Shidlaghatta News: ತಾಲೂಕು ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಕೆಐಡಿಬಿ ಸಂಬಂಧಿತ ವಿಷಯದಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಅನ್ಯಾಯ ವಾಗಿ ಬಲಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ತಾಲೂಕು ದಂಡಾಧಿಕಾರಿಗಳ ಮೂಲಕ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
-
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ವೇಳೆ ಪೊಲೀಸರ ದೌರ್ಜನ್ಯ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಶಿಡ್ಲಘಟ್ಟ ತಾಲೂಕು ಕಚೇರಿ ಮುಂಭಾಗ ಗುರುವಾರ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೆಐಡಿಬಿ ಸಂಬಂಧಿತ ವಿಷಯದಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಅನ್ಯಾಯ ವಾಗಿ ಬಲಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ತಾಲೂಕು ದಂಡಾಧಿಕಾರಿಗಳ ಮೂಲಕ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದನ್ನೂ ಓದಿ: Shidlaghatta News: ಶಿಡ್ಲಘಟ್ಟದಲ್ಲಿ ವೈಭವದಿಂದ ನಡೆದ ವೀರಬ್ರಹ್ಮೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
ರೈತ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ, ಶಾಂತಿಯುತವಾಗಿ ನಡೆಯು ತ್ತಿದ್ದ ಪ್ರತಿಭಟನೆಯನ್ನು ಪೊಲೀಸರು ಹಿಂಸಾತ್ಮಕವಾಗಿ ಎದುರಿಸಿರುವುದು ಖಂಡನೀಯ ಎಂದು ಹೇಳಿದರು. ರೈತರ ಹಕ್ಕುಗಳನ್ನು ಕುಂಠಿತಗೊಳಿಸುವ ಯಾವುದೇ ಪ್ರಯತ್ನವನ್ನು ಸಂಘ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಂಚಾರಲಹಳ್ಳಿ ಪಿಎಸ್ಐ ಶ್ಯಾಮಲ ಹಾಗೂ ಸಿಪಿಐ ಅನಂದ್ ಕುಮಾರ್ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮುನಿನಂಜಪ್ಪ, ಜಿ ಎಂ ಕೆಂಪಣ್ಣ, ನಾರಾಯಣಸ್ವಾಮಿ,ಆರ್ ಮಂಜುನಾಥ್, ಕೆ.ನಾರಾಯಣಸ್ವಾಮಿ, ಅಶ್ವತ್ಥಪ್ಪ ಸೇರಿದಂತೆ ಮತ್ತಿತರೆ ರೈತ ಮುಖಂಡರು ಪಾಲ್ಗೊಂಡಿದ್ದರು.
![]()
“ಡಿಸಿ ಕಚೇರಿ ಮುಂಭಾಗ ನಡೆದ ಘಟನೆ ಕುರಿತು ರೈತರಿಂದ ಮನವಿ ಪತ್ರ ಸ್ವೀಕರಿಸಲಾಗಿದೆ. ಅವರ ಆರೋಪಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಈ ಬಗ್ಗೆ ಸೂಕ್ತ ಮಟ್ಟದಲ್ಲಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸ ಲಾಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ರೈತರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ವಹಿಸಲಾಗುತ್ತದೆ.”
- ಗಗನ ಸಿಂಧು, ದಂಡಾಧಿಕಾರಿಗಳು