ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಅಮಾವಾಸ್ಯೆ: ಭಕ್ತಿಭಾವದಿಂದ ಅಂಬಲಿ ಕಲಶೋತ್ಸವ

ಮುಂಜಾನೆಯಿಂದಲೇ ದೇವಾಲಯದಲ್ಲಿ ಹೋಮ, ಹವನ ಸೇರಿದಂತೆ ವಿವಿಧ ದೇವತಾ ಕಾರ್ಯ ಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ, ಕುಂಕುಮಾ ರ್ಚನೆ ಹಾಗೂ ದೀಪ ಬೆಳಗಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಅಂಬಳಿ ಕಲಶೋತ್ಸವ ಭಕ್ತಿಭಾವದಿಂದ ನೆರವೇರಿತು.

ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಅಮಾವಾಸ್ಯೆ

ನಗರದ ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಮಾಸದ ಅಮಾವಾಸ್ಯೆ ಅಂಗವಾಗಿ ದೇವಿಗೆ ಮಹಿಳೆಯರಿಂದ ವಿಶೇಷ ಪೂಜೆ, ಕುಂಕುಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. -

Profile
Ashok Nayak Aug 14, 2026 9:20 PM

ಗೌರಿಬಿದನೂರು: ನಗರದ ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಮಾಸದ ಅಮಾವಾಸ್ಯೆ ಅಂಗವಾಗಿ ದೇವಿಗೆ ಮಹಿಳೆಯರಿಂದ ವಿಶೇಷ ಪೂಜೆ, ಕುಂಕುಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.

ಮುಂಜಾನೆಯಿಂದಲೇ ದೇವಾಲಯದಲ್ಲಿ ಹೋಮ, ಹವನ ಸೇರಿದಂತೆ ವಿವಿಧ ದೇವತಾ ಕಾರ್ಯ ಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ, ಕುಂಕುಮಾರ್ಚನೆ ಹಾಗೂ ದೀಪ ಬೆಳಗಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭ ದಲ್ಲಿ ಅಂಬಳಿ ಕಲಶೋತ್ಸವ ಭಕ್ತಿಭಾವದಿಂದ ನೆರವೇರಿತು.

ಇದನ್ನೂ ಓದಿ: Gauribidanur News: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೃಹತ್ ಪ್ರತಿಭಟನೆ

ನಂತರ ಓಂ ಶಕ್ತಿ ದೇವಿಯ ಉತ್ಸವ ಮೂರ್ತಿಯನ್ನು ವಿವಿಧ ಹೂವಿನ ಅಲಂಕಾರಗಳಿಂದ ಸಿಂಗರಿಸಿ, ಜಾನಪದ ಕಲಾತಂಡಗಳೊAದಿಗೆ ನಗರದ ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಮಹಾ ಮಂಗಳಾರತಿಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ರಾತ್ರಿ ದೇವಿಗೆ ಅಗ್ನಿಕುಂಡ ಕಾರ್ಯಕ್ರಮವೂ ನೆರವೇರಿತು.

ಈ ಸಂದರ್ಭದಲ್ಲಿ ದೇವಾಲಯದ ಧರ್ಮದರ್ಶಿ ವೇಣುಸ್ವಾಮಿ, ಸರೋಜಮ್ಮ, ವಿಜಯಮ್ಮ, ಆದಿತ್ಯ ಮಂಜುನಾಥ್, ನಗರಸಭೆ ಮಾಜಿ ಸದಸ್ಯ ಮಾರ್ಕೆಟ್ ಮೋಹನ್, ವೆಂಕಟಾದ್ರಿ, ದೇವು, ಛಾಯಾಗ್ರಾಹಕ ಚಂದ್ರು, ಪರಮೇಶ್, ಜಗನ್ನಾಥ್, ಮೂರ್ತಿ, ರಾಜೇಶ್, ಮಣಿಕಂಠ, ಮಾರುತಿ, ಪವನ್, ವೆಂಕಟೇಶ್, ರಾಜು ಸೇರಿದಂತೆ ಭಕ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.