ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gudibande News: ಬಾಲ್ಯ ವಿವಾಹದ ಕುರಿತು ಜಾಗೃತಿ ಅಗತ್ಯ, ನಿರ್ಮೂಲನೆಗೆ ಎಲ್ಲರ ಸಹಕಾರ ಅತ್ಯಗತ್ಯ: ನಸೀಮಾ ತಹಬಸೂಮ್

ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಹಯೋಗದಲ್ಲಿ ಮಕ್ಕಳ ದಿನಾ ಚರಣೆ ಹಾಗೂ ಬಾಲ್ಯ ವಿವಾಹ, ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಬಾಲ್ಯ ವಿವಾಹದಿಂದ ಅನೇಕ ದುಷ್ಪರಿಣಾಮ ಗಳು ಸಂಭವಿಸುತ್ತವೆ. ಇದರಿಂದ ಅನೇಕ ಕುಟುಂಬಗಳು ನಾಶವಾಗುತ್ತದೆ. ಜೊತೆಗೆ ಬಾಲ್ಯ ವಿವಾಹ ಎಂಬುದು ಕಾನೂನು ರೀತ್ಯ ಅಪರಾಧವಾಗಿದೆ

ಬಾಲ್ಯ ವಿವಾಹದ ಕುರಿತು ಜಾಗೃತಿ ಅಗತ್ಯ

-

Ashok Nayak
Ashok Nayak Nov 17, 2025 12:59 AM

ಗುಡಿಬಂಡೆ: ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಬಾಲ್ಯ ವಿವಾಹ ಸಮಾಜಕ್ಕೆ ಮಾರಕ ವಾಗಿದೆ. ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಎಲ್ಲರೂ ಜಾಗೃತಗೊಂಡು, ಅದರ ನಿರ್ಮೂಲನೆಗೆ ಎಲ್ಲರೂ ಸಹಕರಿಸಬೇಕು ಎಂದು ಸಹಾಯಕ ಕಾನೂನು ಅಭಿರಕ್ಷಕಿ ನಸೀಮಾ ತಬಸೂಮ್ ತಿಳಿಸಿದರು.

ಗುಡಿಬಂಡೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬೊಮ್ಮಗಾನ ಹಳ್ಳಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಹಯೋಗದಲ್ಲಿ ಮಕ್ಕಳ ದಿನಾ ಚರಣೆ ಹಾಗೂ ಬಾಲ್ಯ ವಿವಾಹ, ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಬಾಲ್ಯ ವಿವಾಹದಿಂದ ಅನೇಕ ದುಷ್ಪರಿಣಾಮ ಗಳು ಸಂಭವಿಸುತ್ತವೆ. ಇದರಿಂದ ಅನೇಕ ಕುಟುಂಬಗಳು ನಾಶವಾಗುತ್ತದೆ. ಜೊತೆಗೆ ಬಾಲ್ಯ ವಿವಾಹ ಎಂಬುದು ಕಾನೂನು ರೀತ್ಯ ಅಪರಾಧವಾಗಿದೆ. ಬಾಲ್ಯವಿವಾಹ ನಿರ್ಮೂಲನೆ ಕುರಿತು ಎಲ್ಲರೂ ಜಾಗೃತರಾಗಬೇಕು ಎಂದರು.

ಇದನ್ನೂ ಓದಿ: Gudibande News: ಬಾಲ್ಯ ವಿವಾಹದ ಕುರಿತು ಜಾಗೃತಿ ಅಗತ್ಯ, ನಿರ್ಮೂಲನೆಗೆ ಎಲ್ಲರ ಸಹಕಾರ ಅತ್ಯಗತ್ಯ: ನಸೀಮಾ ತಹಬಸೂಮ್

ಕಾರ್ಯಕ್ರಮಕ್ಕೆ ಕಾನೂನು ಸೇವಾ ಸಮಿತಿಯ ಕಾರ್ಯನಿರ್ವಹಣಾ ಸದಸ್ಯ ಕಾರ್ಯದರ್ಶಿ ಕೆ.ಆರ್.ನಾಗಭೂಷಣ್ ರವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥರೆಡ್ಡಿ ಮಾತನಾ ಡಿದರು. ಈ ಸಮಯದಲ್ಲಿ ವಕೀಲರಾದ ನರೇಂದ್ರ, ನರಸಿಂಹಮೂರ್ತಿ, ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲೆ ಭಾಗ್ಯಮ್ಮ, ನ್ಯಾಯಾಲಯದ ಸಿಬ್ಬಂದಿಯಾದ ಸುರೇಶ್ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.