ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಆಶಾ ಕಾರ್ಯಕರ್ತೆಯರಿಂದ ಆ.12-14ರ ವರೆಗೆ ಮೂರು ದಿನಗಳ ಅಹೋರಾತ್ರಿ ಧರಣಿ

ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.12 ರಿಂದ 14ರ ವರೆಗೆ ಮೂರು ದಿನಗಳು ಕಾಲ ರಾಜ್ಯವ್ಯಾಪಿ ಜಿಲ್ಲಾ ಮಟ್ಟದಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ "ಮಾತು ಕೊಟ್ಟಂತೆ ನಡೆದುಕೊಳ್ಳಬೇಕೆಂದು" ನೆನಪಿಸಲು ಮುಂದಾಗಿದ್ದೇವೆ

ಆಶಾ ಕಾರ್ಯಕರ್ತೆಯರಿಂದ ಆ-೧೨ ರಿಂದ ೧೪ರ ವರೆಗೆ ಮೂರುದಿನಗಳ ಕಾಲ ಜಿಲ್ಲಾಕೇಂದ್ರದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಹನುಮೇಶ್ ತಿಳಿಸಿದರು.

ಚಿಕ್ಕಬಳ್ಳಾಪುರ : ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.12 ರಿಂದ 14ರ ವರೆಗೆ ಮೂರು ದಿನಗಳು ಕಾಲ ರಾಜ್ಯವ್ಯಾಪಿ ಜಿಲ್ಲಾ ಮಟ್ಟದಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ "ಮಾತು ಕೊಟ್ಟಂತೆ ನಡೆದುಕೊಳ್ಳಬೇಕೆಂದು" ನೆನಪಿಸಲು ಮುಂದಾಗಿದ್ದೇವೆ ಎಂದು  ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ(AIUTUC)) ರಾಜ್ಯ ಉಪಾಧ್ಯಕ್ಷ ಜಿ.ಹನುಮೇಶ್ ತಿಳಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಳೆದ ಜನವರಿ ೭ ರಿಂದ ೧೦ ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರೂ.15000 ನಿಶ್ಚಿತ ಗೌರವಧನ ಕ್ಕಾಗಿ ಆಗ್ರಹಿಸಿ ನಡೆಸಿದ ಈ ಹೋರಾಟದಲ್ಲಿ ರಾಜ್ಯದ ಸುಮಾರು 40000 ಆಶಾ ಕಾರ್ಯಕರ್ತೆ ಯರು ಭಾಗವಹಿಸಿದ್ದರು.

ಇದನ್ನೂ ಓದಿ: Chikkaballapur News: ಯುವಜನತೆ ದುಶ್ಚಟಗಳಿಗೆ ದಾಸರಾಗದಿದ್ದರೆ ಭವಿಷ್ಯದ ಬದುಕು ಹಸನಾಗುತ್ತದೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜನವರಿ 10, 2025ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಆರೋಗ್ಯ ಮಂತ್ರಿಗಳು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಮ್ಮುಖದಲ್ಲಿ ಸಭೆ ಮಾಡಿ, ಈ ಸಭೆಯಲ್ಲಿ ಏಪ್ರಿಲ್ ೨೦೨೫ ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ರೂ.10000 ಗಳ ಗೌರವಧನವನ್ನು ನೀಡಲಾಗುವುದು. ರೂ10000 ಹೊರತುಪಡಿಸಿ, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. ೧೦,೦೦೦ ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮ ಕೈಗೊಳ್ಳ ಲಾಗುವುದು  ಎಂದು ನೀಡಿದ್ದ ಭರವಸೆಗಳು ಸಂಪೂರ್ಣವಾಗಿ ಹುಸಿಯಾಗಿವೆ ಎಂದರು.

ಮುಖ್ಯಮAತ್ರಿಗಳು ಕಳೆದ ೭ ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಮಾಡಬೇಕೆಂದು ಮತ್ತು  ಇನ್ನುಳಿದ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ  ಹಾಗೆಯೇ ಎಂದಿನAತೆ ಎಲ್ಲಾ ಆಶಾ ಕಾರ್ಯಕರ್ತೆಯರು ಹೋರಾಟದ ಯಶಸ್ಸಿಗೆ ಒಗ್ಗಟ್ಟಿನಿಂದ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಸಂಘದಿಂದ ಕರೆ ನೀಡುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಮ್ಮ, ಜಿಲ್ಲಾ ಕಾರ್ಯದರ್ಶಿ ರೇಷ್ಮೆ, ಜಿಲ್ಲಾ ಮುಖಂಡರಾದ  ಲಕ್ಷ್ಮಿ, ಮಂಜುಳ, ಸುಗುಣ, ಕೃಷ್ಣವೇಣಿ, ಜಯಮ್ಮ, ಲಲಿತಾ, ಸುಜಾತ, ಸುಶೀಲಮ್ಮ, ಮಮತಾ ರೆಡ್ಡಿ, ಶಶಿಕಲಾ, ಪಾರ್ವತಿ ಮತ್ತು ತಾಲೂಕು ಮುಖಂಡರು ಇದ್ದರು.