ಕಟ್ಟಡ ದುರಸ್ತಿಗೆ ಪೋಷಕರ ಒತ್ತಾಯ
ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಕಳವಳ
ಶಿಡ್ಲಘಟ್ಟ: ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಕಟ್ಟಡವೊಂದು ಮಳೆ ಬಂದಾಗ ಸಂಪೂರ್ಣ ನೆನೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಿಬ್ಬಂದಿ ಯಲ್ಲಿ ಆತಂಕ ಮನೆ ಮಾಡಿದೆ. ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಕಟ್ಟಡದ ಮೇಲ್ಚಾವಣಿ ಹಾಳಾಗಿದ್ದು, ಮಳೆ ನೀರು ಒಳಗೆ ಸೋರಿಕೆಯಾಗುತ್ತಿದೆ. ಗೋಡೆ ಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಕೆಲವೆಡೆ ಪ್ಲಾಸ್ಟರ್ ಉದುರುತ್ತಿರುವುದು ಕಂಡುಬಂದಿದೆ.
ಮಳೆಯ ಸಮಯದಲ್ಲಿ ಕಟ್ಟಡದ ಒಳಭಾಗದಲ್ಲಿ ನೀರು ನಿಂತುಕೊಳ್ಳುವುದರಿಂದ ಕಾರ್ಯ ನಿರ್ವಹಣೆಗೆ ಅಡಚಣೆ ಉಂಟಾಗುತ್ತಿದೆ.
ಇದನ್ನೂ ಓದಿ: Chikkaballapur News: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಆಯ್ಕೆ
ಕಟ್ಟಡದ ಕೊಠಡಿಗಳಲ್ಲಿಯೇ ನೀರು ಸುರಿಯುತ್ತಿರುವ ಕಾರಣ ದಾಖಲೆಗಳು ಹಾಗೂ ಅಗತ್ಯ ವಸ್ತುಗಳು ಹಾನಿಗೊಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಂಪರ್ಕ ಇರುವ ಪ್ರದೇಶಗಳಲ್ಲಿಯೂ ನೀರು ಸೋರಿಕೆಯಾಗುತ್ತಿರುವುದರಿಂದ ಅಪಾಯದ ಭೀತಿ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡಕ್ಕೆ ಬರುವ ಸಾರ್ವಜನಿಕರು ಹಾಗೂ ಸಿಬ್ಬಂದಿ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿ ದ್ದು, ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತ ಸಂಭವಿಸಬಹುದೆಂಬ ಭಯ ಕಾಡುತ್ತಿದೆ. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ತಕ್ಷಣ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಳೆಯ ಕಟ್ಟಡ ದುರಸ್ತಿ ಮಾಡುವುದರ ಜೊತೆಗೆ ಅಗತ್ಯವಿದ್ದರೆ ಹೊಸ ಕಟ್ಟಡ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
![]()
"ಮಳೆ ಬಂದಾಗ ಕಟ್ಟಡದ ಮೇಲ್ಚಾವಣಿಯಿಂದ ನೀರು ಸೋರಿಕೆಯಾಗುತ್ತದೆ. ಮಕ್ಕಳು ಭಯದ ನಡುವೆ ಒಳಗೆ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಇದೆ. ಗೋಡೆಗಳು ನೆನೆಯು ತ್ತಿರುವುದರಿಂದ ಯಾವಾಗ ಏನಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಕಟ್ಟಡ ದುರಸ್ತಿ ಮಾಡಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು."
ಚಂದ್ರಪ್ಪ ಪೋಷಕರು
![]()
“ಮಳೆ ಬಂದಾಗ ಕಟ್ಟಡದ ಹಲವು ಭಾಗಗಳಲ್ಲಿ ನೀರು ಸೋರಿಕೆಯಾಗುತ್ತಿದೆ. ವಿದ್ಯಾರ್ಥಿ ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ತರಗತಿಗಳನ್ನು ನಡೆಸ ಲಾಗುತ್ತಿದೆ. ಸಮಸ್ಯೆ ಕುರಿತು ಮೇಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಶೀಘ್ರದಲ್ಲೇ ದುರಸ್ತಿ ಕಾಮಗಾರಿ ಕೈಗೊಳ್ಳುವ ನಿರೀಕ್ಷೆಯಿದೆ,” ಎಂದು ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ರೂಪ ಮುಖ್ಯ ಶಿಕ್ಷಕಿ