ಚಿಕ್ಕಬಳ್ಳಾಪುರ: ಸತ್ಯಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ (ಪೋಷ್ ಕಾಯ್ದೆ) ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶೆ ಶಿಲ್ಪಾ ಅವರು ವಿಶಾಖಾ ಮಾರ್ಗಸೂಚಿಗಳು ಹಾಗೂ ಕಾರ್ಯಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಕೆಲಸದ ಸ್ಥಳದಲ್ಲಿ ಮಹಿಳೆಯರ ಘನತೆ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಕಾಯ್ದೆಯ ಮಹತ್ವವನ್ನು ವಿವರಿಸಿದರು.
ಇದನ್ನೂ ಓದಿ: Chikkaballapur News: ಶಿಕ್ಷಕರ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿಯಾಗುತ್ತೇವೆ: ಕೆ.ಜಿ.ಶ್ರೀನಿವಾಸ್
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್ ಮಾತನಾಡಿ, ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿ ರಚನೆ, ದೂರು ಸಲ್ಲಿಸುವ ವಿಧಾನ ಹಾಗೂ ದೂರುಗಳ ವಿಲೇವಾರಿ ಪ್ರಕ್ರಿಯೆ ಕುರಿತು ವಿವರಿಸಿದರು.
ಇದೇ ವೇಳೆ ಕಾರ್ಯಸ್ಥಳದಲ್ಲಿ ಯಾವುದೇ ರೀತಿಯ ಲೈಂಗಿಕ ಕಿರುಕುಳ ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಸ್ಥಳವನ್ನು ಸುರಕ್ಷಿತ ಹಾಗೂ ಗೌರವಯುತ ವಾತಾವರಣವನ್ನಾಗಿ ರೂಪಿಸುವಲ್ಲಿ ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಿರಬೇಕು ಎಂದು ತಿಳಿಸಲಾಯಿತು.