಾಡ (ಮುಂಬೈ ಪ್ರಾಂತ್ಯ) ಹಾಗೂ ಚೇತನ ಫೌಂಡೇಶನ್, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಗುಂಪು ಮರದ ಆನಂದ್ ಅವರು ಕಳೆದ 30 ವರ್ಷಗಳಿಂದ ಪಂಚಗಿರಿ ಬೋಧನಾ ಪ್ರೌಢಶಾಲೆ ಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶ್ರಮಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಜಿಲ್ಲಾದ್ಯಂತ ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ.
ಇದರೊಂದಿಗೆ, ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಶಾಲಾ ಬ್ಯಾಗ್‌ಗಳನ್ನು ವಿತರಿಸುವುದು ಹಾಗೂ ಅಗತ್ಯವಿರುವ ಕಾರ್ಮಿಕರಿಗೆ ವಸ್ತ್ರಗಳನ್ನು ನೀಡುವಂತಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಚೇತನ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ಶಿಕ್ಷಣ, ಪರಿಸರ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಗುಂಪು ಮರದ ಆನಂದ್ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದ್ದು, ಅವರ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತಾರ ಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಡಾ.ಚಿಕ್ಕಹೆಜ್ಜಾಜಿ ಮಹದೇವ್, ಸಮ್ಮೇಳನದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಬಾಲಕೃಷ್ಣ ಎಸ್.ಮತ್ತೋಡಿ, ಬಿ.ರಂಗಸ್ವಾಮಿ, ಸುಜಾತ ಮಠದ, ಧರ್ಮನ ಗೌಡ, ಪುಷ್ಪ, ವಿಜಯ ಎಸ್. ಜಂಬಗಿ, ಅಂಬರೀಶ್, ವಿಜಯ ಮಹಾಂತೇಶ್ ಹಾಗೂ ಶೈಲೇಂದ್ರ ಪೊಲೀಸ್ ಪಾಟೀಲ ಸೇರಿದಂತೆ ಹಲವರು ಕಾಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.