Chikkaballapur News: ಜಾನಪದ ಕಲೆ ಸಾಹಿತ್ಯ ಸಾಂಸ್ಕೃತಿಕ ಪರಂಪರೆ ನಿಜವಾದ ವಾರಸುದಾರರೆಂದರೆ ಕಲಾವಿದರೇ ಆಗಿದ್ದಾರೆ: ಪಿಡಿಒ ತಿಪ್ಪಯ್ಯ ಅಭಿಮತ
ಗ್ರಾಮೀಣ ಬದುಕಿನ ಮೌಲ್ಯಗಳು, ಸಂಸ್ಕಾರಗಳು ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಜಾನಪದ ಕಲೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮಗಳು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜೊತೆಗೆ ಯುವಜನರಲ್ಲಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುತ್ತವೆ," ಇವುಗಳ ಪಾಲನೆ ಪೋಷಣೆಗೆ ಸಮಾಜವೂ ಕೈಜೋಡಿಸಿದರೆ ಇನ್ನೂ ಉತ್ತಮ ವಾಗಿರಲಿದೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಕನ್ವಲ್ ಕಲ್ಚರಲ್ ಚಾರಿಟೇಬಲ್ ಟ್ರಸ್ಟ್, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಾನಪದ ಸಾಂಸ್ಕೃತಿಕ ಉತ್ಸವವು ಟ್ರಸ್ಟ್ ಅಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. -
ಚಿಕ್ಕಬಳ್ಳಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಕನ್ವಲ್ ಕಲ್ಚರಲ್ ಚಾರಿಟೇಬಲ್ ಟ್ರಸ್ಟ್, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಾನಪದ ಸಾಂಸ್ಕೃತಿಕ ಉತ್ಸವವು ಟ್ರಸ್ಟ್ ಅಧ್ಯಕ್ಷ ಡಿ.ವಿ.ನಾರಾಯಣಸ್ವಾಮಿ ನೇತೃತ್ವದಲ್ಲಿ ಅದ್ದೂರಿ ಯಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮಕ್ಕೆ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಪ್ಪಯ್ಯ ಚಾಲನೆ ನೀಡಿ ಮಾತನಾಡಿ, "ಯುಗಯುಗಗಳಿಂದ ನಮ್ಮ ಜಾನಪದ ಕಲೆ, ಸಂಸ್ಕೃತಿ ಮತ್ತು ಪರಂಪರೆ ಇಂದಿಗೂ ಜೀವಂತವಾಗಿ ಉಳಿದು ಬಂದಿರುವುದರ ಹಿಂದೆ ಕವಿ, ಕಲಾವಿದರು ಹಾಗೂ ಜಾನಪದ ಕಲಾತಂಡಗಳ ಅಪಾರ ಶ್ರಮ ಮತ್ತು ಸಮರ್ಪಣೆ ಅಡಗಿದೆ ಎಂದರು.
ಗ್ರಾಮೀಣ ಬದುಕಿನ ಮೌಲ್ಯಗಳು, ಸಂಸ್ಕಾರಗಳು ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಜಾನಪದ ಕಲೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮಗಳು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವ ಜೊತೆಗೆ ಯುವಜನರಲ್ಲಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುತ್ತವೆ," ಇವುಗಳ ಪಾಲನೆ ಪೋಷಣೆಗೆ ಸಮಾಜವೂ ಕೈಜೋಡಿಸಿದರೆ ಇನ್ನೂ ಉತ್ತಮವಾಗಿರಲಿದೆ ಎಂದು ಹೇಳಿದರು.
ಇದನ್ನೂ ಓದಿ: Chikkaballapur News: ಸೊಣ್ಣಾಪುರದಲ್ಲಿ ಭೂ ವಿವಾದ: ಸ್ಥಳ ಪರಿಶೀಲನೆಗೆ ಬಂದ ಪೊಲೀಸರ ಸಮ್ಮುಖದಲ್ಲಿ ವಾಗ್ವಾದ
ಮುದ್ದೇನಹಳ್ಳಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್. ನರಸಿಂಹಮೂರ್ತಿ ಮಾತನಾಡಿ, "ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಅರಿಯುವಂತೆ ಜಾನಪದ ಸಂಸ್ಕೃತಿ ಕಲೆಯ ಬಗ್ಗೆಯೂ ಅರಿವು ಬೆಳೆಸಿಕೊಳ್ಳಬೇಕು ಎಂದರು.
ಜಾನಪದ ಕಲೆಗಳು ನಮ್ಮ ಬದುಕಿನ ಬೇರುಗಳಾಗಿದ್ದು, ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಇಂತಹ ಉತ್ಸವಗಳು ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸಲು ಸಹಕಾರಿಯಾಗಿವೆ," ಎಂದು ಅಭಿಪ್ರಾಯಪಟ್ಟರು.
ಕನ್ವಲ್ ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ ಮಾತನಾಡಿ, "ಗ್ರಾಮೀಣ ಭಾಗದ ಜಾನಪದ ಕಲಾವಿದರಿಗೆ ವೇದಿಕೆ ಕಲ್ಪಿಸಿ, ಅವರ ಪ್ರತಿಭೆ ಗುರುತಿಸುವ ಉದ್ದೇಶ ದಿಂದ ಈ ಜಾನಪದ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ವ್ಯಾಪಕವಾಗಿ ಆಯೋಜಿಸ ಲಾಗುವುದು," ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾ ತಂಡಗಳಿಂದ ಜಾನಪದ ನೃತ್ಯ, ಗಾಯನ ಹಾಗೂ ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ನಡೆದಿದ್ದು, ಅವು ಜನಮನ ಸೂರೆಗೊಂಡವು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಪ್ಪಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಮುನಿರಾಜು, ಉಪಾಧ್ಯಕ್ಷ ಚಿನ್ನಿರಾಜು, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ನರಸಿಂಹ ಮೂರ್ತಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.