Chikkaballapur News: ನೆಲ ಜಲ ಭಾಷೆ ಮತ್ತು ನಮ್ಮ ಸಂಸ್ಕೃತಿಯ ಬಗ್ಗೆ ಜಾಗೃತಿ ಅಗತ್ಯ : ಮುಖಂಡ ಅಶೋಕ್ ಕುಮಾರ್
ಶ್ರೀ ಗೌರಿ ಕನ್ನಡ ಕಲಾ ಸಂಘದ ಅಧ್ಯಕ್ಷ ರವೀಂದ್ರನಾಥ್ ಮೊದಲಿನಿಂದಲೂ ಈ ಭಾಗದಲ್ಲಿ ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಕನ್ನಡ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೂಡ ಸಾಹಿತ್ಯ ಸೇವೆಯನ್ನು ಮಾಡಿರುವು ದನ್ನು ನೋಡಿದ್ದೇವೆ. ಇಂತಹ ಕನ್ನಡ ಕಾರ್ಯಕ್ರಮಗಳು ಈ ಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಲಿ ಎಂದರು

ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆ ನೆಲ ಜಲ ಮತ್ತು ನಮ್ಮ ಸಂಸ್ಕೃತಿಯ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಶ್ರೀ ಗೌರಿ ಕನ್ನಡ ಕಲಾ ಸಂಘ ಅತ್ಯಂತ ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದೆ ಎಂದು ಮುಖಂಡರಾದ ಆರ್. ಅಶೋಕ್ ಕುಮಾರ್ ತಿಳಿಸಿದರು.

ಗೌರಿಬಿದನೂರು: ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆ ನೆಲ ಜಲ ಮತ್ತು ನಮ್ಮ ಸಂಸ್ಕೃತಿಯ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಶ್ರೀ ಗೌರಿ ಕನ್ನಡ ಕಲಾ ಸಂಘ ಅತ್ಯಂತ ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದೆ ಎಂದು ಮುಖಂಡರಾದ ಆರ್. ಅಶೋಕ್ ಕುಮಾರ್ ತಿಳಿಸಿದರು. ನಗರದ ಡಾ ಹೆಚ್.ಎನ್ ಕಲಾ ಭವನದಲ್ಲಿ ಶ್ರೀ ಗೌರಿ ಕನ್ನಡ ಕಲಾ ಸಂಘ ಹಾಗೂ ಲಯನ್ಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ"ಗೀತಾ ಸಂಗಮ"ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ವಿತರಣೆ: ತಹಸೀಲ್ದಾರ್
ಶ್ರೀ ಗೌರಿ ಕನ್ನಡ ಕಲಾ ಸಂಘದ ಅಧ್ಯಕ್ಷ ರವೀಂದ್ರನಾಥ್ ಮೊದಲಿನಿಂದಲೂ ಈ ಭಾಗ ದಲ್ಲಿ ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಕನ್ನಡ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೂಡ ಸಾಹಿತ್ಯ ಸೇವೆಯನ್ನು ಮಾಡಿರುವು ದನ್ನು ನೋಡಿದ್ದೇವೆ. ಇಂತಹ ಕನ್ನಡ ಕಾರ್ಯಕ್ರಮಗಳು ಈ ಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಲಿ ಎಂದರು.
ಸುಮಾರು ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ನಡೆದ"ಗೀತಾ ಸಂಗಮ" ಸಂಗೀತ ಕಾರ್ಯಕ್ರಮದಲ್ಲಿ ಗಾಯಕರಾದ ರಾಮಚಂದ್ರ ಹಡಪದ,ಶೃತಿ ಹಾಗೂ ಸ್ಪರ್ಶ ಅವರುಗಳ ಕಂಠದಿಂದ ಮೂಡಿ ಬಂದ ಭಾವಗೀತೆ,ಜನಪದ ಗೀತೆಗಳು ಸಂಗೀತ ಪ್ರಿಯರಿಗೆ ರಸ ದೌತಣವನ್ನೇ ಉಣಬಡಿಸಿತು.
ಕಾರ್ಯಕ್ರಮದ ನಂತರ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್ ವಿ ರಾಜಶೇಖರ್,ಸರ್ವೋದಯ ಸಂಘದ ಜಿಲ್ಲಾಧ್ಯಕ್ಷೆ ಎನ್ ಪದ್ಮ ಹಾಗೂ ಬರಹಗಾರರು ಹಾಗೂ ಶಿಕ್ಷಕಿ ಸರ್ವಮಂಗಳ ಅವರನ್ನು ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸ ಲಾಯಿತು.
ವೇದಿಕೆಯಲ್ಲಿ ಸಾಹಿತಿಗಳಾದ ಬಿ.ಆರ್.ಲಕ್ಷ್ಮಣರಾವ್,ಗೌರಿ ಕನ್ನಡ ಕಲಾ ಸಂಘದ ಅಧ್ಯಕ್ಷ ವಿ.ರವೀಂದ್ರನಾಥ್,ಪುರಸಭೆ ಮಾಜಿ ಅಧ್ಯಕ್ಷ ಅಲ್ಲಂಪಲ್ಲಿ ವೇಣು,ಲಯನ್ಸ್ ಇಸ್ತೂರಿ ಸತೀಶ್ ಕುಮಾರ್,ಜಿಎಸ್‌ಆರ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಜಿಎನ್ ಚಂದ್ರಶೇಖರ್ ರೆಡ್ಡಿ, ಗೋವಿಂದ ರಾಜು.ಕೆ, ರಾಮಾಂಜನೇಯಲು,ಲಯನ್ ಸೂರಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.