Chikkaballapur News: ಮಾದಕ ವ್ಯಸನದಿಂದ ಹೊರ ಬರುವಂತೆ ಸಾರ್ವಜನಿಕರಲ್ಲಿ ಮನವಿ: ಇ.ಒ ಎಂ. ನಾಗಮಣಿ
ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ತಾಲ್ಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸ ಲಾಗುತ್ತದೆ.

ಗುಡಿಬಂಡೆ ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾಗಮಣಿ ತಿಳಿಸಿದರು. -

ಚಿಕ್ಕಬಳ್ಳಾಪುರ : ಗುಡಿಬಂಡೆ ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ತಲುಪಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾಗಮಣಿ ತಿಳಿಸಿದರು.
ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯಡಿ ಶನಿವಾರ ಹಮ್ಮಿಕೊಂಡಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಮಾದಕ ವ್ಯಸನ ಮುಕ್ತ ಕರ್ನಾಕಟ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾದಕ ಪದಾರ್ಥ ವ್ಯಸನವು ಹೂವಿನಂತೆ ಕಾಣಿಸಿದರೂ ಅದರ ಒಳಗೆ ವಿಷ ತುಂಬಿದ ಮುಳ್ಳು ಗಳಿವೆ. ಅದು ಜೀವವನ್ನು ಕಸಿದುಕೊಳ್ಳುತ್ತದೆ. ಈ ಸವಾಲನ್ನು ಎದುರಿಸಲು ಕೇವಲ ಕಾನೂನು ಸಾಕಾಗದು ಜಾಗೃತಿ, ಸಹಾನುಭೂತಿ ಮತ್ತು ಪುನರ್ವಸತಿ ಈ ಮೂರು ಅಸ್ತ್ರಗಳು ಅತ್ಯಗತ್ಯ ಎಂದು ಹೇಳಿದರು.
ಇದನ್ನೂ ಓದಿ: Chikkanayakanahalli News: ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ
ಪ್ರತಿಯೊಬ್ಬ ನಾಗರಿಕರೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಹಾದಿಯಲ್ಲಿ ಹೆಜ್ಜೆ ಹಾಕಿದಾಗ ಮಾತ್ರ ಮಾದಕ ದ್ರವ್ಯ ಮುಕ್ತ ಕರ್ನಾಟಕ ಸಾಧ್ಯವಾಗುತ್ತದೆ. ತಾಲ್ಲೂಕಿನಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳ ಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಆಗಸ್ಟ್ ೧ ರಿಂದ ಸೆ.೩೦ ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನ ಹರಿಸಲಾಗುತ್ತಿದೆ.
ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ತಾಲ್ಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸ ಲಾಗುತ್ತದೆ. ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಮತ್ತು ಅವುಗಳ ದುಷ್ಪರಿಣಾಮಗಳ ಬಗ್ಗೆ ಸಮುದಾಯಗಳಿಗೆ ತಿಳಿಸಲು, ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯ ಕೃಷಿಯೇತರ ವ್ಯವಸ್ಥಾಪಕ ಚೇತನ್, ವಲಯ ಮೇಲ್ವಿಚಾರಕಿ ಡಿ.ಎ.ಮೀನಾ, ಬಿ.ಆರ್.ಪಿ.ಪಿ.ಆರ್.ಐ ಜಯಲಕ್ಷ್ಮಮ್ಮ, ಇ.ಪಿ ಶೋಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.