ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಹಕ್ಕುಗಳ ಜತೆಗೆ ಕರ್ತವ್ಯಗಳ ಅರಿವು ಅಗತ್ಯ: ನ್ಯಾಯಮೂರ್ತಿ ಹಂಚಾಟೆ ಸಂಜೀವ ಕುಮಾರ

ಕಳೆದ ಫೆಬ್ರವರಿಯಿಂದ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸು ತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ. ಪುಲಸಾನಿವೊಡ್ಡು ಹಾಗೂ ನಲ್ಲಗೊಂಡುಗ್ಯಾರಹಳ್ಳಿ ಗ್ರಾಮಗಳು ಮೂಲಸೌಲಭ್ಯಗಳಿಂದ ವಂಚಿತ ವಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಾದ ಅನಿತಾ ಹಾಗೂ ಕಮಲ ಮಂಜು ಸಲ್ಲಿಸಿದ ಮನವಿಯ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಗುಡಿಬಂಡೆ: ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಚಲಾಯಿಸುವುದರ ಜೊತೆಗೆ ಮೂಲ ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಪಾಲಿಸಿದಾಗ ಮಾತ್ರ ಗ್ರಾಮಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ(Karnataka High Court)ದ ಮುಖ್ಯ ನ್ಯಾಯಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತಾತ್ಮಕ ನ್ಯಾ.ಹಂಚಾಟೆ ಸಂಜೀವ ಕುಮಾರ ಹೇಳಿದರು.

ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಲಸಾನಿವೊಡ್ಡು ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋ ಜಿಸಿದ್ದ ‘ಭಾರತೀಯ ಸಂವಿಧಾನದ ತತ್ವದ ಅಡಿಯಲ್ಲಿ ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆ ಮತ್ತು ಅನುಷ್ಠಾನದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ ಆಚರಣೆ

ಕಳೆದ ಫೆಬ್ರವರಿಯಿಂದ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸು ತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ. ಪುಲಸಾನಿವೊಡ್ಡು ಹಾಗೂ ನಲ್ಲಗೊಂಡುಗ್ಯಾರಹಳ್ಳಿ ಗ್ರಾಮಗಳು ಮೂಲಸೌಲಭ್ಯಗಳಿಂದ ವಂಚಿತ ವಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಾದ ಅನಿತಾ ಹಾಗೂ ಕಮಲ ಮಂಜು ಸಲ್ಲಿಸಿದ ಮನವಿಯ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸುಮಾರು 80 ಕುಟುಂಬಗಳು ಹಾಗೂ 400ಕ್ಕೂ ಹೆಚ್ಚು ಜನರು ವಾಸಿಸುವ ಗ್ರಾಮಗಳಲ್ಲಿ ರಸ್ತೆ ಸಂಪರ್ಕ, ಶಾಲೆ, ಅಂಗನವಾಡಿ, ಕುಡಿಯುವ ನೀರು ಸೇರಿದಂತೆ ಹಲವು ಮೂಲಸೌಕರ್ಯಗಳ ಕೊರತೆ ಕಂಡುಬಂದಿದೆ. ಸರ್ಕಾರಿ ಸೇವೆಗಳು ಹಾಗೂ ವಿವಿಧ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪದಿರುವುದನ್ನೂ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಆಡಳಿತಕ್ಕೆ ಅಗತ್ಯ ಸೂಚನೆ ನೀಡಿ ಮೂಲಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

1175317 (1) ok

ಶಾಲೆ ಹಾಗೂ ಅಂಗನವಾಡಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಕಾರ್ಯ ನಡೆಯುತ್ತಿದ್ದು, ಕಟ್ಟಡದ ಸಮಸ್ಯೆಯಿಂದ ಪಾಠಪ್ರವಚನಗಳನ್ನು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೂ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸ ಲಾಗುತ್ತಿದೆ ಎಂದರು.

ಗ್ರಾಮಗಳ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ. ಗ್ರಾಮಸ್ಥರೂ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸಾರ್ವಜನಿಕ ಆಸ್ತಿಯ ರಕ್ಷಣೆ ಸೇರಿದಂತೆ ತಮ್ಮ ಮೂಲ ಕರ್ತವ್ಯಗಳನ್ನು ನಿರ್ವಹಿಸಬೇಕು. ಹಕ್ಕು ಮತ್ತು ಕರ್ತವ್ಯಗಳನ್ನು ಸಮತೋಲನದಿಂದ ನಿರ್ವಹಿಸಿ ದಾಗ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ನ್ಯಾಯಮೂರ್ತಿ ರಾಘವೇಂದ್ರ ಸೀತಾರಾಮ ಶ್ರೀವತ್ಸ ಮಾತನಾಡಿ, ಹಕ್ಕುಗಳನ್ನು ಚಲಾಯಿಸು ವಷ್ಟೇ ಕರ್ತವ್ಯಗಳನ್ನು ಪಾಲಿಸುವುದೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಹಕ್ಕು ಮತ್ತು ಕರ್ತವ್ಯಗಳ ಸಮತೋಲನದಿಂದ ಸಮಾಜ ಶಾಂತಿ, ಸೌಹಾರ್ದತೆ ಹಾಗೂ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ತಹಶೀಲ್ದಾರ್ ಸಿಗ್ಬತ್ ಉಲ್ಲಾ, ಹರೀಶ್ ಎಸ್., ತಾಲ್ಲೂಕು ಪಂಚಾಯತ್ ಇಒ ಎಂ. ನಾಗಮಣಿ, ಆರೋಗ್ಯಾಧಿಕಾರಿ ಡಾ. ಅಕ್ಷಯ್ ಶ್ರೀನಿವಾಸ್, ಬಿಇಒ ಕಾಳೇಗೌಡ, ಸಿಡಿಪಿಒ ಜಗದೀಶ್ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.