Bagepally News: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಸ್ತೆ ಸುರಕ್ಷತಾ ಮಾಸದ ಬಗ್ಗೆ ಅರಿವು
ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಂದ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗುತ್ತಿದೆ. ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ನಿಯಮಗಳನ್ನು ಪಾಲಿಸುವ ಜೊತೆಗೆ ಜಾಗರೂಕತೆಯ ವಾಹನ ಚಾಲನೆ ಅತ್ಯಗತ್ಯ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು
-
ಬಾಗೇಪಲ್ಲಿ: ಹೋಬಳಿ, ತಾಲ್ಲೂಕು ಮಟ್ಟದಲ್ಲಿ ರಸ್ತೆ ಸುರಕ್ಷತಾ ಮಾಸ ಅರಿವು ಕಾರ್ಯ ಕ್ರಮವನ್ನು ಜ.30ರವರೆಗೆ ತಾಲ್ಲೂಕಿನಾದ್ಯಂತ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಿರಿಯ ಶ್ರೇಣಿ ನ್ಯಾಯಾಧೀಶ ಮಂಜುನಾಥ ಚಾರಿ( Manjunath Chari, Chairman and Junior Judge of the Taluk Legal Services Authority) ತಿಳಿಸಿದರು.
ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಆಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ
ಪಟ್ಟಣದ ಜೆ.ಎಂ.ಎಫ್. ಸಿ ನ್ಯಾಯಾಲಯ(J.M.F. C Court)ದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ‘ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿ ದರು.
ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಂದ ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗುತ್ತಿದೆ. ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ನಿಯಮಗಳನ್ನು ಪಾಲಿಸುವ ಜೊತೆಗೆ ಜಾಗರೂಕತೆಯ ವಾಹನ ಚಾಲನೆ ಅತ್ಯಗತ್ಯ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: Bagepally News: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಸುಪ್ರೀತ್
ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಅಪಘಾತಗಳಲ್ಲಿನ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ರೀತಿಯ ಸಾವುಗಳಲ್ಲಿ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆಯೂ ಪ್ರಮುಖ ಕಾರಣವಾಗಿದೆ. ಸಂಚಾರ ನಿಯಮ ಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ಅಪಘಾತಗಳನ್ನು ತಪ್ಪಿಸಬಹುದು ಎಂದು ಹೇಳಿದರು.
ಕೆಲವು ವಾಹನ ಸವಾರರ ಅಜಾಗರೂಕತೆ ಮತ್ತು ಬೇಜವಾಬ್ದಾರಿ ಚಾಲನೆಯ ಕಾರಣದಿಂದ ಸಂಚಾರ ನಿಯಮಗಳನ್ನು ಪಾಲಿಸುತ್ತಿಲ್ಲ. ಯಾರದ್ದೋ ನಿರ್ಲಕ್ಷ್ಯ ಮತ್ತು ತಪ್ಪಿಗೆ ಮತ್ತಾರೋ ಬಲಿ ಆಗುವ ಹಾಗೂ ಅವರ ಕುಟುಂಬಗಳು ವಿನಾಕಾರಣ ಬೀದಿಗೆ ಬರುವಂತಾ ಗುತ್ತಿದೆ ಎಂದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆ ಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಸಂಚಾರ ನಿಯಮ, ಅಪಘಾತಗಳ ಸಾವು ನೋವುಗಳು ಹಾಗೂ ಸುರಕ್ಷಿತ ಮತ್ತು ಜವಾಬ್ದಾರಿಯುತ ವಾಹನ ಚಾಲನೆ ಮಾಡುವ ಬಗ್ಗೆ ಒಂದು ತಿಂಗಳ ಕಾಲ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಕೀಲರು ಸಂಘದ ಅದ್ಯಕ್ಷ ಮಂಜುನಾಥ ಆರಕ್ಷಕ ವೃತ್ತ ನಿರೀಕ್ಷಕ ಸುನಿಲ್ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ, ವಕೀಲರಾದ ಬಾಲು ನಾಯಕ್, ನಾಗಭೂಷಣ, ಸಿಬ್ಬಂದಿಗಳಾದ ಗಂಗುಲಪ್ಪ ಹಾಗೂ ಪೊಲೀಸರು ಹಾಗೂ ಸಾರ್ವಜನಿಕರು ಹಾಜರಿದ್ದರು.