ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಆಯ್ಕೆ

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎ.ಅಶೋಕ್ ಕುಮಾರ್ ಮಾತನಾಡಿ, ಮಕ್ಕಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಮಾನ ಮನಸ್ಕರು ಆಯ್ಕೆಗೊಂಡಿದ್ದೇವೆ. ಆಯ್ಕೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸ ಲಾಗುವುದು ಎಂದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ವಿಜೇತರಾದ ಪದಾಧಿಕಾರಿಗಳ ಚಿತ್ರ..

ಚಿಕ್ಕಬಳ್ಳಾಪುರ: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎ.ಅಶೋಕ್ ಕುಮಾರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುಳಾ ಘೋಷಿಸಿದರು.

ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಶೋಕ್ ಕುಮಾರ್ ಅವರು 38 ಮತಗಳನ್ನು ಪಡೆದು ಜಯಗಳಿಸಿದರೆ, ಪ್ರತಿಸ್ಪರ್ಧಿಯಾದ ಡಿ.ಎಂ.ಶ್ರೀರಾಮ್ ಅವರು 19 ಮತಗಳನ್ನು ಪಡೆದು ಪರಾಭವಗೊಂಡರು. ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗರಾಜಪ್ಪ 37 ಮತ ಪಡೆಯುವ ಮೂಲಕ ವಿಜಯಶಾಲಿಯಾದರೆ, ಪ್ರತಿಸ್ಪರ್ಧಿ ವಸಂತ್ ರೆಡ್ಡಿ ಅವರು 20 ಮತಗಳನ್ನು ಪಡೆದು ಸೋಲು ಕಂಡರು.

ಜಿಲ್ಲಾ ಉಪಾಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ಚಂದ್ರಮ್ಮ 39 ಮತಗಳನ್ನು ಪಡೆದು ಆಯ್ಕೆ ಗೊಂಡರೆ, ಪ್ರತಿಸ್ಪರ್ಧಿ ಪ್ರೇಮಕುಮಾರಿ ಅವರು 18 ಮತ ಗಳಿಸಿ ಸೋಲುಂಡರು.

ಇದನ್ನೂ ಓದಿ: Chikkaballapur News: ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಇನ್ನು ಖಜಾಂಚಿ ಸ್ಥಾನಕ್ಕೆ ರವಿಕುಮಾರ್ ಒಬ್ಬರೇ ಸ್ಪರ್ಧೆ ಮಾಡಿದ್ದು ಬೇರೆ ಯಾರೂ ಅರ್ಜಿ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎ.ಅಶೋಕ್ ಕುಮಾರ್ ಮಾತನಾಡಿ, ಮಕ್ಕಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಮಾನ ಮನಸ್ಕರು ಆಯ್ಕೆಗೊಂಡಿದ್ದೇವೆ. ಆಯ್ಕೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಲಾಗುವುದು ಎಂದರು.

ಇದೊಂದು ಲಾಭದಾಯಕ ಹುದ್ದೆಯಲ್ಲ, ಬದಲಿಗೆ ಒಂದು ಜವಾಬ್ದಾರಿ ಹುದ್ದೆಯಾಗಿದೆ. ಸೇವಾ ಮನೋಭಾವ ಇಟ್ಟುಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿದೆ. ಜಿಲ್ಲೆಯ ಸಮಸ್ತ ಶಿಕ್ಷಕರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಪೂರಕ ಯೋಜನೆಗಳನ್ನು ಹಾಕಿಕೊಂಡು ಶಿಕ್ಷಕರ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಗೇಪಲ್ಲಿಯ ಹನುಮಂತರೆಡ್ಡಿ, ಚಿಕ್ಕಬಳ್ಳಾಪುರ ತಾಲೂಕಿನ ಎಂ.ಆರ್.ಸುಬ್ಬಾರೆಡ್ಡಿ, ಸಿ.ವಿ. ವೆಂಟ್ರಾಯಪ್ಪ, ಸುನಿಲ್ ಕುಮಾರ್, ಶಿಡ್ಲಘಟ್ಟ ನೌಕರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಗುಡಿಬಂಡೆ ಮತ್ತು ಗೌರಿಬಿದನೂರು ತಾಲ್ಲೂಕಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.