ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA K H Puttaswamy Gowda: ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು, ಚರಂಡಿ ಅಭಿವೃದ್ಧಿ, ಹೈಮಾಸ್ಟ್ ದೀಪಗಳ ಅಳವಡಿಕೆ, ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ಡ್ಯಾಂಗಳ ನಿರ್ಮಾಣ, ಅಗತ್ಯವಿರುವ ಕಡೆ ಶಾಲಾ ಕೊಠಡಿಗಳು ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಬಸ್ ಪ್ರಯಾಣಿಕರ ತಂಗುದಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ

ಗೌರಿಬಿದನೂರು: ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಗಳನ್ನು ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಬಣಕ್ಕೆ ಸೇರ್ಪಡೆಯಾಗುತ್ತಿರುವುದು ರಾಜಕೀಯವಾಗಿ ಮತ್ತಷ್ಟು ಬಲ ನೀಡಿದೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ(MLA K H PuttaswamyGowda) ಹೇಳಿದರು.

ತಾಲೂಕಿನ ಹೊಸೂರು ಹೋಬಳಿಯ ರಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಪಸಂದ್ರ ಗ್ರಾಮದಲ್ಲಿ ವಿವಿಧ ಪಕ್ಷಗಳನ್ನು ತೊರೆದು ತಮ್ಮ ಬಣಕ್ಕೆ ಸೇರ್ಪಡೆಯಾದ ನರಸಿಂಹಮೂರ್ತಿ, ಪ್ರಭು, ಸತೀಶ್, ರಮೇಶ್, ಜಯಣ್ಣ, ಹನುಮಂತರಾಯಪ್ಪ, ಅಶ್ವತಪ್ಪ, ತಿಪ್ಪೇರಂಗಣ್ಣ ಸೇರಿದಂತೆ ಹಲವರನ್ನು ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿದರು.

ನೂತನವಾಗಿ ಸೇರ್ಪಡೆಯಾದವರು ಕೆಎಚ್‌ಪಿ ಬಣದ ಮುಖಂಡರು ಹಾಗೂ ಕಾರ್ಯಕರ್ತ ರೊಂದಿಗೆ ಪ್ರೀತಿ, ವಿಶ್ವಾಸದಿಂದ ಹೊಂದಿಕೊಂಡು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Gauribidanur News: ಗುರುಪೂರ್ಣಿಮೆಯ ಅಂಗವಾಗಿ ಆಚಾರ್ಯ ಶಾಲೆಯಲ್ಲಿ ಅರ್ಥಪೂರ್ಣ ಅಕ್ಷರಾಭ್ಯಾಸ, ಗುರುವಂದನೆ

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು, ಚರಂಡಿ ಅಭಿವೃದ್ಧಿ, ಹೈಮಾಸ್ಟ್ ದೀಪಗಳ ಅಳವಡಿಕೆ, ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ಡ್ಯಾಂಗಳ ನಿರ್ಮಾಣ, ಅಗತ್ಯವಿರುವ ಕಡೆ ಶಾಲಾ ಕೊಠಡಿಗಳು ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಬಸ್ ಪ್ರಯಾಣಿಕರ ತಂಗುದಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಗೌರಿಬಿದನೂರು ನಗರದಲ್ಲಿ ಸುಮಾರು ₹8 ಕೋಟಿ ವೆಚ್ಚದಲ್ಲಿ ನಿರೀಕ್ಷಣಾ ಮಂದಿರ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಅಲ್ಲದೆ, ನಗರದ ಮಧುಗಿರಿ ರಸ್ತೆಯ ಸಮೀಪ ಅತ್ಯಾಧುನಿಕ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಪುಟ್ಟಸ್ವಾಮಿಗೌಡ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರ ಬೆಂಬಲಿಗರಾದ ಬೀಮನಹಳ್ಳಿ ಮಂಜುನಾಥ್, ತಾಲೂಕು ಪಂಚಾ ಯಿತಿ ಮಾಜಿ ಸದಸ್ಯ ಕೀಮ್ಲಾನಾಯಕ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ, ಹನುಮಂತ ರಾಯಪ್ಪ, ನಾರಾಯಣಪ್ಪ, ಗೋವಿಂದ ನಾಯ್ಕ್, ವೆಂಕಟೇಶ್ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.