ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುವ ಮಸ್ತಾನ್ ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಸ್ತಾನ್ ಸಾಬ್ ಅವರ ಪಕ್ಷದ ನಿಷ್ಠೆ ಹಾಗೂ ಸುದೀರ್ಘ ಸೇವೆಯನ್ನು ಪರಿಗಣಿಸಿ ಜವಾಬ್ದಾರಿ ನೀಡಿರುವ ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ರು ಹಾಗೂ ಅಭಿಮಾನಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: MLA Pradeep Eshwar: ಗ್ರಾಮಗಳ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ: ಶಾಸಕ ಪ್ರದೀಪ್ ಈಶ್ವರ್
ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿ ಕೊಂಡಿರುವ ಮಸ್ತಾನ್ ಸಾಬ್ ಅವರಿಗೆ ಇದೀಗ ಗ್ಯಾರಂಟಿ ಸಮಿತಿಯ ಪ್ರಮುಖ ಜವಾಬ್ದಾರಿ ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು, ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸಲಿದೆ.
ತಮ್ಮನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಮತ್ತು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಮಸ್ತಾನ್ ಸಾಬ್ ಅವರು ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ್ದು, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ.