ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದತ್ತಾತ್ರೇಯ ಮಠದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿದ ಏ ಆರ್ ಟಿ ಓ ಬೈರಾರೆಡ್ಡಿ

ಈ ಪವಿತ್ರ ಧಾರ್ಮಿಕ ಮಹೋತ್ಸವದ ಅಂಗವಾಗಿ ಮಠದ ಆವರಣದಲ್ಲಿ ವಿಶೇಷ ಪೂಜಾ ಕೈಂಕರ್ಯ ಗಳು, ಪ್ರಾರ್ಥನೆ ಹಾಗೂ ರಥೋತ್ಸವ ಮೆರವಣಿಗೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ಜರುಗಿದವು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಪ್ರದೇಶದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದು ಪುನೀತರಾದರು.

ಚಿಂತಾಮಣಿ: ತಾಲೂಕಿನ ಕೈವಾರ ಹೋಬಳಿಯ ಸಂತೇಕಲ್ಲಹಳ್ಳಿಯ ದತ್ತಾತ್ರೇಯ ಸ್ವಾಮಿ ಮಠದ ಆವರಣದಲ್ಲಿ ಶ್ರೀ ರಾಧಾ ಮಾಧವ ಮೂರ್ತಿ ಹಾಗೂ ಶ್ರೀ ಯೋಗಿನಾರಾಯಣ ಯತೀಂದ್ರರ ಕೈವಾರ ತಾತಯ್ಯ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ವೈಭವ ದಿಂದ ನೆರವೇರಿತು.

ಈ ಪವಿತ್ರ ಧಾರ್ಮಿಕ ಮಹೋತ್ಸವದ ಅಂಗವಾಗಿ ಮಠದ ಆವರಣದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಪ್ರಾರ್ಥನೆ ಹಾಗೂ ರಥೋತ್ಸವ ಮೆರವಣಿಗೆಯಂತಹ ಧಾರ್ಮಿಕ ಕಾರ್ಯಕ್ರಮ ಗಳು ಸಾಂಗವಾಗಿ ಜರುಗಿದವು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಪ್ರದೇಶದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದು ಪುನೀತರಾದರು.

ಇದನ್ನೂ ಓದಿ; Chinthamani News: ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ಆವಲಪ್ಪ

ಈ ವಿಶೇಷ ಕಾರ್ಯಕ್ರಮದಲ್ಲಿ ಚಿಂತಾಮಣಿ ತಾಲ್ಲೂಕಿನ ಸಾರಿಗೆ ಇಲಾಖೆಯ ಎ.ಆರ್.ಟಿ.ಓ. ಅಧಿಕಾರಿ ಬೈರಾರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಆಗಮಿಸಿದ್ದ ಭಕ್ತಾದಿಗಳಿಗೆ ಮಹಾ ಪ್ರಸಾದ ವಿತರಣೆ ಮಾಡಲಾಯಿತು.

ಇನ್ನು, ಇದೆ ವೇಳೆ, ದತ್ತಾತ್ರೇಯ ಮಠದ ಧರ್ಮಾಧಿಕಾರಿ ಕೆ.ಆರ್.ಚಂದ್ರಶೇಖರ್ ರವರು ಏ ಆರ್ ಟಿ ಓ ಅಧಿಕಾರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.