ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸರಕಾರಿ ನೌಕರರಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿಯು 2026 ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರ ಬೇಕು. ನಿಗಮ ಮಂಡಳಿ ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ

ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ

ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2026ನೇ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ "ಪ್ರತಿಭಾ ಪುರಸ್ಕಾರಕ್ಕೆ" ಆನ್ʼಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2026.‌ ಆನ್ʼಲೈನ್ ಲಿಂಕ್ : ಹೆಚ್‌ಟಿಟಿಪಿಎಸ್ ://ಪವರ್‌ ಮೀಡಿಯಾ ಡಾಟ್ ಇನ್ಫೋ ಮೂಲಕ ನೊಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ: Chikkaballapur News: ಶೇ.56ರ ಎಸ್‌ಸಿ-ಎಸ್‌ಟಿ ಮೀಸಲಾತಿಗೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸುವುದು ಸರಕಾರದ ಕರ್ತವ್ಯ : ಮಾಜಿ ಸಂಸದ ಉಗ್ರಪ್ಪ ಆಗ್ರಹ

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ವಿದ್ಯಾರ್ಥಿಯು 2026 ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರ ಬೇಕು. ನಿಗಮ ಮಂಡಳಿ ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.