ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುದ್ದೇನಹಳ್ಳಿಯಲ್ಲಿ ಅ.10, 11ರಂದು ಏಷ್ಯನ್ ಮಕ್ಕಳ ವೈದ್ಯಕೀಯ ನೈತಿಕತೆ ಸಮ್ಮೇಳನ

ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಶ್ರಯದಲ್ಲಿ 4ನೇ ಏಷ್ಯನ್ ಪೀಡಿಯಾಟ್ರಿಕ್ ಎಥಿಕ್ಸ್ ಕಾನ್ಫರೆನ್ಸ್ ಅ.10 ಮತ್ತು 11ರಂದು ನಡೆಯಲಿದೆ. ಭಾರತದಲ್ಲಿ ಮೊದಲ ಬಾರಿಗೆ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ 36ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ತಜ್ಞರು ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಶ್ರಯದಲ್ಲಿ 4ನೇ ಏಷ್ಯನ್ ಪೀಡಿಯಾಟ್ರಿಕ್ ಎಥಿಕ್ಸ್ ಕಾನ್ಫರೆನ್ಸ್ ಅ.10 ಮತ್ತು 11ರಂದು ನಡೆಯಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದಲ್ಲಿ ಭಾರತ ಸೇರಿದಂತೆ ವಿವಿಧ ದೇಶಗಳ 36ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ತಜ್ಞರು ಭಾಗವಹಿಸ ಲಿದ್ದಾರೆ.

ಇದನ್ನೂ ಓದಿ: Chikkaballapur News: ಕಲಿಕಾ ಕೇಂದ್ರದಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

ಮಕ್ಕಳ ವೈದ್ಯಕೀಯ ಕ್ಷೇತ್ರದಲ್ಲಿನ ನೈತಿಕತೆ, ವೈದ್ಯಕೀಯ ಮೌಲ್ಯಗಳು ಹಾಗೂ ಮಕ್ಕಳ ಆರೋಗ್ಯ ಸೇವೆಯ ಭವಿಷ್ಯದ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ. ಒಂದೂವರೆ ದಿನಗಳ ಕಾರ್ಯಕ್ರಮದಲ್ಲಿ ವೈಜ್ಞಾನಿಕ ಅಧಿವೇಶನಗಳು, ತಜ್ಞರ ಸಂವಾದ ಹಾಗೂ ಸಂವಾದಾತ್ಮಕ ಕಾರ್ಯಕ್ರಮಗಳು ಇರಲಿವೆ ಎಂದು ಕಾರ್ಯಕ್ರಮದ  ಸಂಘಟನಾ ಜಂಟಿ ಕಾರ್ಯದರ್ಶಿ ಡಾ. ಸಿ.ಎಸ್. ಹಿರೇಮಠ ತಿಳಿಸಿದ್ದಾರೆ.